ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಖಾತೆ ತೆರೆದ ಬಿಜೆಪಿ!

Twitter
Facebook
LinkedIn
WhatsApp
ಕೇರಳದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಖಾತೆ ತೆರೆದ ಬಿಜೆಪಿ!

ಲೋಕಸಭಾ ಚುನಾವಣೆಯಲ್ಲಿ (Loksabha Election) ಕೇರಳದಲ್ಲಿ  (Kerala) ಬಿಜೆಪಿ (BJP) ಮೊದಲ ಖಾತೆ ತೆರೆದಿದೆ. ತ್ರಿಶೂರ್ (Trissur) ಕ್ಷೇತ್ರದಿಂದ ಭಾರತೀಯ ಚುನಾವಣಾ ಆಯೋಗದ (ECI) ವೆಬ್‌ಸೈಟ್ ಪ್ರಕಾರ, ಮಲಯಾಳಂ (Mollywood) ಚಿತ್ರರಂಗದ ಹಿರಿಯ ನಟ ಮತ್ತು ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ (Suresh Gopi) ಅವರು  ಸಿಪಿಐ ಅಭ್ಯರ್ಥಿ ಸುನೀಲ್‌ಕುಮಾರ್ ಅವರನ್ನು ಹಿಂದಿಕ್ಕಿ ಮಧ್ಯಾಹ್ನ 12.55 ರ ಹೊತ್ತಿಗೆ 69,183 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಆರಂಭಿಕ ಫಲಿತಾಂಶಗಳು ಸುರೇಶ್ ಗೋಪಿ ಅವರಿಗೆ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಕೆ ಮುರಳೀಧರನ್ ಎಂದು ತೋರಿಸಿತ್ತು. ಚುನಾವಣಾ ಕಣದಲ್ಲಿದ್ದ ಮತ್ತೊಬ್ಬ ಅಭ್ಯರ್ಥಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸುನೀಲ್ ಕುಮಾರ್.

ಬಿಜೆಪಿ ಸರ್ಕಾರ ರಚನೆಯಾದ್ರೆ ಸಚಿವ ಸ್ಥಾನ ಗ್ಯಾರೆಂಟಿ

ಕೇರಳದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡೋದು ಅಂದರೆ ಸುಲಭದ ಮಾತು ಅಲ್ಲವೇ ಅಲ್ಲ. ಗೆಲ್ಲೋದು ದೂರದ ಮಾತು. ಸ್ಪರ್ಧೆ ಮಾಡೋದೇ ಕಷ್ಟ. ಹೀಗಿದ್ದರೂ ಕೂಡಾ ಮಾಲಿವುಡ್​ನ ಖ್ಯಾತ ನಟ, ಸುರೇಶ್ ಗೋಪಿ ಅವರು ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಆದ ಕಾರಣ ಬಿಜೆಪಿ ಸರ್ಕಾರ ರಚನೆ ಮಾಡಿದರೆ ಸುರೇಶ್ ಗೋಪಿ ಅವರಿಗೆ ಪಕ್ಕಾ ಸಚಿವ ಸ್ಥಾನ ಸಿಗಲಿದೆ.

ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2019 ರಲ್ಲಿ, ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋಲಿಸಲ್ಪಟ್ಟರು. ಮೂರನೇ ಸ್ಥಾನ ಪಡೆದಿದ್ದರು.

ಆದರೂ ಕೂಡಾ 2019ರಲ್ಲಿ ಸುರೇಶ್ ಗೋಪಿ ಚುನಾವಣೆಯಲ್ಲಿ ಸ್ಪರ್ಧಿಸಿದ ಕಾರಣ ಬಿಜೆಪಿ ತನ್ನ ಮತ ಹಂಚಿಕೆಯಲ್ಲಿ 2014 ರಲ್ಲಿ 11.1% ರಿಂದ 2019 ರಲ್ಲಿ 28.2% ಗೆ ಪ್ರಭಾವಶಾಲಿಯಾಗಿ ಏರಿಕೆ ಕಂಡಿದೆ. ಪಕ್ಷವು ದಕ್ಷಿಣ ರಾಜ್ಯದಲ್ಲಿ ಲೋಕಸಭಾ ಸ್ಥಾನವನ್ನು ಗೆದ್ದಿರಲಿಲ್ಲ. ಹಾಗಾಗಿಯೇ ಬಿಜೆಪಿ ಖಾತೆಯನ್ನು ತೆರೆಯಲು ನಟ ಸುರೇಶ್ ಗೋಪಿಯನ್ನು ಮತ್ತೊಮ್ಮೆ ಕಣಕ್ಕಿಳಿಸಿತ್ತು.

2021 ರಲ್ಲಿ, ಸುರೇಶ್ ಗೋಪಿ ಅವರು ಕೇರಳ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ. 3,806 ಮತಗಳಿಂದ ಸೋತಿದ್ದರು.

ಜನಪ್ರಿಯ ಮಲಯಾಳಂ ನಟನ ರಾಜಕೀಯ ಪ್ರಯಾಣವು ಏಪ್ರಿಲ್ 2016 ರಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಾರಂಭವಾಯಿತು. ಆಕೆಯನ್ನು ಭಾರತದ ರಾಷ್ಟ್ರಪತಿಗಳು ಪ್ರಖ್ಯಾತ ನಾಗರಿಕರ ವಿಭಾಗದಲ್ಲಿ ನಾಮನಿರ್ದೇಶನ ಮಾಡಿದರು. ನಂತರ ಅದೇ ವರ್ಷ ಅಕ್ಟೋಬರ್‌ನಲ್ಲಿ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.

ಪೊಲೀಸ್ ಪಾತ್ರಗಳಿಗೆ ಫೇಮಸ್

ಮಲಯಾಳಂ ಚಿತ್ರರಂಗದಲ್ಲಿ ಬಹಳಷ್ಟು ಕಾಲದಿಂದ ಪ್ರೇಕ್ಷಕರನ್ನು ರಂಜಿಸಿದ್ದ ಸುರೇಶ್ ಗೋಪಿ ಅವರು ಪೊಲೀಸ್ ಪಾತ್ರಗಳಿಗೆ ಫೇಮಸ್. ಅವರು ಮಾಡಿದ ಪೊಲೀಸ್ ಪಾತ್ರಗಳು ಇಂದಿಗೂ ಜನರಿಗೆ ಅತ್ಯಂತ ಪ್ರಿಯವಾಗಿವೆ. ಅಷ್ಟು ಸುಂದರವಾಗಿ ಪೊಲೀಸ್ ಪಾತ್ರ ಮಾಡಬಲ್ಲ ಮತ್ತೊಬ್ಬ ನಟ ಈಗ ಇಲ್ಲ ಎನ್ನುವುದು ಕೂಡಾ ಅಷ್ಟೇ ಸತ್ಯವಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಅಷ್ಟು ಸಕ್ರಿಯವಾಗಿಲ್ಲ. ಬದಲಾಗಿ ರಾಜಕೀಯದತ್ತ ಹೊರಳಿದ್ದಾರೆ.

ಬಾಲಿವುಡ್ ಕ್ವೀನ್ ನಟಿ ಕಂಗನಾ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರು ಕೂಡಾ ಆರಂಭಿಕ ಮತ ಎಣಿಕೆ ಸುತ್ತುಗಳಲ್ಲಿ ಲೀಡ್​ನಲ್ಲಿರುವುದು ಕಂಡು ಬಂದಿದೆ. ನಟಿ ಕೂಡಾ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist