ಬುಧವಾರ, ಜೂನ್ 26, 2024
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!-ನಂದಿನಿ ಹಾಲಿನ ದರ ಏರಿಕೆ; ಎಷ್ಟು ಹೆಚ್ಚಾಗಲಿದೆ ಇಲ್ಲಿದೆ ಮಾಹಿತಿ-T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ..!

ಇಂದು ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ(Cyclone) ಅಪ್ಪಳಿಸುವ ಸಾಧ್ಯತೆ ಇದೆ. ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್‌ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ, ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿರುವವರು ಜಾಗರೂಕತೆ ವಹಿಸುವಂತೆ ರಾಜ್ಯ ಸರ್ಕಾರವು ನಿವಾಸಿಗಳನ್ನು ಒತ್ತಾಯಿಸಿದೆ. ನೈಋತ್ಯ ಮುಂಗಾರು ಮೇ 31ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ