ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!
ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!
ನವದೆಹಲಿ: ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.
ಹೆಸರು ಕಾಳು ಮತ್ತು ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್”ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಕರ್ನಾಟಕದಲ್ಲಿ 2024-25ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ”. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ ಕನಿಷ್ಠ ಬೆಂಬಲ ಬೆಲೆ ಅಡಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29) ಆದೇಶ ಹೊರಡಿಸಿದೆ”.
ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆ ಎಂದ ಪ್ರಹ್ಲಾದ್ ಜೋಶಿ ಅವರಿಗೆ ಧನ್ಯವಾದ ತಿಳಿಸಿದರು.
ಕುಸಿದು ಬಿದ್ದ ಛತ್ರಪತಿ ಶಿವಾಜಿ ಕಂಚಿನ ಪ್ರತಿಮೆ; ಗುತ್ತಿಗೆದಾರ, ರಚನಾ ಸಲಹೆಗಾರ ಅರೆಸ್ಟ್!
ಮುಂಬೈ: ಮಹಾರಾಷ್ಟ್ರದಲ್ಲಿ ಕುಸಿದು ಬಿದ್ದ ಛತ್ರಪತಿ ಶಿವಾಜಿ(Chhatrapati Shivaji Maharaj) ಕಂಚಿನ ಪ್ರತಿಮೆ ನಿರ್ಮಿಸಿದ ಗುತ್ತಿಗೆದಾರ ಮತ್ತು ರಚನೆಗೆ ಸಲಹೆ ನೀಡಿದ ಸಲಹೆಗಾರನನ್ನು ಬಂಧಿಸಲಾಗಿದೆ.
ಡಿಸೆಂಬರ್ 4,2023 ರಂದು ನೌಕಾ ದಿನದಂದು (Navy Day) ಸಿಂಧುದುರ್ಗದಲ್ಲಿ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗಿತ್ತು. ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟಿಸಿದರು. ಮರಾಠ ನೌಕಾಪಡೆ, ಛತ್ರಪತಿ ಶಿವಾಜಿ ಮಹಾರಾಜರ ಕಡಲ ರಕ್ಷಣೆ ಮತ್ತು ಭದ್ರತೆ, ಅದರ ಐತಿಹಾಸಿಕ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಕಂಚಿನ ಪ್ರತಿಮೆ ನಿರ್ಮಿಸಲಾಗಿತ್ತು.
ಪ್ರತಿಮೆ ಸೋಮವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಈ ಘಟನೆಯ ಬಳಿಕ ವಿಪಕ್ಷಗಳು ಆಡಳಿತರೂಢ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ. ಮಾತ್ರವಲ್ಲದೇ ಶಿವಾಜಿ ವಂಶಸ್ಥರು ಈ ಘಟನೆಯ ಬಳಿಕ ಸರ್ಕಾರದ ಆಕ್ರೋಶ ಹೊರಹಾಕಿದ್ದಾರೆ.
ಈ ಹಾನಿಯ ತನಿಖೆಗಾಗಿ ಭಾರತೀಯ ನೌಕಾಪಡೆಯ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಮತ್ತು ತಾಂತ್ರಿಕ ತಜ್ಞರೊಂದಿಗೆ ಸಮಿತಿಯನ್ನು ರಚಿಸಲಾಗುತ್ತಿದೆ.
ಹೆಣ್ಣುಮಕ್ಕಳ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಪತ್ತೆ, ವಿದ್ಯಾರ್ಥಿ ಬಂಧನ
ಅಮರಾವತಿ: ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೆದ್ದಿವೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಂತಿಮ ವರ್ಷದ ವಿದ್ಯಾರ್ಥಿಯೋರ್ವನನ್ನು ಬಂಧನಕ್ಕೊಳಪಡಿಸಿದೆ.
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಖಾಸಗಿತನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕ್ಯಾಮರಾದಲ್ಲಿ ದಾಖಲಾಗಿರುವ ಕೆಲ ವಿಡಿಯೋಗಳು ಬಾಲಕರ ಹಾಸ್ಟೆಲ್‌ನಲ್ಲಿ ಹರಿದಾಡುತ್ತಿವೆ ಎನ್ನಲಾಗಿದ್ದು. ನಮಗೆ ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗುತ್ತಾ ಕಾಲೇಜಿನಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಹಿಡನ್ ಕ್ಯಾಮೆರಾ ಇಟ್ಟವರು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಯಾವುದೇ ಹಿಡನ್ ಕ್ಯಾಮೆರಾಗಳು ಪತ್ತೆಯಾಗಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದ್ದು, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ತಿಳಿಸಿದೆ. ಅಲ್ಲದೆ, ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಭದ್ರತಾ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಈ ನಡುವೆ ಆರೋಪಿಯ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ 6 ಕೋಟಿಯಿಂದ 94 ಕೋಟಿಗೆ ಏರಿದೆ: ಪ್ರಧಾನಿ ಮೋದಿ
ಮುಂಬೈ ಆಗಸ್ಟ್ 30: ಭಾರತದ ಫಿನ್‌ಟೆಕ್ ಕ್ರಾಂತಿಯು ಆರ್ಥಿಕ ಸೇರ್ಪಡೆಯನ್ನು ಸುಧಾರಿಸುವುದರ ಜೊತೆಗೆ ನಾವೀನ್ಯತೆಗೆ ಚಾಲನೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಹೇಳಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2024 (Global Fintech Fest 2024)ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಳೆದ 10 ವರ್ಷಗಳಲ್ಲಿ, ಫಿನ್‌ಟೆಕ್ ಜಾಗದಲ್ಲಿ USD 31 ಶತಕೋಟಿಗಿಂತ ಹೆಚ್ಚು ಹೂಡಿಕೆ ಮಾಡಲಾಗಿದೆ, ಫಿನ್‌ಟೆಕ್ ಸ್ಟಾರ್ಟ್‌ಅಪ್‌ಗಳು 500 ಪ್ರತಿಶತದಷ್ಟು ಬೆಳೆದಿವೆ ಎಂದು ಹೇಳಿದ್ದಾರೆ.
“ನಮ್ಮ ಯುವಕರ ನಾವೀನ್ಯತೆ ಮತ್ತು ಭವಿಷ್ಯದ ಸಾಧ್ಯತೆಗಳು. ಅಲ್ಲಿ ಸಂಪೂರ್ಣ ಹೊಸ ಪ್ರಪಂಚವನ್ನು ಕಾಣಬಹುದು. ನಿಮ್ಮ ಕೆಲಸದ ರೀತಿ ಬದಲಾಯಿಸೋಣ. ಅಲ್ಲಿ ಸಂಪೂರ್ಣ ಹೊಸ ಜಗತ್ತನ್ನು ಕಾಣಬಹುದು… ಈ ಉತ್ಸವದ ಎಲ್ಲಾ ಸಂಘಟಕರನ್ನು ನಾನು ಅಭಿನಂದಿಸಲು ಬಯಸುತ್ತೇನೆ, ನಮ್ಮ ಅತಿಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶದಿಂದ ಬಂದಿದ್ದಾರೆ. ಭಾರತಕ್ಕೆ ಜನ ಬರುತ್ತಿದ್ದ ಕಾಲವೊಂದಿತ್ತು. ನಮ್ಮ ಸಾಂಸ್ಕೃತಿಕ ವೈವಿಧ್ಯತೆಯನ್ನು ಕಂಡು ಅವರು ಆಶ್ಚರ್ಯಚಕಿತರಾದರು, ಈಗ ಜನರು ಭಾರತಕ್ಕೆ ಬರುತ್ತಾರೆ. ನಮ್ಮ ಫಿನ್‌ಟೆಕ್ ವೈವಿಧ್ಯತೆಯನ್ನು ನೋಡಿ ಅವರು ಆಶ್ಚರ್ಯಚಕಿತರಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಯುಪಿಐ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಯುಪಿಐ ಭಾರತದ ಫಿನ್‌ಟೆಕ್ ಯಶಸ್ಸಿಗೆ ಉತ್ತಮ ಉದಾಹರಣೆಯಾಗಿದೆ.“ಇಡೀ ಪ್ರಪಂಚದಲ್ಲಿ, ಭಾರತದ UPI ಫಿನ್‌ಟೆಕ್‌ಗೆ ಉತ್ತಮ ಉದಾಹರಣೆಯಾಗಿದೆ. ಇಂದು ಅದು ಹಳ್ಳಿಯಾಗಿರಲಿ ಅಥವಾ ನಗರವೇ ಆಗಿರಲಿ, ಚಳಿಯಾಗಿರಲಿ ಅಥವಾ ಬಿಸಿಯಾಗಿರಲಿ, ಮಳೆಯಾಗಲಿ ಅಥವಾ ಮಂಜು ಬೀಳಲಿ, ಭಾರತದಲ್ಲಿ ಬ್ಯಾಂಕಿಂಗ್ ಸೇವೆಯು 24 ಗಂಟೆಗಳು, 7 ದಿನಗಳು ಮತ್ತು 12 ತಿಂಗಳುಗಳವರೆಗೆ ಮುಂದುವರಿಯುತ್ತದೆ.
GFF ಅನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್‌ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸುತ್ತಿದೆ. ಭಾರತ ಮತ್ತು ಇತರ ದೇಶಗಳ ನೀತಿ ನಿರೂಪಕರು, ನಿಯಂತ್ರಕರು, ಹಿರಿಯ ಬ್ಯಾಂಕರ್‌ಗಳು, ಉದ್ಯಮ ನಾಯಕರು ಮತ್ತು ಶಿಕ್ಷಣ ತಜ್ಞರು ಸೇರಿದಂತೆ ಸುಮಾರು 800 ಸ್ಪೀಕರ್‌ಗಳು ಸಮ್ಮೇಳನದಲ್ಲಿ 350 ಕ್ಕೂ ಹೆಚ್ಚು ಸೆಷನ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಫಿನ್‌ಟೆಕ್ ಲ್ಯಾಂಡ್‌ಸ್ಕೇಪ್‌ನಲ್ಲಿ ಇತ್ತೀಚಿನ ಆವಿಷ್ಕಾರಗಳನ್ನು ಸಹ ಪ್ರದರ್ಶಿಸುತ್ತದೆ. GFF 2024 ರಲ್ಲಿ 20 ಕ್ಕೂ ಹೆಚ್ಚು ಚಿಂತನೆಯ ನಾಯಕತ್ವ ವರದಿಗಳು ಮತ್ತು ಶ್ವೇತಪತ್ರಗಳನ್ನು ಪ್ರಾರಂಭಿಸಲಾಗುವುದು, ಒಳನೋಟಗಳು ಮತ್ತು ಆಳವಾದ ಉದ್ಯಮದ ಮಾಹಿತಿಯನ್ನು ನೀಡುತ್ತದೆ.
ಶುಕ್ರವಾರ ಮಹಾರಾಷ್ಟ್ರಕ್ಕೆ ತಮ್ಮ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಪಾಲ್ಘರ್‌ನಲ್ಲಿ 76,000 ಕೋಟಿ ರೂಪಾಯಿ ಮೌಲ್ಯದ ವಧ್ವನ್ ಬಂದರು ಯೋಜನೆ ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.