ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನವರಾತ್ರಿಯ ಆಚರಣೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರಗಳಿಂದ ಕಂಗೊಳಿಸುತ್ತಿದೆ ನಾಡಿನ ಪುಣ್ಯಕ್ಷೇತ್ರ ಗೆಜ್ಜೆಗಿರಿ

Twitter
Facebook
LinkedIn
WhatsApp
ನವರಾತ್ರಿಯ ಆಚರಣೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರಗಳಿಂದ ಕಂಗೊಳಿಸುತ್ತಿದೆ ನಾಡಿನ ಪುಣ್ಯಕ್ಷೇತ್ರ ಗೆಜ್ಜೆಗಿರಿ

ಪುತ್ತೂರು: ಕರಾವಳಿ ಜಿಲ್ಲೆಯಲ್ಲಿರುವ ನಾಡಿನ ಪ್ರಮುಖ ಪುಣ್ಯಕ್ಷೇತ್ರ ಗೆಜ್ಜೆ ಗಿರಿ ನವರಾತ್ರಿ ಸಂದರ್ಭದಲ್ಲಿ ವಿದ್ಯುತ್ ದೀಪ ಅಲಂಕಾರಗಳಿಂದ ಕಂಗೊಳಿಸುತ್ತಿದೆ.

ನವರಾತ್ರಿ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಬಾರಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

ಪ್ರತಿದಿನ ನವರಾತ್ರಿಯ ವಿಶೇಷ ಪೂಜೆಗಳನ್ನು ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಗೆಜ್ಜೆ ಗಿರಿಯಲ್ಲಿ ಆರಾಧನೆಗೊಳ್ಳುತ್ತಿರುವ ದೇಯಿ ಬೈದತಿ, ಕೋಟಿ ಚಿನ್ನಯರಿಗೆ ವಿಶೇಷ ಪೂಜೆಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಲಾಗುತ್ತಿದೆ.

ಗೆಜ್ಜೆ ಗಿರಿ ಕ್ಷೇತ್ರವು ಹಲವು ದಿನಗಳಿಂದ ಭಕ್ತರಿಂದ ತುಂಬಿ ತುಳುಕುತ್ತಿದ್ದು, ನವರಾತ್ರಿ ಎಂದು ವಿದ್ಯುತ್ ದೀಪಗಳ ಅಲಂಕಾರಗಳಿಂದ ದೇವಸ್ಥಾನ ಶೋಭಿಸುತ್ತಿದೆ.

ಮಡಿಕೇರಿ-ಗೋಣಿಕೊಪ್ಪ ದಸರಾಗೆ ಬಿಗಿ ಬಂದೋಬಸ್ತ್

ಮಡಿಕೇರಿ: ವಿಜಯದಶಮಿ (Vijayadashami) ಪ್ರಯುಕ್ತ ಇದೇ ಅ.12ರಂದು ಮಡಿಕೇರಿ (Madikeri) ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನೆರವೇರಲು ಒಟ್ಟು ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾಹಿತಿ ನೀಡಿದ್ದಾರೆ.

80 ಪಿಎಸ್‌ಐ, 126 ಎಎಸ್‌ಐ, 975 ಕಾನ್ಸ್‌ಸ್ಟೇಬಲ್‌ ಹಾಗೂ ಹೆಡ್‌ ಕಾನ್ಸ್‌ಟೇಬಲ್ಸ್‌, 360 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 2,000 ಪೊಲೀಸ್ ಸಿಬ್ಬಂದಿ, ಮಡಿಕೇರಿ – ಗೋಣಿಕೊಪ್ಪ ದಸರಾದಲ್ಲಿ (Madikeri Gonikoppa Dasara) ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಿದ್ದಾರೆ. ಕಳೆದ ದಸರಾದಲ್ಲಿ ನಡೆದಂತಹ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಇಲಾಖೆ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ.

ಮಡಿಕೇರಿ ದಸರಾಗೆ 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯಿದೆ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಟ್ರಾಫಿಕ್ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಗರದಲ್ಲಿನ ನಿರ್ಜನ ಪ್ರದೇಶಗಳಲ್ಲಿ, ಹೆಚ್ಚಾಗಿ ಹೊರವಲಯದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಜೀಪ್ ಹಾಗೂ ಚೀತಾ ದ್ವಿಚಕ್ರ ವಾಹನಗಳನ್ನು ಪೊಲೀಸ್ ಸಿಬ್ಬಂದಿ ಬಳಸಿ ಗಸ್ತು ನಡೆಸಲಿದ್ದಾರೆ. ಶೋಭಾಯಾತ್ರೆ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು, ಸುರಕ್ಷತಾ ದೃಷ್ಟಿಯಿಂದ ಹಳೆಯ ಮತ್ತು ಸುರಕ್ಷಿತವಲ್ಲದ ಕಟ್ಟಡ ಏರದಂತೆ ಎಸ್ಪಿ ಮನವಿ ಮಾಡಿದ್ದಾರೆ. ಕಟ್ಟಡದ ಮಾಲೀಕರು ಕೂಡ ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. 

ಗೋಣಿಕೊಪ್ಪ ದಸರಾದಲ್ಲಿಯೂ ಹೆಚ್ಚಿನ ಜನ ಸೇರುವುದರಿಂದ ವಿಜಯದಶಮಿಯಂದು ಸಂಜೆ 6 ರಿಂದ ಮುಂದಿನ ದಿನ ಬೆಳಿಗ್ಗೆ 6 ಗಂಟೆಯವರೆಗೆ ಸಂಚಾರಿ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್‌ಪೋಸ್ಟ್‌ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist