ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು

Twitter
Facebook
LinkedIn
WhatsApp
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ

ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು

ಬೆಂಗಳೂರು : ಯುವತಿಗೆ ಡ್ರಗ್ಸ್‌ ಕೊಟ್ಟು ಅತ್ಯಾಚಾರ ಎಸಗಿ, ಅದನ್ನು ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಅಕ್ಕಿ ಲಕ್ಷ್ಮಿರೆಡ್ಡಿ ಎಂಬಾತನ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ನರ್ಸ್‌ ಆಗಿರುವ ಸಂತ್ರಸ್ತ ಯುವತಿಯು 2019 ರಲ್ಲಿ ಆರ್‌.ಟಿ.ನಗರದ ಖಾಸಗಿ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕ್ರೆಡಿಟ್‌ ಕಾರ್ಡ್‌ ಪಡೆಯಲು ಆ ಬ್ಯಾಂಕ್‌ಗೆ ಹೋಗಿದ್ದ ಲಕ್ಷ್ಮಿರೆಡ್ಡಿ, ಸಂತ್ರಸ್ತ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಪರಸ್ಪರರು ಮೊಬೈಲ್‌ನಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಲಕ್ಷ್ಮಿರೆಡ್ಡಿ, 2019 ರ ನವೆಂಬರ್‌ನಲ್ಲಿ ತನ್ನ ಸಹೋದರಿಯ ಹುಟ್ಟು ಹಬ್ಬವಿದೆ ಎಂದು ಸುಳ್ಳು ಹೇಳಿ ಸಂತ್ರಸ್ತ ಯುವತಿಯನ್ನು ಆರ್‌.ಟಿ ನಗರದ ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ. ಬಳಿಕ ಕಾಫಿಯಲ್ಲಿ ಮಾದಕ ವಸ್ತು ಬೆರೆಸಿ ಅದನ್ನು ಯುವತಿಗೆ ಕುಡಿಸಿ ಅತ್ಯಾಚಾರ ಎಸಗಿದ್ದ. ಅಲ್ಲದೆ, ಅದನ್ನು ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿಕೊಂಡಿದ್ದ. ಬಳಿಕ ಸಂತ್ರಸ್ತ ಯುವತಿಗೆ ಆ ವಿಡಿಯೊ ತೋರಿಸಿ ಬೆದರಿಕೆ ಹಾಕಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯು ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ತನ್ನ ತಾಯಿಗೆ ಮತ್ತು ತನ್ನ ಜಾತಿ ಬಗ್ಗೆ ಕೀಳು ಭಾಷೆಯಲ್ಲಿ ನಿಂದಿಸಿದ್ದಾನೆ. ತಮ್ಮ ಮನೆಯಲ್ಲಿದ್ದ ಅಂಬೇಡ್ಕರ್‌ ಫೋಟೊ ತೆಗೆಯುವಂತೆ ಒತ್ತಾಯಿಸಿದ್ದಾನೆ. 2024 ರ ನವೆಂಬರ್‌ನಲ್ಲಿ ತನ್ನನ್ನು ಖಾಸಗಿ ಹೋಟೆಲ್‌ಗೆ ಕರೆದೊಯ್ದು ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ತನ್ನ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಡೆದ ವಿಚಾರವನ್ನು ತಾಯಿಗೆ ತಿಳಿಸಿದೆ ಎಂದು ಸಂತ್ರಸ್ತೆಯು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ನ.30 ರಂದು ನನ್ನನ್ನು ಭೇಟಿಯಾಗಿದ್ದ ಆರೋಪಿ ಲಕ್ಷ್ಮಿರೆಡ್ಡಿ, ನನ್ನ ಮೊಬೈಲ್‌ ವಾಲ್‌ಪೇಪರ್‌ನಲ್ಲಿದ್ದ ಅಂಬೇಡ್ಕರ್‌ರ ಫೋಟೊ ತೆಗೆದುಹಾಕುವಂತೆ ಬೆದರಿಸಿ ಮೊಬೈಲ್‌ ಒಡೆದು ಹಾಕಿದ್ದಾನೆ. ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ತಾನು ರಾಯಲ ಸೀಮೆಯವನು, ಬಾಂಬ್‌ ತಯಾರಿಸುವವನು. ಹೆಚ್ಚು ಮಾತನಾಡಿದರೆ ನಮ್ಮ ಮನೆಯ ಮೇಲೆ ಬಾಂಬ್‌ ಹಾಕಿ ಎಲ್ಲರನ್ನೂ ಸಾಯಿಸುತ್ತೇನೆ ಎಂದು ಬೆದರಿಸಿದ್ದಾನೆ,” ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಲಕ್ಷ್ಮಿರೆಡ್ಡಿ ವಿರುದ್ಧ ಲೈಂಗಿಕ ದೌರ್ಜನ್ಯ, ಪ್ರಾಣ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಆತ ಬಂಧನ ಭೀತಿಯಿಂದ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ. ಜೆ.ಸಿ.ನಗರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ಮಾಡಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist