ಕರಾವಳಿಯಲ್ಲಿ ಭಾರಿ ಮಳೆ ಹಿನ್ನೆಲೆ ನಾಳೆ(ಜು.9) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯುಸಿವರೆಗೆ ರಜೆ ಘೋಷಣೆ.!
ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.9) ಶಾಲಾ- ಪಿಯು ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)/ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.
ಭಾರಿ ಮಳೆ: ಜುಲೈ 09 ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ: ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.