ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಿಂದ ಬರುತ್ತಿದೆ ಕಳಪೆ ಬೀಜಗಳು. ಬೆಳಗಾವಿಯಲ್ಲಿ ರೈತರಿಗೆ ನೀಡಲಾಗಿದೆ ಎಚ್ಚರಿಕೆ

Twitter
Facebook
LinkedIn
WhatsApp
WhatsApp Image 2021 06 03 at 10.38.24 AM 1
ಬೆಳಗಾವಿ: ಚೀನಾದಿಂದ ಕಳಪೆ ಬೀಜಗಳು ಬರುತ್ತಿವೆ.ರೈತರು ಎಚ್ಚರದಿಂದ ಇರಬೇಕು ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಶಿವನಗೌಡ .ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ.ಈಗಾಗಲೇ ಇಂಗ್ಲೆಂಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳಿಸಲಾಗಿದೆ. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಎಲ್ಲಿಂದ ಕಳುಹಿಸುತ್ತಾರೆ ಎಂಬ ವಿವರಗಳೇ ಇರುವುದಿಲ್ಲ. ಈ ಬೀಜಗಳ ಬಳಕೆಯಿಂದ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ. ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆಯೂ ಇದೆ ಎಂದೂ ಅವರು ಎಚ್ಚರಿಸಿದ್ದಾರೆ. ಇಂತಹ ಬಿತ್ತನೆ ಬೀಜದ ಪೊಟ್ಟಣಗಳ ಪಾರ್ಸಲ್ ಬಂದರೆ ರೈತರು ವಾಪಸ್ ಕಳುಹಿಸಬೇಕು. ಒಂದು ವೇಳೆ ಸ್ವೀಕರಿಸಿದರೂ ಪೊಟ್ಟಣದ ಸಮೇತ ಅದನ್ನು ಸುಟ್ಟು ಹಾಕಬೇಕು ಇಲ್ಲವೆ, ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚೀನಾ ಗಳಿಂದ ಕಳಪೆ ಬೀಜಗಳು ಬರುತ್ತಿರುವುದು ಸಾಮಾನ್ಯವಾಗಿದೆ. ರೈತರು ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು