ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ (Priyanka Vadra) ಅಧಿಕೃತ ಎಂಟ್ರಿ, ವಯನಾಡಿನಿಂದ ಕಣಕ್ಕೆ

Twitter
Facebook
LinkedIn
WhatsApp
Priyanka Vadra's official entry into electoral politics, from Wayanad

ನವದೆಹಲಿ: ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ (Priyanka Vadra) ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ (Wayanad Lok Sabha) ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ.

ಈ ಕ್ಷೇತ್ರಕ್ಕೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಹೆಸರು ಘೋಷಿಸಿದೆ.

ಇನ್ನು ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ಗೆದ್ದರೆ ಸಂಸತ್ತಿನಲ್ಲಿ ಅವರ ಮೊದಲ ಹೆಜ್ಜೆ. ಅಲ್ಲದೆ, ಗಾಂಧಿ ಕುಟುಂಬದ ಮೂವರೂ – ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಸಂಸತ್ತಿನಲ್ಲಿ ಒಟ್ಟಿಗೆ ಇರುವುದು ಇದೇ ಮೊದಲು. 

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ನವೆಂಬರ್ 13ರಂದು ಇಲ್ಲಿ ಮತದಾನ ನಡೆಯಲಿದೆ. ನವೆಂಬರ್ 13ರಂದು ಕೇರಳದ ಎರಡು ವಿಧಾನಸಭಾ ಸ್ಥಾನಗಳಾದ ಪಾಲಕ್ಕಾಡ್ ಮತ್ತು ಚೆಲಕ್ಕರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗದ ಘೋಷಣೆಯ ನಂತರ, ಮಂಗಳವಾರ ತಡರಾತ್ರಿ ಕಾಂಗ್ರೆಸ್ ಈ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತು. ರಾಹುಲ್ ಗಾಂಧಿ ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Vadra) ವಯನಾಡ್ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ಪಾಲಕ್ಕಾಡ್‌ನಿಂದ ರಾಹುಲ್ ಮಂಕುತಿಲ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರದಿಂದ ರಮ್ಯಾ ಹರಿದಾಸ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್‌ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದರು. ಆದ್ರೆ, ತಮ್ಮ ಕುಟುಂಬದ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧೀ ಅವರು ವಯನಾಡು ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಈಗ ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ ಮಾಡಲಿದ್ದಾರೆ.

52 ವರ್ಷದ ಪ್ರಿಯಾಂಕಾ ಗಾಂಧಿ (Priyanka Vadra) 1999ರಿಂದಲೂ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದು, ಆರಂಭದಲ್ಲಿ ಅಮೇಠಿಯಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿಯವರ ಪರ ಪ್ರಚಾರ ಮಾಡಿದ್ದರು. ಈ ಮೂಲಕ ರಾಜಕೀಯದಲ್ಲಿ ತನ್ನ ಸುದೀರ್ಘ ಉಪಸ್ಥಿತಿಯ ಹೊರತಾಗಿಯೂ ಪ್ರಿಯಾಂಕಾ ಎಂದೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ತಮ್ಮ ಚೊಚ್ಚಲ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಒಂದು ವೇಳೆ ವಯನಾಡ್​ನಲ್ಲಿ ಪ್ರಿಯಾಂಕ ಗೆಲುವು ಸಾಧಿಸಿದರೆ, ಗಾಂಧಿ ಕುಟುಂಬದ ಮೂವರು ಸಂಸತ್ತಿಗೆ ಪ್ರವೇಶಿಸಿದಂತಾಗುತ್ತದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್​ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಶೇಕಡ 64ರಷ್ಟು ಮತ ಪಡೆದಿದ್ದರು. ಸಮೀಪದ ಸ್ಪರ್ಧಿ ಸಿಪಿಐನ ಅನ್ನಿ ರಾಜಾ ವಿರುದ್ಧ 3.64 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಇನ್ನು ಬಿಜೆಪಿಯಿಂದ ಕಣಕ್ಕಿಳಿದಿದ್ದ ರಾಜ್ಯಾಧ್ಯಕ್ಷ ಸುರೇಂದ್ರನ್​ 1.3 ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ರಾಯ್​ಬರೆಯಲ್ಲೂ ಸಹ ರಾಹುಲ್ ಗಾಂಧಿ 3.9 ಲಕ್ಷ ಮತಗಳ ಅಂತರರಿಂದ ಗೆದ್ದಿದ್ದರು. ಇನ್ನು 2019ರಲ್ಲಿ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲುಕಂಡಿದ್ದ ರಾಹುಲ್ ಗಾಂಧಿ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ಈಗ ಅಣ್ಣ ಬಿಟ್ಟುಕೊಟ್ಟಿರುವ ವಯನಾಡ್​ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.

ನವೆಂಬರ್ 13ರಂದು ವಯನಾಡ್​ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist