ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೈತ್ರ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ .

Twitter
Facebook
LinkedIn
WhatsApp
ಚೈತ್ರ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಕಾಂಗ್ರೆಸ್ ನಾಯಕ  ಬೊಂಡಾಲ ಚಿತ್ತರಂಜನ್ ಶೆಟ್ಟಿ.

ಮಂಗಳೂರು: ಬಂಟ್ವಾಳದ ಕಾಂಗ್ರೆಸ್ ನಾಯಕರೊಬ್ಬರು ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿಯ ವತಿಯಿಂದ ನಡೆದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ‌ ದಾಖಲು ಮಾಡಿದ್ದಾರೆ.

ಬಿ ಸಿ ರೋಡಿನ ಬೊಂಡಾಲ ಚಿತ್ತರಂಜನ್ ಶೆಟ್ಟಿ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಚೈತ್ರ ಕುಂದಾಪುರ ಅವರು ಅತ್ಯಂತ ಕೆಟ್ಟ, ಸಾಮಾಜಿಕ ಸ್ವಾಸ್ಥ್ಯ ಕದಡುವ ದ್ವೇಷಪೂರಿತ ಮತ್ತು ಕರಾವಳಿಯ ಕೋಮುಭಾವನೆಗಳನ್ನು ಕೆರಳಿಸುವ ಭಾಷಣ ಮಾಡಿದ್ದಾರೆ. ಆಕೆ ಮತ್ತು ಸಂಘಟಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾಷಣದಲ್ಲಿ ಒಂದು ಕೋಮಿನ ಜನರನ್ನು ಕಾನೂನುಬಾಹಿರ ಪದಗಳನ್ನು ಬಳಸಿ ಅವಮಾನಿಸಿರುವುದಲ್ಲದೆ, ಆ ಕೋಮಿನ ವಿರುದ್ಧ ಜನತೆಯನ್ನು ಎತ್ತಿಕಟ್ಟುವ ಮತ್ತು ದ್ವೇಷ ಹುಟ್ಟಿಸುವ ರೀತಿಯಲ್ಲಿ ಉದ್ರೇಕಕಾರಿಯಾಗಿ ಪದಗಳನ್ನು ಬಳಸಲಾಗಿದೆ. ಈಕೆಯ ಭಾಷಣದಿಂದ ಪ್ರಚೋದನೆಗೊಳಗಾಗಿ ಕ್ರಿಯೆ ಪ್ರಕ್ರಿಯೆಗಳು ಉ೦ಟಾಗುವ, ಕೋಮು ಘರ್ಷಣೆಯ ಭೀತಿ ಎದುರಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರಸರ ವಾದಗಳು ನಡೆಯುತ್ತಿವೆ ಎಂದಿದ್ದಾರೆ.
ಚೈತ್ರ ಕುಂದಾಪುರ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರುಷರು, ಆರಾಧ್ಯ ದೈವಗಳಾದ ಕೋಟ ಚೆನ್ನಯರನ್ನು ದುರುಪಯೋಗಪಡಿಸಿ ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಕೋಟಿ ಚೆನ್ನಯರು ಹಿಡಿಯುವ ಸುರಿಯ ಎಂಬ ಪವಿತ್ರ ಆಯುಧವನ್ನು ರೌಡಿಗಳು ಕೋಮು ಘರ್ಷಣೆಯಲ್ಲಿ ಬಳಸುವ ತಲವಾರಿಗೆ ಹೋಲಿಸಿರುವುದು ಈಕೆಯ ಭಾಷಣದಲ್ಲಿ ದೆ. ಆಘಾತಕಾರಿ, ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡುವ ಪ್ರಯತ್ನ ಇದಾಗಿದೆ ಎಂದು ದೂರಲಾಗಿದೆ.

ಇದು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗುವ ಸನ್ನಿವೇಶಕ್ಕೆ ಎಡೆಮಾಡಿಕೊಡಬಹುದು. ಅಷ್ಟಲ್ಲದೆ ಸಾರ್ವಜನಿಕವಾಗಿ ಕುಂದು ಉಂಟು ಮಾಡುವ ರೀತಿಯಲ್ಲಿದೆ.

ಈಕೆಯ ಭಾಷಣ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಠಾಣೆಯ ಪೊಲೀಸರ ಸಮ್ಮುಖದಲ್ಲಿ ನಡೆದಿರುವುದರಿಂದ ಈ ಎಲ್ಲಾ ವಿಷಯಗಳು ತಮ್ಮ ಗಮನಕ್ಕೆ ಬಂದಿರುತ್ತದೆ. ಈ ವಿಷಯದ ಸಾಮಾಜಿಕ, ರಾಜಕೀಯ ಗಂಭೀರತೆಯನ್ನು ಮನಗಂಡು ತಾವು ಭಾಷಣಕಾರ್ತಿ ಚೈತ್ರ ಹಾಗೂ ಕಾರ್ಯಕ್ರಮ ಸಂಯೋಜಕರನ್ನು ಬಂಧಿಸಿ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು