ಗೃಹ ಸಚಿವ ಅಮಿತ್ ಶಾ ಪತ್ನಿ ಸೋನಲ್ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ
Twitter
Facebook
LinkedIn
WhatsApp
ತಿರುಪತಿ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ (Amit Shah) ಪತ್ನಿ ಸೋನಲ್ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ (Tirupati Balaji Temple) ಅಮಿತ್ ಶಾ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆಯು ಪ್ರತಿಯೊಬ್ಬರ ಜೀವನದಲ್ಲಿ ಮೇಲಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಬರೆದುಕೊಂಡಿದ್ದಾರೆ.