ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಶೋಷಿತ ಸಮುದಾಯದ ಹಣವನ್ನ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ (Dalit Organization Protest) ನಡೆಸಿದೆ.
Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ
Shiroor, ಜು.24: ಭಾರೀ ಮಳೆಯಿಂದಾಗಿ ಶಿರೂರುಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನು ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ. ಆದ್ರೆ, ಚಾಲಕ ಅರ್ಜುನ್ ಟ್ರಕ್ನಲ್ಲಿ ಸಿಲುಕಿಕೊಂಡಿದ್ದಾರಾ ಅಥವಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರಾ ಎನ್ನುವುದು ಇನ್ನು ತಿಳಿದುಬಂದಿಲ್ಲ. ಸದ್ಯಕ್ಕೆ ನದಿಯಿಂದ ಟ್ರಕ್ ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.
ಇಂದು(ಬುಧವಾರ) ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ಫೋಕ್ಲೇನ್ ಬಕೆಟ್ಗೆ ಕಬ್ಬಿಣ ಬಡಿದಿದೆ. ಈ ಹಿನ್ನಲೆ ನದಿಯಲ್ಲಿ ವಾಹನ ಒಂದು ಇರುವುದು ಖಚಿತ ಆಗುತ್ತಿದ್ದಂತೆ, ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ನಾರಾಯಣ ಧಾವಿಸಿದ್ದಾರೆ. ಇದೀಗ ಕಾರ್ಯಾಚರಣೆ ತಿವ್ರಗೊಂಡಿದ್ದು, ಆ ವಾಹನ ಲಾರಿನಾ ಎಂಬ ಪ್ರಶ್ನೆ ಮುಡುತ್ತಿದೆ.
ಈ ಕುರಿತು ಮಾತನಾಡಿದ ಶಾಸಕ ಸತೀಶ್ ಸೈಲ್, ‘ಲಾರಿ ಇದೆ ಎನ್ನಲಾದ ಸ್ಥಳಕ್ಕೆ ಹೊಗಿ ಬಂದಿದ್ದೇನೆ. ‘ಬೆಟ್ಟನ ಲೈನ್ ಅವರ ಕೊಟ್ಟ ಲ್ಯಾಂಡ್ನಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅಧಿಕಾರಿಗಳು ಲಾರಿ ಇದೆ ಎನ್ನಲಾಗುತ್ತಿದೆ. ಆದರೆ, ನಮಗೆ ಗಾಡಿ ಇರುವುದು ಕಾಣಿಸುತ್ತಿಲ್ಲ ಎಂದಿದ್ದಾರೆ.
ಒಂದೆಡೆ ಕೇರಳದಲ್ಲಿ ಅರ್ಜುನ್ ಬದುಕಿ ಬರಲಿ ಎಂದು ಇಡೀ ರಾಜ್ಯವೇ ಪ್ರಾರ್ಥನೆ ಮಾಡುತ್ತಿದೆ. ಇನ್ನು ಜಿಲ್ಲಾಡಳಿತ ಕಾರ್ಯಾಚರಣೆ ನಿಧಾನಗತಿಯಲ್ಲಿ ಮಾಡುತ್ತಿದೆ ಎಂದು ಟ್ರಕ್ ಚಾಲಕ ಅರ್ಜುನ್ ಕುಟುಂಬದ ಸದಸ್ಯರು ಕೋರ್ಟ್ ಮೆಟ್ಟಿಲೇರಿದರೇ, ಬೆಂಗಳೂರಿನ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಾರ್ಯಾಚರಣೆಯ ವರದಿ ನೀಡುವಂತೆ ಸೂಚಿಸಿತ್ತು. ಹೀಗಾಗಿ ಜಿಲ್ಲಾಡಳಿತ ಮತ್ತಷ್ಟು ಅಲರ್ಟ್ ಆಗಿದ್ದು, ಶಿರೂರು ಭಾಗದಲ್ಲಿ ಶವ ಶೋಧದ ಜೊತೆ ಅರ್ಜುನ್ಗಾಗಿ ಶೋಧಕಾರ್ಯಕ್ಕೆ ವೇಗ ನೀಡಲಾಗಿದೆ.
ಇನ್ನು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡ್ಡ ಕುಸಿಯುವ ಕುರಿತು ಭೂ ವಿಜ್ಞಾನಿಗಳು ವರದಿ ನೀಡಿದ್ದಾರೆ. ಜೊತೆಗೆ ಶಿರೂರಿನಲ್ಲಿ ಮತ್ತೆ ಭೂ ಕುಸಿತವಾಗುವ ಎಚ್ಚರಿಕೆ ನೀಡಲಾಗಿದೆ. ಅದರಂತೆ ಜಿಲ್ಲೆಯ 34 ಜನ ವಸತಿ ಪ್ರದೇಶಗಳಲ್ಲಿ ಭೂ ಕುಸಿತವಾಗುವ ಆತಂಕವಿದೆ. ಜಿಲ್ಲೆಯಲ್ಲಿ ಈವರೆಗೆ ಭೂ ಕುಸಿತದಲ್ಲಿ 39 ಜನರ ಸಾವಾಗಿದೆ.ಈ ಹಿನ್ನಲೆ ಜಿಲ್ಲೆಯ ಜನ ಭೂ ಕುಸಿತದ ಭಯದಲ್ಲಿ ಬಿಸಿ ಕೆಂಡವನ್ನು ಕೈಯಲ್ಲಿ ಹಿಡಿದಂತೆ ಬದುಕುವಂತಾಗಿದೆ.
ಸರ್ಕಾರದ ವಿರುದ್ಧ ದಲಿತ ಸಂಘ ಪ್ರತಿಭಟನೆ:
ಚನ್ನಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಮುಖಂಡರು (Dalits Leaders), ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರಾಜ್ಯ ಸರ್ಕಾರ (Karnataka Govt) ದಲಿತ ವಿರೋಧಿ ನಡೆಯನ್ನ ಅನುಸರಿಸುತ್ತಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗೆ 52,000 ಕೋಟಿ ರೂ. ಮೀಸಲಿಟಿದ್ದೇವೆ, SCSP-TSP ಯೋಜನೆಗೆ (SCSP TSP Scheme) 32,191,46 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಆಯವ್ಯಯದಲ್ಲಿ ಹೇಳಿತ್ತು. ಆದ್ರೆ ಗ್ಯಾರಂಟಿ ಯೋಜನೆಗಳಿಗೆ SCSP-TSP ಯೋಜನೆ ಹಣವನ್ನ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟರ ಸಮುದಾಯಕ್ಕೆ ಅನ್ಯಾಯ ಮಾಡ್ತಿದೆ. ಹಾಗಾಗಿ ಕೂಡಲೇ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ವಾಪಸ್ಸ್ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡುವುದುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.