ಸೋಮವಾರ, ಜುಲೈ 1, 2024
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಗನಾಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡಿದ್ದ ಸಿಬ್ಬಂದಿಗೆ ನಾನು ಕೆಲಸ ಕೊಡುತ್ತೇನೆ; ಗಾಯಕ ವಿಶಾಲ್ ದದ್ಲಾನಿ

Twitter
Facebook
LinkedIn
WhatsApp
ಕಂಗನಾಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡಿದ್ದ ಸಿಬ್ಬಂದಿಗೆ ನಾನು ಕೆಲಸ ಕೊಡುತ್ತೇನೆ; ಗಾಯಕ ವಿಶಾಲ್ ದದ್ಲಾನಿ

ನಟಿ, ಸಂಸದೆ ಕಂಗನಾ ರಣಾವತ್​ (Kangana Ranaut) ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕಂಗನಾ ಅವರು ಬಾಲಿವುಡ್​ನಲ್ಲಿ ಅನೇಕರ ವಿರೋಧ ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ಕಂಗನಾರ ಕೆನ್ನೆಗೆ ಬಾರಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರ ಪರವಾಗಿಯೂ ಕೆಲವರು ಮಾತನಾಡುತ್ತಿದ್ದಾರೆ. ಕುಲ್ವಿಂದರ್​ ಕೌರ್​ ಅವರಿಗೆ ಉದ್ಯೋಗ ನೀಡಲು ಜಯಪ್ರಿಯ ಗಾಯಕ ವಿಶಾಲ್​ ದದ್ಲಾನಿ ಮುಂದೆ ಬಂದಿದ್ದಾರೆ.

ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.

‘ಸ್ಕ್ಯಾನ್​ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್​ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್​ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾಯಿತು. ಕುಲ್ವಿಂದರ್​ ಕೌರ್​ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ ಉತ್ತಮ ಉದ್ಯೋಗ ನೀಡುತ್ತೇನೆ’ ಎಂದು ವಿಶಾಲ್​ ದದ್ಲಾನಿ ಭರವಸೆ ನೀಡಿದ್ದಾರೆ.

ಘಟನೆಗೆ ಕಂಗನಾ ಪ್ರತಿಕ್ರಿಯೆ:

ಗುರುವಾರ (ಜೂನ್​ 6) ಚಂಡಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಆದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಮಸ್ಕಾರ ಸ್ನೇಹಿತರೇ. ಹಿತೈಷಿಗಳು ಹಾಗೂ ಮಾಧ್ಯಮದವರಿಂದ ನನಗೆ ಅನೇಕ ಕರೆಗಳು ಬರುತ್ತಿವೆ. ನಾನೀಗ ಸುರಕ್ಷಿತವಾಗಿದ್ದೇನೆ. ಚಂಡಿಗಢ ಏರ್​ಪೋರ್ಟ್​ನಲ್ಲಿ ಸೆಕ್ಯುರಿಟಿ ಚೆಕ್​ ಮಾಡುವಾಗ ಈ ಘಟನೆ ನಡೆಯಿತು. ಸೆಕ್ಯುರಿಟಿ ಚೆಕ್​ ಮುಗಿಸಿ ನಾನು ಮುಂದಕ್ಕೆ ಸಾಗುವಾಗ ಪಕ್ಕದ ಕ್ಯಾಬಿನ್​ನಲ್ಲಿ ಇದ್ದ ಸಿಐಎಸ್​ಎಫ್​ ಭದ್ರತಾ ಸಿಬ್ಬಂದಿ ಬಂದು ನನ್ನ ಮುಖಕ್ಕೆ ಹೊಡೆದರು ಹಾಗೂ ನನಗೆ ಬೈಯ್ಯಲು ಶುರುಮಾಡಿದರು. ಯಾಕೆ ಹೀಗೆ ಮಾಡಿದ್ರಿ ಅಂತ ನಾನು ಅವರಿಗೆ ಕೇಳಿದೆ. ರೈತರ ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ಅವರು ಹೇಳಿದರು. ನಾನು ಸುರಕ್ಷಿತವಾಗಿದ್ದೇನೆ. ಆದರೆ ಪಂಜಾಬ್​ನಲ್ಲಿ ಹೆಚ್ಚುತ್ತಿರುವ ಉಗ್ರವಾದ ಹಾಗೂ ಆತಂಕವಾದವನ್ನು ನಾವು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ನನ್ನ ಕಳಕಳಿ ಇರುವುದು. ಧನ್ಯವಾದ’ ಎಂದು ಕಂಗನಾ ವಿಡಿಯೋ ಮೂಲಕ ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ