ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IND vs SL: ಸೋತ ಭಾರತ, 27 ವರ್ಷಗಳ ಬಳಿಕ ಸರಣಿ ಗೆದ್ದ ಶ್ರೀಲಂಕಾ

Twitter
Facebook
LinkedIn
WhatsApp
ind vs sl 3rd odi highlights 112353634

IND vs SL: ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಬರೊಬ್ಬರಿ 110 ರನ್ ಗಳ ಜಯಭೇರಿ ಭಾರಿಸಿದ್ದು ಆ ಮೂಲಕ 2-0 ಅಂತರದಲ್ಲಿ ಐತಿಹಾಸಿಕ ಸರಣಿ ಜಯ ಸಾಧಿಸಿದೆ. ಟಿ20 ವಿಶ್ವಕಪ್‌ ಗೆದ್ದ ಸಂಭ್ರಮದಲ್ಲಿ ಶ್ರೀಲಂಕಾ ಪ್ರವಾಸಕ್ಕೆ (IND vs SL) ಬಂದಿದ್ದ ರೋಹಿತ್ ಶರ್ಮಾ ನಾಯಕತ್ವದ ಭಾರತಕ್ಕೆ ಭಾರಿ ನಿರಾಶೆಯಾಗಿದೆ. ಸರಣಿ ಆರಂಭಕ್ಕೂ ಮುನ್ನ ಗೆಲುವಿನ ಫೇವರೇಟ್ ಎನಿಸಿಕೊಂಡಿದ್ದ ರೋಹಿತ್ ಪಡೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಮುಜುಗರದ ಸೋಲಿಗೆ ಕೊರಳೊಡ್ಡಿದೆ. 

ಟಿ20 ಸರಣಿ ಗೆಲುವಿನ ಬಳಿಕ ಏಕದಿನ ಸರಣಿಯನ್ನು ಸುಲಭವಾಗಿ ಗೆದ್ದುಕೊಳ್ಳುವ ಲೆಕ್ಕಾಚಾರ ಹಾಕಿಕೊಂಡಿದ್ದ ಟೀಮ್‌ ಇಂಡಿಯಾಗೆ ಶ್ರೀಲಂಕಾ ಸ್ಪಿನ್ನರ್‌ಗಳು ಆಘಾತ ನೀಡಿದ್ದಾರೆ. ಮೂರನೇ ಪಂದ್ಯದಲ್ಲಿಯೂ ಸೋಲುವ ಮೂಲಕ ಭಾರತ ತಂಡ, 27 ವರ್ಷಗಳ ಬಳಿಕ ಶ್ರೀಲಂಕಾ ಎದುರು ಏಕದಿನ ಸರಣಿಯನ್ನು ಸೋತಿದೆ.

ಇಡೀ ಸರಣಿಯಲ್ಲಿ ಟೀಂ ಇಂಡಿಯಾ 8ನೇ ಕ್ರಮಾಂಕದವರೆಗೂ ಬ್ಯಾಟ್ಸ್​ಮನ್​ಗಳನ್ನೂ ಹೊಂದಿದ್ದರೂ, ಮೂರೂ ಪಂದ್ಯಗಳಲ್ಲಿ ಕೇವಲ 250 ಕ್ಕೂ ಕಡಿಮೆ ಟಾರ್ಗೆಟ್ ಅನ್ನು ಬೆನ್ನಟ್ಟಲು ಸಾಧ್ಯವಾಗದೆ ಸೋಲೊಪ್ಪಿಕೊಂಡಿತು. ಅಲ್ಲದೆ ಚಾಂಪಿಯನ್ಸ್​ ಟ್ರೋಫಿಗೂ ಮುನ್ನ ಟೀಂ ಇಂಡಿಯಾದ ಈ ಬ್ಯಾಟಿಂಗ್ ವೈಫಲ್ಯ ತಂಡದ ನೂತನ ಕೋಚ್ ಗೌತಮ್ ಗಂಭೀರ್ ಅವರನ್ನು ಚಿಂತೆಗೀಡುಮಾಡಿದೆ.

ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ಆವಿಷ್ಕಾ ಫರ್ನಾಂಡೊ (96 ರನ್) ಅವರ ಬ್ಯಾಟಿಂಗ್‌ ಹಾಗೂ ದುನಿತ್ ವೆಲ್ಲಾಳಗೆ (27ಕ್ಕೆ 5) ಅವರ ಸ್ಪಿನ್‌ ಮೋಡಿಯ ಸಹಾಯದಿಂದ ಶ್ರೀಲಂಕಾ ತಂಡ ಮೂರನೇ ಒಡಿಐ ಪಂದ್ಯದಲ್ಲಿ ಬಲಿಷ್ಠ ಭಾರತದ ಎದುರು 110 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಮುಡಿಗೇರಿಸಿಕೊಂಡಿತು. 

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಉತ್ತಮ ಆರಂಭ ಪಡೆಯಿತು. ಪಥುಮ್‌ ನಿಸ್ಸಾಂಕ, ಆವಿಷ್ಕ ಫರ್ನಾಂಡೋ ಹಾಗೂ ಕುಶಾಲ್‌ ಮೆಂಡಿಸ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. 

ಆದರೆ, ನಂತರ ಬಂದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಲಂಕಾ ಪರ ಪಾತುಂ ನಿಸ್ಸಾಂಕ 45 ರನ್‌, ಅವಿಷ್ಕಾ ಫರ್ನಾಂಡೋ 96 ರನ್‌ (102, 9 ಬೌಂಡರಿ, 2 ಸಿಕ್ಸರ್), ಕುಸಲ್ ಮೆಂಡಿಸ್ 59 ರನ್‌, ಚರಿತ್ ಅಸಲಂಕಾ 10 ರನ್‌, ಜನಿತ್ ಲಿಯಾನಗೆ 8 ರನ್‌, ದುನಿತ್ ವೆಲ್ಲಲಾಗೆ 2 ರನ್‌, ಕಮಿಂಡು ಮೆಂಡಿಸ್ 23 ರನ್‌, ಮಹೀಶ್‌ ತೀಕ್ಷಣ 3 ರನ್‌ ಗಳಿಸಿ ಅಜೇಯರಾಗುಳಿದರು. 

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲ್ದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. 

ಶ್ರೀಲಂಕಾ ನೀಡಿದ್ದ 248 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ದುನಿತ್ ವೆಲ್ಲಾಳಗೆ ಸ್ಪಿನ್‌ ಮೋಡಿಗೆ ನಲುಗಿ 26.1 ಓವರ್‌ಗಳಿಗೆ ಕೇವಲ 138 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ನಾಯಕ ರೋಹಿತ್ ಶರ್ಮಾ 35 ರನ್‌ ಗಳಿಸಿ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಕೊನೆಯಲ್ಲಿ ಅಲ್ಪ ಹೋರಾಟ ನಡೆಸಿದ್ದ ವಾಷಿಂಗ್ಟನ್‌ ಸುಂದರ್‌ 25 ಎಸೆತಗಳಲ್ಲಿ 30 ರನ್‌ ಗಳಿಸಿದರು.

ಕೊಲಂಬೊದ ಸ್ಪಿನ್‌ ಸ್ನೇಹಿ ಪಿಚ್‌ನಲ್ಲಿ ಭಾರತ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳು ಮತ್ತೊಮ್ಮೆ ಕೈಕೊಟ್ಟರು. ರೋಹಿತ್‌ ಶರ್ಮಾ ಬಿಟ್ಟರೆ ಇನ್ನುಳಿದ ಬ್ಯಾಟರ್‌ಗಳು ಸ್ಪಿನ್ನರ್‌ಗಳ ಎದುರು ಪರದಾಟ ನಡೆಸಿದರು.

ಶುಭಮನ್ ಗಿಲ್‌ (6) , ರಿಷಭ್‌ ಪಂತ್‌ (6), ಶ್ರೇಯಸ್‌ ಅಯ್ಯರ್‌ (8), ಅಕ್ಷರ್‌ ಪಟೇಲ್‌ (2), ರಿಯಾನ್‌ ಪರಾಗ್‌ (15) ಹಾಗೂ ಶಿವಂ ದುಬೆ (9) ವೈಫಲ್ಯ ಅನುಭವಿಸಿದರು. ಆದರೆ, ವಿರಾಟ್‌ ಕೊಹ್ಲಿ (20) ಸಿಕ್ಕ ಉತ್ತಮ ಆರಂಭದಲ್ಲಿ ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ಎಡವಿದರು. ಆದರೆ, ಕೊನೆಯಲ್ಲಿ ವಾಷಿಂಗ್ಟನ್‌ ಸುಂದರ್‌ 30 ರನ್‌ ಗಳಿಸಿ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಶ್ರೀಲಂಕಾ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ದುನಿತ್‌ ವೆಲ್ಲಾಳಗೆ 5.1 ಓವರ್‌ಗಳಿಗೆ ಕೇವಲ 27 ರನ್‌ ನೀಡಿ 5 ವಿಕೆಟ್‌ಗಳ ಸಾಧನೆ ಮಾಡಿದರು. ಇವರಿಗೆ ಸಾಥ್‌ ನೀಡಿದ್ದ ಮಹೇಶ್‌ ತೀಕ್ಷಣ ಮತ್ತು ಜೆಫ್ರಿ ವಾಂಡರ್ಸೆ ತಲಾ ಎರಡು ವಿಕೆಟ್‌ಗಳನ್ನು ಕಿತ್ತರು.

ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಬಿಟ್ಟರೆ ಟೀಂ ಇಂಡಿಯಾ ಪರ ಯಾವ ಬ್ಯಾಟ್ಸ್​ಮನ್​ಗೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಇಡೀ ಸರಣಿಯಲ್ಲಿ 157 ರನ್ ಕಲೆಹಾಕಿ ಭಾರತದ ಪರ ಸರಣಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಉಳಿದಂತೆ ಅಕ್ಷರ್ ಪಟೇಲ್ 79 ರನ್, ವಿರಾಟ್ ಕೊಹ್ಲಿ ಕೇವಲ 58 ರನ್, ಆರಂಭಿಕ ಶುಭ್​ಮನ್ ಗಿಲ್ 57, ಸುಂದರ್ 50 ರನ್ ಕಲೆಹಾಕಿದರು. ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ಕೆಎಲ್ ರಾಹುಲ್ 31 ರನ್ ಮತ್ತು ಅಯ್ಯರ್ ಕೇವಲ 38 ರನ್ ಕೊಡುಗೆ ನೀಡಿದರು. ಇದನ್ನು ಗಮನಿಸಿದರೆ ತಂಡದ ಕೆಟ್ಟ ಬ್ಯಾಟಿಂಗ್ನಿಂದಾಗಿಯೇ ಏಕದಿನ ಸರಣಿ ಕೈತಪ್ಪಿತು ಎಂದರೆ ತಪ್ಪಾಗಲಾರದು.

ಶ್ರೀಲಂಕಾಗೆ ಐತಿಹಾಸಿಕ ಸರಣಿ ಜಯ

ಇನ್ನು ಈ ಪಂದ್ಯದ ಗೆಲುವಿನ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು ಶ್ರೀಲಂಕಾ ತಂಡ 2-0 ಅಂತರಲ್ಲಿ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಆ ಮೂಲಕ ಐತಿಹಾಸಿಕ ಸರಣಿ ಜಯ ಸಾಧಿಸಿದೆ. 1997ರ ಬಳಿಕ ಶ್ರೀಲಂಕಾ ಭಾರತದ ವಿರುದ್ಧ ಯಾವುದೇ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದಿರಲಿಲ್ಲ. ಆದರೆ ಇದೀಗ ಅಂದರೆ ಬರೊಬ್ಬರಿ 27 ವರ್ಷಗಳ ಆ ಕಳಪೆ ದಾಖಲೆಯನ್ನು ಶ್ರೀಲಂಕಾ ಮುರಿದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist