ವೇಣೂರು : ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು
ಬೆಳ್ತಂಗಡಿ: ವೇಣೂರು ಸಮೀಪದ ಬರ್ಕಜೆ ಡ್ಯಾಂ ಬಳಿ ನದಿಗೆ ಸ್ನಾನಕ್ಕೆ ತೆರಳಿದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ಹಿನ್ನೆಲೆ ಬಂದಿದ್ದ ಮೂಡುಬಿದಿರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ನ.27 ರಂದು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದರು.
ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹವನ್ನೂ ನೀರಿನಿಂದ ಹೊರ ತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ಮೂವರು ಮಂಗಳೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ:
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಿ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವೃದ್ಧ ಈ ಅತ್ಯಾಚಾರ ನಡೆಸಿದ್ದಾನೆ. ಎದುರು ಮನೆಯ ಮಹಿಳೆಯಿಂದ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಕಿರುಚದಂತೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸಲಾಗಿತ್ತು. ವಿಕೃತಿ ಮೆರೆದ ವೃದ್ದನಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ಪೊಲೀಸರಿಗೆ ಫೋನ್ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.