ಗುರುವಾರ, ಜನವರಿ 9, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ; ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ!

Twitter
Facebook
LinkedIn
WhatsApp
atishi kejriwal ಅರವಿಂದ್ ಕೇಜ್ರಿವಾಲ್, ಅತಿಶಿ ಮಾರ್ಲೆನಾ

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಜ್ರಿವಾಲ್‌ಗೆ ದೆಹಲಿ ಸಚಿವರು ಸಾಥ್ ನೀಡಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ (Atishi) ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (AAP) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ನಾನು ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ತಮ್ಮ ಭಾಷಣದಲ್ಲಿ ಕೇಜ್ರಿವಾಲ್ ಗುಡುಗಿದ್ದರು.

ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ

ಅತಿಶಿ ಮಾರ್ಲೆನಾ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಊಹಾಪೋಹಕ್ಕೆ ತೆರೆ ಬಿದ್ದಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಮರ್ಲೆನಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಅತಿಶಿ ಅವರ ಹೆಸರನ್ನು ಮುಂದಿಡಲಾಗಿತ್ತು. ಆದರೆ ಸಭೆಯಲ್ಲಿ ಅತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು ಮತ್ತು ಇತರ ನಾಯಕರು ಅವರನ್ನು ಬೆಂಬಲಿಸಿದರು.

ದೆಹಲಿಯ ಮದ್ಯ ನೀತಿಯ ಪ್ರಕರಣದಲ್ಲಿ ಎಎಪಿ ನಾಯಕರು ಜೈಲಿಗೆ ಹೋಗಬೇಕಾದಾಗ, ಅತಿಶಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರು ಪಕ್ಷಕ್ಕೆ ಅಪಾರ ನಿಷ್ಠೆ ತೋರಿದ್ದಾರೆ.

ಮದ್ಯನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರು ಜೈಲು ಪಾಲಾದಾಗ ಅತಿಶಿ ಧೈರ್ಯಗುಂದದೆ ಸರ್ಕಾರವನ್ನು ನೋಡಿಕೊಂಡಿದ್ದರು. ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.  ಮನೀಶ್ ಸಿಸೋಡಿಯಾ ಕೂಡ ಜೈಲಿನಲ್ಲಿದ್ದ ಕಾರಣ, ಪಕ್ಷ ಮತ್ತು ಸರ್ಕಾರದಲ್ಲಿ ಎರಡನೇ ಕಮಾಂಡ್ ಕೂಡ ಇರಲಿಲ್ಲ.

ಸೌರಭ್ ಭಾರದ್ವಾಜ್ ಅವರೊಂದಿಗೆ ಸರ್ಕಾರವನ್ನು ಮುನ್ನಡೆಸಿದರು, ದೆಹಲಿ ನೀರಿನ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ 100 ಮಿಲಿಯನ್ ಗ್ಯಾಲನ್​ಗಳಷ್ಟು ನೀರನ್ನು ಬಿಡುಗಡೆ ಮಾಡದ ಹರ್ಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಿದರು.

ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಬಳಿಕ ಆಸ್ಪತ್ರೆಗೆ ಸೇರಿಸಲಾಯಿತು. ಕೇಜ್ರಿವಾಲ್ ಬಂಧನದ ನಂತರ ಅತಿಶಿ ಅವರನ್ನು ಮುಖ್ಯಮಂತ್ರಿ ಮಾಡಬಹುದು ಎಂಬ ಊಹಾಪೋಹಗಳು ಹಬ್ಬಿದ್ದವು. ಆದರೆ ಕೇಜ್ರಿವಾಲ್ ಸರ್ಕಾರವನ್ನು ಜೈಲಿನಿಂದ ನಡೆಸಲು ನಿರ್ಧರಿಸಿದ್ದರು.

ದೆಹಲಿ ನೂತನ ಮುಖ್ಯಮಂತ್ರಿ ಮರ್ಲೆನಾ ಅವರು 8 ಜೂನ್ 1981 ರಂದು ದೆಹಲಿಯಲ್ಲಿ ಜನಿಸಿದರು. ಅತಿಶಿ ಅವರ ತಾಯಿಯ ಹೆಸರು ತ್ರಿಪ್ತ ವಹಿ ಮತ್ತು ತಂದೆಯ ಹೆಸರು ವಿಜಯ್ ಕುಮಾರ್ ಸಿಂಗ್, ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಅತಿಶಿ ತನ್ನ ಶಾಲಾ ದಿನಗಳಲ್ಲಿ ತನ್ನ ಹೆಸರಿನೊಂದಿಗೆ ಮಾರ್ಕ್ಸ್ ಮತ್ತು ಲೆನಿನ್‌ನಿಂದ ಪಡೆದ ಮಾರ್ಲೆನಾ ಪದವನ್ನು ಸೇರಿಸಿದ್ದರು.

ಈ ಕಾರಣದಿಂದಾಗಿ, ಆಕೆಗೆ ಅತಿಶಿ ಮರ್ಲೆನಾ ಎಂದು ಹೆಸರಿಸಲಾಯಿತು. ಅವರು ಪಂಜಾಬಿ ರಜಪೂತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅತಿಶಿ ದೆಹಲಿಯ ಸ್ಪ್ರಿಂಗ್‌ಡೇಲ್ ಶಾಲೆಯಲ್ಲಿ ಅಧ್ಯಯನ ಮಾಡಿದರು, ನಂತರ ಅವರು ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದರು. DU ನಿಂದ ಅಧ್ಯಯನ ಮಾಡಿದ ನಂತರ, ಅವರು ರೋಡ್ಸ್ ವಿದ್ಯಾರ್ಥಿವೇತನವನ್ನು ಪಡೆದರು ಮತ್ತು ಲಂಡನ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.

ದೆಹಲಿಯ ಕಲ್ಕಾಜಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅತಿಶಿ ಮರ್ಲೆನಾ ಅವರು 1.41 ಕೋಟಿ ಆಸ್ತಿ ಹೊಂದಿದ್ದಾರೆ. ಅತಿಶಿ ಬಳಿ 1 ಕೋಟಿ ರೂ.ಗೂ ಹೆಚ್ಚು ಆಸ್ತಿ ಇದ್ದರೂ ಸ್ವಂತ ಮನೆಯಾಗಲಿ, ಭೂಮಿ, ಆಭರಣವಾಗಲಿ ಇಲ್ಲ. 2013ರ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2014ರ ಲೋಕಸಭೆ ಚುನಾವಣೆಗೂ ಮುನ್ನ ಅವರನ್ನು ವಕ್ತಾರರನ್ನಾಗಿ ಮಾಡಲಾಗಿತ್ತು.

ನಂತರ 2019 ರಲ್ಲಿ ಅವರು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು. ಆದರೆ ಅವರು ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ 4.77 ಲಕ್ಷ ಮತಗಳಿಂದ ಸೋತು ಮೂರನೇ ಸ್ಥಾನ ಪಡೆದರು.

ನಂತರ, 2020 ರಲ್ಲಿ, ಅವರು ಕಲ್ಕಾಜಿ ವಿಧಾನಸಭೆಯಿಂದ ಚುನಾವಣೆಯಲ್ಲಿ ಗೆದ್ದರು. 2023 ರಲ್ಲಿ ಮೊದಲ ಬಾರಿಗೆ ಅವರು ದೆಹಲಿಯ ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಈಗ ಅವರು 2024 ರಲ್ಲಿ ದೆಹಲಿಯ ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ಹೊರಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist