ಬುಧವಾರ, ಜನವರಿ 8, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Tirupati: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು- ವರದಿ ಕೇಳಿದ ಕೇಂದ್ರ ಸರ್ಕಾರ; ಆರೋಪ ತಳ್ಳಿಹಾಕಿದ ಪೂರೈಕೆದಾರ!

Twitter
Facebook
LinkedIn
WhatsApp
Tirupati Laddu Row

ಹೈದರಾಬಾದ್: ಪ್ರಸಿದ್ಧ ತಿರುಪತಿ (Tirupati) ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ವರದಿ ಕೇಳಿದ್ದಾರೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ವರದಿಯನ್ನು ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಖಚಿತಪಡಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಇಂದು ಈ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ಪ್ರಸಿದ್ಧ ತಿರುಪತಿ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಇತರ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜೆ.ಪಿ. ನಡ್ಡಾ, ಆಂಧ್ರ ಸರ್ಕಾರ ಸಲ್ಲಿಸುವ ವರದಿಯನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಪರಿಶೀಲಿಸಲಿದ್ದು, ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನೊಂದೆಡೆ, ತಿರುಪತಿ (Tirupati) ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಹಾರ ಸಚಿವ ಪ್ರಹ್ಲಾದ್ ಜೋಶಿ ಇಂದು ಕರೆ ನೀಡಿದ್ದಾರೆ. ಆಂಧ್ರದ ಮುಖ್ಯಮಂತ್ರಿ ಹೇಳಿರುವ ಸಂಗತಿ ಗಂಭೀರವಾದ ಕಳವಳಕಾರಿ ವಿಷಯ. ಈ ಬಗ್ಗೆ ವಿವರವಾದ ತನಿಖೆಯ ಅಗತ್ಯವಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಂದಿನ ವೈಎಸ್ ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಸಹ ಬಿಡಲಿಲ್ಲ. ತಿರುಪತಿಯ ಲಡ್ಡುಗಳನ್ನು ತಯಾರಿಸಲು ಕಳಪೆ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಆರೋಪ ತಳ್ಳಿಹಾಕಿದ ಪೂರೈಕೆದಾರ

ದಿಂಡಿಗಲ್: ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನಂಶವಿದೆ ಎಂಬ ಆರೋಪವನ್ನು ದೇವಸ್ಥಾನಕ್ಕೆ ತುಪ್ಪ ಪೂರೈಸುತ್ತಿರುವ ದಿಂಡುಗಲ್‌ನ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಶುಕ್ರವಾರ ಸ್ಪಷ್ಟವಾಗಿ ನಿರಾಕರಿಸಿದೆ.

ಟಿಟಿಡಿಗೆ ನಾವು ಉತ್ತಮ ಗುಣಮಟ್ಟದ ತುಪ್ಪವನ್ನು ಪೂರೈಸಿದ್ದೇವೆ. ಅದನ್ನು ಸಾಬೀತುಪಡಿಸಲು ನಾವು ಕಾನೂನು ಕ್ರಮ ಎದುರಿಸಲು ಸಿದ್ಧ ಎಂದು ಕಂಪನಿ ಹೇಳಿದೆ.

ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ(ಎನ್‌ಡಿಡಿಬಿ)ಗೆ ಕಳುಹಿಸಲಾದ ತುಪ್ಪದ ಮಾದರಿಯಲ್ಲಿ ವಿದೇಶಿ ಕೊಬ್ಬು ಕಂಡುಬಂದಿದೆ ಎಂದು ಟಿಟಿಡಿ ಅಧಿಕಾರಿಗಳು ಹೇಳಿದ ನಂತರ ಕಂಪನಿಯು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಎನ್‌ಡಿಡಿಬಿ ವರದಿಯ ನಂತರ, ಎಆರ್ ಡೈರಿ ಫುಡ್ ಪೂರೈಸಿದ ತುಪ್ಪದ ದಾಸ್ತಾನು ಹಿಂತಿರುಗಿಸಲಾಗಿದೆ.

ಈ ಕುರಿತು ಇಂದು ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ನ ಕ್ವಾಲಿಟಿ ಕಂಟ್ರೋಲ್ ಮ್ಯಾನೇಜರ್‌ಗಳಾದ ಲೆನಿ ಮತ್ತು ಕಣ್ಣನ್ ಅವರು, ತಮ್ಮ ಕಂಪನಿಯು 20 ವರ್ಷಗಳಿಂದ ಈ ಕ್ಷೇತ್ರದಲ್ಲಿದೆ ಮತ್ತು ಉತ್ತಮ ಗುಣಮಟ್ಟದ ತುಪ್ಪವನ್ನು ಪೂರೈಸುತ್ತಿದೆ. ಕಂಪನಿಯ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಯಿತು. “ಎಆರ್ ಡೈರಿ ಫುಡ್ಸ್ ಜೂನ್ ಮತ್ತು ಜುಲೈ ತಿಂಗಳಲ್ಲಿ ಟಿಟಿಡಿಗೆ ತುಪ್ಪವನ್ನು ಪೂರೈಸಿದೆ” ಎಂದು ಹೇಳಿದರು.

ತುಪ್ಪದ ಒಟ್ಟು ಉತ್ಪಾದನೆಯಲ್ಲಿ ಶೇ. 0.5 ರಷ್ಟನ್ನು ಮಾತ್ರ ಟಿಟಿಡಿಗೆ ಕಳುಹಿಸಲಾಗಿದೆ. ಟಿಟಿಡಿಗೆ ತುಪ್ಪ ಕಳುಹಿಸುವ ಮುನ್ನ ಗುಣಮಟ್ಟ ಪರೀಕ್ಷೆ ಮಾಡಿದ್ದು, ಅದರ ವರದಿ ನಮ್ಮ ಬಳಿ ಇದೆ. ನಾವು ಟಿಟಿಡಿಗೆ ತುಪ್ಪ ಕಳುಹಿಸುವಾಗ ವರದಿಯ ಪ್ರತಿಯನ್ನು ಲಗತ್ತಿಸಲಾಗಿದೆ. ಲಡ್ಡು ತಯಾರಿಕೆಗೆ ಮಾತ್ರ ತುಪ್ಪವನ್ನು ಸರಬರಾಜು ಮಾಡಲಾಗಿದೆ. ಇತರ ಉದ್ದೇಶಗಳಿಗಾಗಿ ಅಲ್ಲ. ಟಿಟಿಡಿಗೆ ತುಪ್ಪವನ್ನು ಪೂರೈಸಿದ ಕಂಪನಿಗಳಲ್ಲಿ ನಾವೂ ಒಬ್ಬರು ಎಂದು ಅವರು ಹೇಳಿದರು.

TNIE ಯೊಂದಿಗೆ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಆರ್ ರಾಜಶೇಖರ್, “ನಾವು ಉತ್ತಮ ಗುಣಮಟ್ಟದ ತುಪ್ಪವನ್ನು ಪೂರೈಸಿದ್ದೇವೆ. ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸುವುದು ಸಾಮಾನ್ಯ ವಿಧಾನವಾಗಿದೆ. ನಮ್ಮನ್ನು ಕಪ್ಪು ಪಟ್ಟಿಗೆ ಸೇರಿಸಿದ ನಂತರ, ನಾವು ಅವರಿಗೆ ಉತ್ತರವಾಗಿ ಕಾನೂನು ಮಾನದಂಡಗಳ ಪ್ರಕಾರ ದಾಖಲೆಗಳನ್ನು ಕಳುಹಿಸಿದ್ದೇವೆ. ಈ ಕುರಿತ ತನಿಖೆಯಲ್ಲಿ ಕಂಪನಿಯು ತನ್ನ ಗುಣಮಟ್ಟವನ್ನು ಸಾಬೀತುಪಡಿಸಲು ಕಾನೂನು ಹೋರಾಟ ನಡೆಸಲು ಸಿದ್ಧವಾಗಿದೆ,” ಎಂದು ತಿಳಿಸಿದ್ದಾರೆ.

ಪ್ರಮಾಣಿಕೃತ ತುಪ್ಪವನ್ನೇ ಬಳಸಲಾಗಿದೆ: ಜಗನ್ ಸ್ಪಷ್ಟನೆ

ಅಮರಾವತಿ: ತಿರುಪತಿ (Tirupathi) ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ತುಪ್ಪದ ಮಾದರಿ ಸಂಗ್ರಹಿಸಿ ಪ್ರಮಾಣಿಕರಿಸಿದ ಬಳಿಕವೇ ತುಪ್ಪದ ಬಳಕೆ ಮಾಡಲಾಗುತ್ತದೆ ಎಂದು ವೈಎಸ್‍ಆರ್‌ಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸ್ಪಷ್ಟನೆ ನೀಡಿದ್ದಾರೆ.

ರುಪತಿ ಲಡ್ಡು ವಿಷಯದಲ್ಲಿ ನಡೆಯುತ್ತಿರುವ ವಿವಾದದ (Tirupati Laddu Row) ವಿಚಾರವಾಗಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಪ್ರಸಾದದ ಅರ್ಹತೆಯ ಮಾನದಂಡ ದಶಕಗಳಿಂದ ಬದಲಾಗಿಲ್ಲ. ಪೂರೈಕೆದಾರರು ಎನ್‍ಎಬಿಎಲ್ ಪ್ರಮಾಣಪತ್ರ ಮತ್ತು ಉತ್ಪನ್ನ ಗುಣಮಟ್ಟದ ಪ್ರಮಾಣಪತ್ರವನ್ನು ನೀಡಬೇಕು. ಅದಾದ ಬಳಿಕ ಟಿಟಿಡಿ (TTD) ತುಪ್ಪದಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ಬಳಿಕ ಪರಿಶೀಲಿಸಿದ ಉತ್ಪನ್ನಗಳನ್ನು ಮಾತ್ರ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದೇವಾಲಯಕ್ಕೆ ಲಡ್ಡು ತಯಾರಿಕೆಗಾಗಿ ಸಾಮಗ್ರಿಗಳನ್ನು ಒದಗಿಸಲು ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಈ ವೇಳೆ ಅಗತ್ಯ ದಾಖಲೆಗಳನ್ನು ಹಾಗೂ ಗುಣಮಟ್ಟದ ಪ್ರಮಾಣ ಪತ್ರವನ್ನು ಒದಗಿಸಿ ಟೆಂಡರ್ ಪಡೆಯಬೇಕು. ನಮ್ಮ ಆಡಳಿತದಲ್ಲಿ ನಾವು 18 ಬಾರಿ ಉತ್ಪನ್ನಗಳನ್ನು ತಿರಸ್ಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು, ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಕೆಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಗುಜರಾತ್‍ನ ಸರ್ಕಾರಿ ಲ್ಯಾಬ್‍ನ ವರದಿಯನ್ನು ಅವರು ಉಲ್ಲೇಖಿಸಿದ್ದರು.

ಈ ವಿಚಾರ ಸದ್ದು ಮಾಡುತ್ತಿದ್ದಂತೆ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.

ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಕೂಡ ಈ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist