ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ..!

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ..!

ಬೆಂಗಳೂರು: ಬಿಜೆಪಿ ಕಾರ್ಯಕರ್ತ (BJP leader) ಪ್ರವೀಣ್‌ ನೆಟ್ಟಾರು ಕೊಲೆ (Praveen Nettaru Murder) ಮಾಡಿದ ಮತ್ತೊಬ್ಬ ಆರೋಪಿಯನ್ನು (Suspect) ಬಂಧಿಸಲಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ ಈತ ವಿದೇಶಕ್ಕೆ ಪರಾರಿಯಾಗಲು ಹೊರಟಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ.

ಕೊಲೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ಸೂಚನೆ ಪ್ರಕಾರ ಭಾರತಕ್ಕೆ ಮರಳಿದ್ದ. ಇತ್ತೀಚೆಗೆ ಬಂಧಿತನಾಗಿದ್ದ ಮುಸ್ತಫಾ ಪೈಚಾರ್ ಎಂಬ ಆರೋಪಿಗೆ ಸಕಲೇಶಪುರದಲ್ಲಿ ವಾಸ್ತವ್ಯ ಹೂಡಲು ಸಹಕರಿಸಿದ್ದ. ಸದ್ಯ ಪ್ರಕರಣ ಸಂಬಂಧ 19ನೇ ಆರೋಪಿಯನ್ನು NIA ಬಂಧಿಸಿದೆ.

 

ಬಿಜೆಪಿ ಕಾರ್ಯಕರ್ತ, ದಕ್ಷಿಣ ಕನ್ನಡದ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder Case) ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಹಾಸನ ಜಿಲ್ಲೆಯಲ್ಲಿ (Hassan news) ಎನ್‌ಐಎ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಸುಳ್ಯ ಮೂಲದ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ ಬಂಧಿತರು. ಇವರಲ್ಲಿ ಮುಸ್ತಾಫನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಸಕಲೇಶಪುರ ತಾಲ್ಲೂಕಿನ ಆನೆಮಹಲ್‌ ಎಂಬಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ. ಆನೆಮಹಲ್‌ನ ಸಿರಾಜ್ ಎಂಬವರ ಬಳಿ ಮುಸ್ತಾಫ ಪೈಚಾರ್ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನೂ ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫನಿಗಾಗಿ ಎನ್‌ಐಎ ವರ್ಷಗಳಿಂದ ಹುಡುಕುತ್ತಿತ್ತು. ಸುಳ್ಯದ ಶಾಂತಿನಗರ ನಿವಾಸಿಯಾದ ಮುಸ್ತಾಫ ಪ್ರಕರಣದ A4 ಆಗಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಡಗಿದ್ದ ಆರೋಪಿಯನ್ನು NIA ಇನ್‌ಸ್ಪೆಕ್ಟರ್ ಷಣ್ಮುಗಂ ನೇತೃತ್ವದ ತಂಡ ಬಂಧಿಸಿದೆ. ಆರೋಪಿಯನ್ನು ತನಿಖೆಗಾಗಿ ಬೆಂಗಳೂರು ಎನ್ಐಎ ಕಚೇರಿಯತ್ತ ಕೊಂಡೊಯ್ಯಲಾಗಿದೆ.

ಬೆಳ್ಳಾರೆ ಪರಿಸರದಲ್ಲಿ ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ ಗಮನ ಸೆಳೆದಿದ್ದ ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜುಲೈ 26ರಂದು ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ಸಂಬಂಧ ಪಿಎಫ್‌ಐ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆನ್ನಲಾದ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಈ ನಡುವೆ, ಹಿಂದೂ ಕಾರ್ಯಕರ್ತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಚಾರ್ಜ್‌ಶೀಟ್‌ ಸಲ್ಲಿಕೆ

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist