ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳ ಪೈಪೋಟಿಯಲ್ಲಿ ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು...!

Twitter
Facebook
LinkedIn
WhatsApp
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳ ಪೈಪೋಟಿಯಲ್ಲಿ ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು...!

ದಾವಣಗೆರೆ : ದಾವಣಗೆರೆ ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಎರಡೂ ರಾಷ್ಟ್ರೀಯ ಪಕ್ಷದಿಂದ ಮಹಿಳಾ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಕಣದಲ್ಲಿದ್ದರು.

ಮಂಗಳವಾರ ದಾವಣಗೆರೆ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಗಾಯತ್ರಿ ಸಿದ್ದೇಶ್ವರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ, ಸಿದ್ದರಾಮಯ್ಯ ಆಪ್ತರಾದ ಜಿ. ಬಿ. ವಿನಯ್ ಕುಮಾರ್ ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರು ಸಹ ಸೋಲು ಕಂಡಿದ್ದಾರೆ.

ದಾವಣಗೆರೆ ಚುನಾವಣೆ ಎಂದರೆ ಜಿ. ಎಂ. ಸಿದ್ದೇಶ್ವರ ಮತ್ತು ಶಾಮನೂರು ಶಿವಶಂಕರಪ್ಪ ಕುಟುಂಬದ ನಡುವಿನ ಹೋರಾಟ. ಈ ಬಾರಿಯ ಚುನಾವಣೆಯಲ್ಲಿ ಜಿ. ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿಯಾಗಿದ್ದರು. ಶಾಮನೂರು ಶಿವಶಂಕರಪ್ಪ ಸೊಸೆ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

ಪ್ರಭಾ ಮಲ್ಲಿಕಾರ್ಜುನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್ 4,27,926 ಮತಗಳನ್ನು ಪಡೆದಿದ್ದಾರೆ. ಗಾಯತ್ರಿ ಸಿದ್ದೇಶ್ವರ 3,84,391 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಜಿ. ಬಿ. ವಿನಯ್ ಕುಮಾರ್ 27,672 ಮತಗಳನ್ನು ಪಡೆದಿದ್ದಾರೆ.

2019ರ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿಯ ಜಿ. ಎಂ. ಸಿದ್ದೇಶ್ವರ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿಯ ಚುನಾವಣೆಗೆ ಬಿಜೆಪಿ ಅವರ ಬದಲು ಪತ್ನಿ ಗಾಯತ್ರಿ ಸಿದ್ದೇಶ್ವರಗೆ ಟಿಕೆಟ್ ನೀಡಿತ್ತು. ಆದರೆ ಈ ತಂತ್ರ ಕೈ ಕೊಟ್ಟಿದ್ದು, ದಾವಣಗೆರೆ ಕಾಂಗ್ರೆಸ್ ವಶವಾಗಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಜಿ. ಎಂ. ಸಿದ್ದೇಶ್ವರ ಮತ್ತು ಶಾಮನೂರು ಶಿವಶಂಕರಪ್ಪ ಕುಟುಂಬದ ನಡುವಿನ ಹೋರಾಟ ಎಂದೇ ಖ್ಯಾತಿಗಳಿಸಿದೆ. 2004, 2009, 2014ರಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ್ ಜಿ. ಎಂ. ಸಿದ್ದೇಶ್ವರ ವಿರುದ್ಧ ಸೋತಿದ್ದಾರೆ.

2019ರಲ್ಲಿ ಕಾಂಗ್ರೆಸ್ ಹೆಚ್. ಬಿ. ಮಂಜಪ್ಪ ಕಣಕ್ಕಿಳಿದರೂ ಅವರು ಸಹ ಸೋಲು ಕಂಡಿದ್ದರು. 2024ರ ಚುನಾವಣೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರನ್ನು ಡಾ. ಪ್ರಭಾ ಮಲ್ಲಿಕಾರ್ಜುನ್ ಸೋಲಿಸುವ ಮೂಲಕ ಹಿಂದಿನ ಚುನಾವಣೆ ಸೇಡು ತೀರಿಸಿಕೊಂಡಿದ್ದಾರೆ.

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಗಳೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಮಾಯಕೊಂಡ, ಚನ್ನಗಿರಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳಿವೆ. ದಾವಣಗೆರೆ ಉತ್ತರ ಮತ್ತು ದಕ್ಷಿಣದಲ್ಲಿ ಶಾಮನೂರು ಕುಟುಂಬದವರೇ ಶಾಸಕರಾಗಿದ್ದಾರೆ.

ಹರಪನಹಳ್ಳಿಯಲ್ಲಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಬೆಂಬಲಿಸುತ್ತಾರೆ. ಹರಿಹರ ಶಾಸಕರು ಬಿ. ಪಿ. ಹರೀಶ್ (ಬಿಜೆಪಿ). ಈ ಅಂಶದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯಕವಾಗಿದೆ. ಡಾ. ಪ್ರಭಾ ಮಲ್ಲಿಕಾರ್ಜುನ್ ಪತಿ ಎಸ್. ಎಸ್. ಮಲ್ಲಿಕಾರ್ಜುನ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಶಾಮನೂರು ಶಿವಶಂಕರಪ್ಪ ಸಹ ಹಾಲಿ ಶಾಸಕರು.

ಶಾಮನೂರು ಕುಟುಂಬದ ಪ್ರಭಾವ, ಪ್ರಭಾ ಮಲ್ಲಿಕಾರ್ಜುನ್ ಮಾಡುವ ಸಮಾಜ ಸೇವಾ ಚಟುವಟಿಕೆಗಳು ಅವರ ಗೆಲುವು ಸುಲಭವಾಗಿದೆ. ದಾವಣಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಮಹಿಳೆಯೊಬ್ಬರು ಸಂಸದರಾಗಿ ಆಯ್ಕೆಯಾಗಿ, ಇತಿಹಾಸ ನಿರ್ಮಾಣ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist