ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಜಯಪ್ರಕಾಶ್ ಹೆಗ್ಡೆ ಮಧ್ಯೆ ಕ್ಷೇತ್ರ ಯಾರ ತೆಕ್ಕೆಗೆ..?

Twitter
Facebook
LinkedIn
WhatsApp
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಜಯಪ್ರಕಾಶ್ ಹೆಗ್ಡೆ ಮಧ್ಯೆ ಕ್ಷೇತ್ರ ಯಾರ ತೆಕ್ಕೆಗೆ..?

ಉಡುಪಿ: ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದರೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮತ್ತು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ನಡುವಿನ ಹಣಾಹಣಿಯಲ್ಲಿ ಜಯ ಯಾರಿಗೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಈ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಾತಾವರಣವಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಲೆ ಇದ್ದುದರಿಂದ, ಅವರು ಗೆಲ್ಲುತ್ತಾರೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಈ ಬಾರಿ ಅಂಥ ವಾತಾವರಣ ಗೋಚರಿಸುತ್ತಿಲ್ಲ.

ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಹಾಗು ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಈ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಉಡುಪಿಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಚಿಕ್ಕಮಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ.

ಕಳೆದ ಬಾರಿ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. ಶೋಭಾ 3 ಲಕ್ಷ ಮತಗಳ ಅಂತರದಿಂದ ಭಾರೀ ಜಯ ಸಾಧಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಹಲವು ಲೆಕ್ಕಾಚಾರಗಳಿಂದ ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ನಡೆದಿದೆ. ಅವುಗಳಲ್ಲಿ ಜಾತಿ ಲೆಕ್ಕಾಚಾರ, ಗ್ಯಾರಂಟಿ ಯೋಜನೆ, ಅಭ್ಯರ್ಥಿಗಳ ಬಗೆಗಿನ ಒಲವುಗಳೆಲ್ಲವೂ ಸೇರಿದೆ.

ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಸರಳ ರಾಜಕಾರಣಿಯಾಗಿ ಬಿಂಬಿತವಾಗಿದ್ದಾರೆ. ಇದು ಮತದಾರರನ್ನು ಸೆಳೆಯುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಬಿಲ್ಲವ ಸಮುದಾಯದ ಮತದಾರರಿದ್ದು, ಅದೇ ಸಮುದಾಯದ ಕೋಟಾ ಶ್ರೀನಿವಾಸ ಪೂಜಾರಿಗೆ ಅತೀ ದೊಡ್ಡ ಶಕ್ತಿಯಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ನಿರ್ಣಾಯಕರಾಗಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಅಭ್ಯರ್ಥಿ ಯಾರೇ ಆದರೂ ಬಿಜೆಪಿಗೆ ಮತ ಚಲಾಯಿಸುವ ಮತದಾರರು ಕ್ಷೇತ್ರದಲ್ಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್​ಗೆ ಪ್ಲಸ್ ಪಾಯಿಂಟ್. ಹತ್ತು ವರ್ಷಗಳ ಹಿಂದೆ ಸಣ್ಣ ಅವಧಿಗೆ ಸಂಸದರಾಗಿದ್ದಾಗ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಉಡುಪಿ ಜಿಲ್ಲೆ ಉದಯಕ್ಕೆ ಕಾರಣರಾದವರು ಹಲವು ವರ್ಷಗಳಿಂದ ಅಧಿಕಾರದಿಂದ ವಂಚಿತರಾಗಿದ್ದಾರೆ ಎಂಬ ಭಾವನೆ ಜನರಲ್ಲಿದೆ. ಜಿಲ್ಲೆಯ ಪ್ರಬಲ ಬಂಟ ಸಮುದಾಯವರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಬಾರಿ ಅವರ ಸಮುದಾಯ ಕೈ ಹಿಡಿಯುವ ಸಾಧ್ಯತೆ ಹೆಚ್ಚು. ಇನ್ನು ಚಿಕ್ಕಮಗಳೂರಿನಲ್ಲಿ ಒಕ್ಕಲಿಗರು ಜಯಪ್ರಕಾಶ್ ಹೆಗ್ಡೆ ಪರ ಒಲವು ತೋರಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಭರವಸೆಗೆ ಉಡುಪಿ ಜಿಲ್ಲೆಯಲ್ಲಿ ಬೆಂಬಲ ಸಿಕ್ಕಿರಲಿಲ್ಲ. ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ ಸಿಕ್ಕಿತ್ತು. ಆದರೆ ಈ ಬಾರಿ ಗ್ಯಾರಂಟಿ ಫಲಾನುಭವಿಗಳು ಉಡುಪಿಯಲ್ಲಿಯೂ ಕಾಂಗ್ರೆಸ್ ಪರ ಮತ ನಿಂತಿದ್ದಾರೆ ಎಂಬ ಮಾತುಗಳಿವೆ.ಆದರೂ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಲಭದಲ್ಲಿ ಗೆಲ್ಲುವವರು ಯಾರು ಎಂದು ಹೇಳುವ ಪರಿಸ್ಥಿತಿ ಇಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist