ಗುರುವಾರ, ಡಿಸೆಂಬರ್ 26, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

Twitter
Facebook
LinkedIn
WhatsApp
ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ನಾನು ವಿಚಲಿತನಾಗಿಲ್ಲ ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ. ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ. ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನ ಶಿವಮೊಗ್ಗ, ಬೆಂಗಳೂರು, ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ? ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ.

ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು ಶಾಸಕರು ಸುನಿಲ್ ಕುಮಾರ್ ಮಾಡುವುದು ಸರಿ ಇದೆ. ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ. ಬಹಿರಂಗ ಹೇಳಿಕೆ ಕೊಡುವ ಭ್ರಷ್ಟಾಚಾರ ಆರೋಪ ಮಾಡುವ ನಾಯಕರ ಮೇಲೆ ನಿಮ್ಮ ಕ್ರಮ ಏನು? ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ, ಯಾರು ಕೆಲಸ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ. ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ? ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾ ಮಾಡಲು ಸಿಕ್ಕಿದ್ದಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ? ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನ ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ.

ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರಿಗೆ ಬೈದಿಲ್ಲ. ಇಂತಹ ವಜಾಗಳಿಗೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ಎಲ್ಲ ಹುದ್ದೆಯಿಂದ ವಜಾ ಮಾಡುತ್ತೇವೆ ಅಂದಿದ್ದಾರೆ. ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು. ಪಕ್ಷ ನನ್ನ ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist