ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ; ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ ಅಸಂವಿಧಾನಿಕ - ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಮೋದಾದೇವಿ ಆಕ್ರೋಶ

Twitter
Facebook
LinkedIn
WhatsApp
ಚಾಮುಂಡೇಶ್ವರಿ ದೇವಸ್ಥಾನ - ಪ್ರಮೋದಾದೇವಿ

ಮೈಸೂರು: ಚಾಮುಂಡೇಶ್ವರಿ ಬೆಟ್ಟ ಪ್ರಾಧಿಕಾರ ವಿಚಾರಕ್ಕೆ (ಚಾಮುಂಡೇಶ್ವರಿ ದೇವಸ್ಥಾನ) ಸಂಬಂಧಿಸಿದಂತೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹೇಳದೆಯೇ ಅವರ ವಿರುದ್ಧ ಪ್ರಮೋದಾ ದೇವಿ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ.

ಚಾಮುಂಡೇಶ್ವರಿ ದೇವಿ ರಾಜಮನೆತನದ ಅಧಿದೇವತೆಯಾಗಿದ್ದು, ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಇತರ ದೇವಾಲಯಗಳು ಕುಟುಂಬದ ಖಾಸಗಿ ಆಸ್ತಿಗಳಾಗಿವೆ. ಆದರೆ, ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆಯ ನೆಪದಲ್ಲಿ ದೇವಾಲಯಗಳ ಮಾಲೀಕತ್ವ, ನಿಯಂತ್ರಣ ಮತ್ತು ನಿರ್ವಹಣೆಯನ್ನು ಸ್ವಾಧೀನಪಡಿಸಿಕೊಳ್ಳಲು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಅನ್ನು ಜಾರಿಗೆ ತಂದಿದೆ. ಈ ಕಾಯ್ದೆಯ ವಿರುದ್ದ ನಾವು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಾಧಿಕಾರದ ರಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಈ ಕಾಯಿದೆ ಅಸಂವಿಧಾನಿಕ ಎಂದು ಹೇಳಿದರು.

ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ರಾಜಮನೆತನ ಆಕ್ಷೇಪ ವ್ಯಕ್ತಪಡಿಸಿದೆ. ಹೀಗಾಗಿ ರಾಜವಂಶಸ್ಥರು ಕೋರ್ಟ್ ಮೆಟ್ಟಿಲೇರಿದ್ದು, ಪ್ರಾಧಿಕಾರ ರಚನೆಗೆ ತಡೆಯಾಜ್ಞೆ ತಂದಿದ್ದಾರೆ. ಈ ಬಗ್ಗೆ ಇಂದು ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ , ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನುಬದ್ಧವಲ್ಲ. ದೇಗುಲದ ನಿರ್ವಹಣೆ ನಮಗೆ ನೀಡಿದರೆ ನಾವು ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ಪ್ರಾಧಿಕಾರಕ್ಕೆ ವಿರೋಧವಿದೆ, ಅದಕ್ಕೆ ಕೋರ್ಟ್‌ ಮೊರೆ ಹೋಗಲಾಗಿದೆ. ಪ್ರಾಧಿಕಾರದ ಹೆಸರಲ್ಲಿ ಸರ್ಕಾರ ರೂಲಿಂಗ್ ಮಾಡಲು ಆಗುವುದಿಲ್ಲ. ದೇವಸ್ಥಾನದಲ್ಲಿ ಸಮಸ್ಯೆ ಆದಾಗ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ತಿಳಿಸಿದ್ದಾರೆ.

ಖಾಸಗಿ ಪ್ರಾಪರ್ಟಿ ಯಾವುದು ಅಂತಾ ರಾಜ್ಯ ಸರ್ಕಾರಕ್ಕೆ ಗೊತ್ತಿದೆ. 2001ರ ಕೇಸ್ ಪೆಂಡಿಗ್ ಇದೆ, ಇದಕ್ಕೂ ಮೊದಲೇ ಪ್ರಾಧಿಕಾರ ರಚನೆ ಏಕೆ? 2001ರ ಕೇಸ್ ಕ್ಲಿಯರ್ ಆಗಲಿ. 1974ರಲ್ಲಿ ನಿರ್ವಹಣೆ ಮಾಡಲು ಕಷ್ಟ ಅಂತಾ ಪತ್ರ ಬರೆದಿದ್ದು ನಿಜ. ಅಂದು ಬೇರೆ ಬೇರೆ ಕಾರಣ ಇತ್ತು. ಆ ರೀತಿ ಮ್ಯಾನೇಜ್ ಮಾಡಿ ಅಂತಾ ಕೊಟ್ಟಾಗ ನಿರ್ವಹಣೆ ಮಾಡಲಿ. ಆದರೆ ನೀವೇ ಸ್ವಂತ ಮಾಡಿಕೊಳ್ಳಿ ಅಂತಾ ನಾವು ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

2001ರ ಕೇಸ್‌ನ ತೀರ್ಪು ನಮ್ಮ ಪರ ಬಂದರೆ ನಾವೇ ನಿರ್ವಹಿಸುತ್ತೇವೆ. ಪೂರ್ವಜರ ಹಾದಿಯಲ್ಲೇ ಸಾಗುತ್ತಿದ್ದೇವೆ, ಬೇರೆ ಮಾರ್ಗದಲ್ಲಿ ಹೋಗಲ್ಲ. ಚಾಮುಂಡಿಬೆಟ್ಟ ಉಳಿಸಿಕೊಳ್ಳಲು ಹೊರಟಿದ್ದೇವೆ, ಬೆಟ್ಟ ಬೆಟ್ಟದ ರೀತಿ ಇರಲಿ. ವಯನಾಡು, ಕೊಡಗು ರೀತಿ ಆಗದೆ ಇರಲಿ ಎನ್ನುವುದು ನಮ್ಮ ಉದ್ದೇಶ. 

1950ರಲ್ಲಿ ಖಾಸಗಿ ಪ್ರಾಪರ್ಟಿ ಲಿಸ್ಟ್ ಮಾಡಿದ್ದರು, ಖರಾಬು ಇರಲಿ ಏನೇ ಇರಲಿ, ಆವಾಗ ಲಿಸ್ಟ್‌ನಲ್ಲಿ ಕೊಟ್ಟಿದ್ದು ಬಿಟ್ಟು ಬೇರೇನೂ ನಾವು ಇಟ್ಟುಕೊಂಡಿಲ್ಲ. ಬೇರೆ ಏನನ್ನೂ ಕೇಳುತಿಲ್ಲ, ಅನೇಕ ಕಾರ್ಖಾನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಅದನ್ನು ಕೇಳಿದ್ದೇವಾ? ಸರ್ಕಾರ ಬದಲಾದಾಗ ಪರಿಸ್ಥಿತಿ ಸಹ ಬದಲಾಗುತ್ತಿದೆ. ಪ್ರಾಧಿಕಾರ ಮಾಡಿರುವುದು ಸರಿಯಿಲ್ಲ, ಸರ್ಕಾರದ ಈ ನಡೆ ಸರಿಯಿಲ್ಲ ಎಂದಿದ್ದಾರೆ.

ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಬೆಟ್ಟದ ಅರಮನೆ, ನಂದಿ, ಚಾಮುಂಡೇಶ್ವರಿ ಹಾಗೂ ಮಹಾಬಲೇಶ್ವರ ದೇವಸ್ಥಾನ, ದೇವಿಕೆರೆ ಸುತ್ತಮುತ್ತಲ‌ ಪ್ರದೇಶ ಸೇರಿದೆ. ಕೋರ್ಟ್ ಕೇವಲ ಸ್ಟೇಟಸ್ ಕೊಟ್ಟಿಲ್ಲ. ಪ್ರಾಧಿಕಾರವೇ ಜಾರಿಯಲ್ಲಿ ಇರುವುದಿಲ್ಲ. 1950ರಲ್ಲೇ ನಮ್ಮ ಸಂಸ್ಥಾನದಿಂದ ಖಾಸಗಿ ಆಸ್ತಿಗಳ ಪಟ್ಟಿ ಕೊಟ್ಟಿರುವುದು. ಕೇಂದ್ರ ಸರ್ಕಾರ 1972ರಲ್ಲಿ ಮಾಡಿರುವ ಆದೇಶದ ಪ್ರಕಾರ ಅವುಗಳನ್ನು ನಾವು ಅನುಭವಿಸಬಹುದು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೂ ಬಂದ ಎಲ್ಲಾ ಸರ್ಕಾರಗಳು ನಮಗೆ ತೊಂದರೆ ನೀಡಿವೆ. 2001ರಲ್ಲಿ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಚಾಮುಂಡಿಬೆಟ್ಟದಲ್ಲಿ ಇರುವ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಇನ್ನಿತರ ದೇವಸ್ಥಾನಗಳು ಹಾಗೂ ಇತರೆ ಆಸ್ತಿಗಳು ಮೈಸೂರು ರಾಜಮನೆತನಕ್ಕೆ ಸೇರಿದ್ದು ಎಂದು ನ್ಯಾಯಾಲಯದಲ್ಲಿ ದಾವೆ ಹಾಕಿದ್ದರು. ಇದು ಹೈಕೋರ್ಟಿನ ವಿಭಾಗೀಯ ಪೀಠದಲ್ಲಿ ಇನ್ನೂ ವಿಚಾರಣೆ ಹಂತದಲ್ಲೇ ಇದೆ.

ದೇವಾಲಯಗಳ ದೈವಿಕತೆ ಮತ್ತು ಧಾರ್ಮಿಕ ಪವಿತ್ರತೆಯನ್ನು ವಾಣಿಜ್ಯಿಕವಾಗಿ ಬಳಸಿಕೊಳ್ಳಲು ಸರ್ಕಾರಕ್ಕೆ ಅನುಮತಿ ನೀಡಲಾಗುವುದಿಲ್ಲ. ಕೆಲವರು ಲ್ಯಾಂಡ್ ಕಳೆದುಕೊಂಡೆ ಎಂದು ಭೂಮಿ ಕೇಳ್ತಾರೆ. ಹಾಗಾದರೆ ನಾವು ಕಳೆದುಕೊಂಡದ್ದು ಭೂಮಿ ಅಲ್ಲವೇ? ನಮಗೂ ಲ್ಯಾಂಡ್ ಟು ಲ್ಯಾಂಡ್ ಕೊಡಬೇಕು ಅಲ್ಲವೇ? ಎಂದು ಪ್ರಶ್ಮಿಸಿದರು. ಬೇರೆಯವರು ಕೇಳಿದಾಗ ಕೊಡುವವರು ನಾವು ಕೇಳಿದಾಗ ಯಾಕೆ ಕೊಡುವುದಿಲ್ಲ? ಎಂದು ಸಿಡಿಮಿಡಿಗೊಂಡರು.

ನಮ್ಮ ಖಾಸಗಿ ಆಸ್ತಿಗಳ ರಕ್ಷಣೆಗಾಗಿ ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವ ಬೀರುವುದಿಲ್ಲ. ನನ್ನ ಪತಿ ನಾಲ್ಕು ಬಾರಿ ಸಂಸದರಾಗಿದ್ದರು. ಆಗಲೂ ಅವರು ರಾಜಕೀಯವಾಗಿ ಪ್ರಭಾವ ಬೀರಲಿಲ್ಲ. ಯಾವುದೇ ಅಧಿಕಾರಿಗಳ ಬಳಿ ನಮ್ಮ ಆಸ್ತಿ ರಕ್ಷಣೆಗಾಗಿ ಪ್ರಭಾವ ಬೀರಲಿಲ್ಲ. ಈಗ ನನ್ನ ಮಗ ಸಂಸದನಾಗಿದ್ದಾರೆ. ಅವರ ಮೂಲಕವೂ ನಾನು ಪ್ರಭಾವ ಬೀರುವುದಿಲ್ಲ. ನಾನು ರಾಜಕೀಯದಿಂದ ದೂರ ಇದ್ದೇನೆ. ಕಾನೂನಾತ್ಮಕ ಹೋರಾಟವನ್ನು ಮುಂದುವರಿಸುತ್ತೇ‌‌ನೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ