ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ
![shobhitha ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ](https://urtv24.com/wp-content/uploads/2024/12/shobhitha-1024x576.webp)
ಬ್ರಹ್ಮಗಂಟು (Brahmagantu) ಸೀರಿಯಲ್ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ.
2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್ನಲ್ಲಿ ಸೆಟಲ್ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು.
ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿದ್ದ ಶೋಭಿತಾ ಅವರು ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಎಲ್ಲರಿಗೂ ಆಘಾತ ಆಗಿದೆ.
ಶೋಭಿತಾ ಅವರಿಗೆ 30 ವರ್ಷ ವಯಸ್ಸು ಆಗಿತ್ತು. 12ಕ್ಕೂ ಅಧಿಕ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಮಂಗಳಗೌರಿ ಮದುವೆ, ಗಾಳಿಪಟ, ಕೃಷ್ಣ ರುಕ್ಮಿಣಿ, ಮನೆ ದೇವ್ರು, ಅಮ್ಮಾವ್ರು, ದೀಪವು ನಿನ್ನದೇ ಗಾಳಿಯೂ ನಿನ್ನದೇ ಮುಂತಾದ ಧಾರಾವಾಹಿಗಳ ಮೂಲಕ ಅವರು ಪರಿಚಿತರಾಗಿದ್ದರು. ಶೋಭಿತಾ ನಿಧನಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿಯಲಿದೆ.
ಶೋಭಿತಾ ಸೂಸೈಡ್ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ: ಗೀತಾ ಭಾರತಿ ಭಟ್ ಭಾವುಕ
ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವದವರಲ್ಲ ಎಂದು ‘ಬ್ರಹ್ಮಗಂಟು’ ಸಹನಟಿ ಗೀತಾ (Geetha Bharathi Bhat) ಪ್ರತಿಕ್ರಿಯಿಸಿದ್ದಾರೆ. ‘ಬ್ರಹ್ಮಗಂಟು’ (Brahmagantu) ಸೀರಿಯಲ್ನಲ್ಲಿ ಶೋಭಿತಾ ಜೊತೆ ನಟಿಸಿದ ದಿನಗಳನ್ನು ಗೀತಾ ಸ್ಮರಿಸಿದ್ದಾರೆ.
ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವದವರು ಅಲ್ಲ. ನಾವಿಬ್ಬರೂ ‘ಬ್ರಹ್ಮಗಂಟು’ ಸೀರಿಯಲ್ ಮಾಡಬೇಕಾದರೆ, ಬೇರೆ ಯಾರೋ ಸೀರಿಯಲ್ ಆರ್ಟಿಸ್ಟ್ ಸೂಸೈಡ್ ಸುದ್ದಿ ಕೇಳಿ ಈ ರೀತಿ ಮಾಡಿಕೊಳ್ಳುವುದು ತಪ್ಪು ಎಂದು ಶೋಭಿತಾ ಚರ್ಚಿಸಿದರು. ಆದರೆ ಇವರ ಸುದ್ದಿ ಈ ತರಹ ಬರುತ್ತೆ ಎಂದು ಅಂದುಕೊಂಡಿರಲಿಲ್ಲ. ಈಗಲೂ ಅವರ ಆತ್ಮಹತ್ಯೆಯ ಸುದ್ದಿ ನಂಬೋಕೆ ತುಂಬಾ ಕಷ್ಟ ಆಗುತ್ತಿದೆ ಎಂದು ನಟಿ ಗೀತಾ ಮಾತನಾಡಿದ್ದಾರೆ.
ಶೋಭಿತಾ ಮದುವೆಯಾದ್ಮೇಲೆ ನನ್ನ ಜೊತೆ ಸಂಪರ್ಕ ಇರಲಿಲ್ಲ. ನಾನು ಅವರನ್ನು ಕಡೆಯದಾಗಿ ಭೇಟಿ ಆಗಿದ್ದು, ಅವರ ಮದುವೆಗೂ ಮುಂಚೆ, ಆ ನಂತರ ಅವರು ಸಿಗಲಿಲ್ಲ. ಅವರಿಗೆ ಅದೇನು ಕಷ್ಟು ಇತ್ತು ಎಂಬುದು ಗೊತ್ತಿಲ್ಲ. ಅವರ ಕಷ್ಟ ಏನಿತ್ತು ಅವರು ಯಾರ ಹತ್ತಿರ ಆದ್ರೂ ಹೇಳಿಕೊಳ್ಳಬೇಕಿತ್ತು. ಅವರ ಕುಟುಂಬಕ್ಕೆ ಅವರ ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ.