ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ, ಆದರೆ ಹುಡುಗಿ ಒಪ್ಪಲಿಲ್ಲ: ಸಿದ್ದರಾಮಯ್ಯ
ಮೈಸೂರು: ನನಗೂ ಅಂತರ್ಜಾತಿ ವಿವಾಹವಾಗುವ(inter caste Marriage) ಆಸೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟಿದ್ದಾರೆ. ಮೈಸೂರಿನ (Mysuru) ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಎಂದು ಹೇಳಿದರು. ಈ ಮೂಲಕ ವಿದ್ಯಾರ್ಥಿ ಜೀವನದಲ್ಲಿನ ಲವ್ ಸ್ಟೋರಿಯನ್ನು ನೆನಪು ಮಾಡಿಕೊಂಡಿದ್ದಾರೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದರು. ಇದರೊಂದಿಗೆ ಪರೋಕ್ಷವಾಗಿ ಕಾಲೇಜು ದಿನಗಳಲ್ಲಿ ಓರ್ವ ಹುಡುಗಿಯನ್ನು ಇಷ್ಟಪಟ್ಟಿರುವುದನ್ನು ತಿಳಿಸಿದರು.
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ. ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು. ಈ ಮೂಲಕ ಅಂತರ್ಜಾತಿ ವಿವಾಹಗಳ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದರು.
ನೀತಿಸಂಹಿತೆ ಇದ್ದರೂ ತುರ್ತು ಕೆಲಸಗಳಿಗೆ ಆದ್ಯತೆ ನೀಡಿ, ಕಲುಷಿತ ನೀರಿಗೆ ಡಿಸಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು:ಈಬಾರಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ನೀತಿ ಸಂಹಿತೆ ಜೂನ್ ಆರರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು. ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿ ವಿಡಿಯೋ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ,ಶಿವಾನಂದ ಪಾಟೀಲ, ಚೆಲುವರಾಯಸ್ವಾಮಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಎಸ್. ಎಸ್. ಮಲ್ಲಿಕಾರ್ಜುನ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ,ಶಿವಾನಂದ ಪಾಟೀಲ, ಚೆಲುವರಾಯಸ್ವಾಮಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಎಸ್. ಎಸ್. ಮಲ್ಲಿಕಾರ್ಜುನ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.