ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರತಿಷ್ಠೆ, ಅಧಿಕಾರದಿಂದ ಗೌರವ ದೊರೆಯುವುದಿಲ್ಲ: ಬಿ‌. ಎಲ್. ಸಂತೋಷ್

Twitter
Facebook
LinkedIn
WhatsApp
ಸುಬ್ರಹ್ಮಣ್ಯ: ರೈಲು ಹಳಿಯಲ್ಲಿ ಬಿರುಕು – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅವಘಡ

ಬೆಂಗಳೂರು: ಕೇವಲ ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗುವುದಿಲ್ಲ. ಅದನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆ ತರಬೇಕು; ಆಗ ಗೌರವ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ತಿಳಿಸಿದರು.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಇಂದು ನಡೆದ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಸದಸ್ಯರು ಬಹುತೇಕ ನಿರ್ಣಾಯಕ ಮತ್ತು ಸ್ಥಳೀಯ ಶಕ್ತಿ. ಗ್ರಾಮ ಪಂಚಾಯತಿಯು ವಿಧಾನ ಪರಿಷತ್, ವಿಧಾನಸಭೆಗೆ ಹೆಬ್ಬಾಗಿಲು ಇದ್ದಂತೆ. ವಿಧಾನ ಪರಿಷತ್ ಪ್ರವೇಶಿಸಲು ಇಚ್ಛೆ ಇರುವವರೇ ಹೆಚ್ಚಾಗಿ ಗ್ರಾಮ ಪಂಚಾಯತಿಗಳನ್ನು ಪ್ರವೇಶಿಸುತ್ತಿದ್ದಾರೆ. ಎಲ್ಲ ಪಕ್ಷಗಳಲ್ಲೂ ಇಂಥವರಿದ್ದಾರೆ. ಕೇವಲ ನಮ್ಮ ಪಕ್ಷದಲ್ಲಿ ಅಲ್ಲ ಎಂದು ಅವರು ನುಡಿದರು.
ದೇಶದಲ್ಲಿ ಚೆಕ್‌ಗೆ ಸಹಿ ಮಾಡುವ ಅಧಿಕಾರವನ್ನು ಕೇವಲ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾತ್ರ ನೀಡಲಾಗಿದೆ. ಬೇರೆ ಯಾವ ಜನಪ್ರತಿನಿಧಿಗಳಿಗೆ ಇಲ್ಲ ಎಂದು ಅವರು ವಿವರಿಸಿದರು.
ಕಾಂಗ್ರೆಸ್ ನಮ್ಮ ಯೋಚನಾ ಶಕ್ತಿಯನ್ನೇ ಹಾಳು ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪಕ್ಷಪಾತ ಎಲ್ಲರಿಗೂ ತಿಳಿದಿದೆ. ಅದು ಚುನಾಯಿತ ಪ್ರತಿನಿಧಿಗಳ ಯೋಚನಾ ಶಕ್ತಿಯನ್ನೇ ಹಾಳು ಮಾಡಿ, ಅವರ ದಿಕ್ಸೂಚಿಯನ್ನೇ ಬದಲಾಯಿಸಿದ್ದು ದುರಂತ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಸದಸ್ಯರ ಅಧಿಕಾರ ಅನ್ನೋದು ಯಾವ ದೆಹಲಿ ನಾಯಕರಿಗೂ ಇಲ್ಲ, ಅಧಿಕಾರ ಅನ್ನೋದೆ ಸೇವೆ ಮಾಡಲಿಕ್ಕೆ, ಒಂದು ಮೈಕ್ ಮೂಲಕ ನೀರು ಬರುವುದನ್ನು ಜನರಿಗೆ ತಿಳಿಸಬಹುದು, ಜನಸಾಮಾನ್ಯರಿಗೆ ಹತ್ತಿರದಿಂದ ಸಮಸ್ಯೆ ನೋಡಲು ಅವಕಾಶ ಸಿಗುತ್ತದೆ. ಅದನ್ನು ಸದುಪಯೋಗ ಪಡಿಸಿಕೊಂಡು ಜನರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಲು ಉತ್ತಮ ವೇದಿಕೆ ಆಗಲಿದೆ, ಅದನ್ನ ಒಳ್ಳೆಯದಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.
ಗಾಂಧಿಯವರ ಗ್ರಾಮ ಸ್ವರಾಜ್ಯ ಚಿಂತನೆಯನ್ನು ಪಂಡಿತ್ ದೀನದಯಾಳ್ ಅಂತ್ಯೋದಯ ಎಂದರು, ಸರ್ವೋದಯ ಎಂದರೂ ಅದೇ ಆಗಿದೆ. ಗ್ರಾಮ ಪಂಚಾಯತಿಗಳು ಉತ್ತಮ ಗುಣಮಟ್ಟ ನೀಡಿ ಸಮಾಜದ ಮುಖ್ಯವಾಹಿನಿಗೆ ಜನರನ್ನು ತರುವುದೇ ಎಲ್ಲರ ಉದ್ದೇಶ ಎಂದು ವಿವರಿಸಿದರು.
ಗ್ರಾಮ ಪಂಚಾಯತಿಗಳಲ್ಲಿ ಹೈನುಗಾರಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆಗೆ ಉತ್ತೇಜನ ಕೊಡಬೇಕು. ಸ್ಥಳೀಯ ಉತ್ಪಾದನೆ, ಸ್ಥಳೀಯ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ಸದಸ್ಯರು ಸ್ವಯಂ ಪ್ರೇರಿತ ನಿರ್ಧಾರಗಳು ಕೈಗೊಳ್ಳಬೇಕು ಎಂದು ತಿಳಿಸಿದರು. ಎಲ್ಲರಿಗೂ ಸರ್ಕಾರಿ ಕೆಲಸ ಬೇಕು, ಆದರೆ ಯಾರಿಗೂ ಹಳ್ಳಿಗಳಲ್ಲಿ ಕೆಲಸ ಮಾಡಲು ಮನಸ್ಸಿಲ್ಲ. ನಗರ ಪ್ರದೇಶಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹಳ್ಳಿಗಳಲ್ಲಿ ಶಿಕ್ಷಕರು ಇಲ್ಲದೆ ಸೊರಗಿ ಹೋಗುತ್ತಿವೆ. ಹಳ್ಳಿಗಳಿಗೆ ಹೆಚ್ಚಿನ ಸೌಕರ್ಯ ಕೊಟ್ಟಾಗ ಜನರು ನಗರಗಳತ್ತ ಬರುವುದು ಕಡಿಮೆಯಾಗುತ್ತದೆ ಎಂದರು.
ನಿಮಗಿಂತ ಮೊದಲು ಗ್ರಾಮ ಪಂಚಾಯತಿ ಇತ್ತು. ಆಗಲೂ ಕಾಮಗಾರಿಗಳು ಆಗಿವೆ. ಸ್ವಾತಂತ್ರ್ಯ ಬಂದಾಗಿಂದ ಕಾಮಗಾರಿಗಳು ಆಗಿವೆ, ಆದ್ರೂ ಇನ್ನೂ ಕೊಳಗೇರಿಗಳಿವೆ, ಹಿಂದುಳಿದ ಗ್ರಾಮಗಳಿವೆ. ನಮ್ಮ ಕೆಲಸಗಳಿಂದ ನಮ್ಮನ್ನು ಗುರುತಿಸುವಂತೆ ಆಗಬೇಕಿತ್ತು. 30 ವರ್ಷಗಳು ಕಳೆದರೂ ಅಬ್ದುಲ್ ನಜೀರ್ ಸಾಬ್ ಅಥವಾ ನೀರ್ ಸಾಬ್ ಯಾರಿಗೆ ಗೊತ್ತಿಲ್ಲ ಹೇಳಿ, ಹಾಗೆ ನಮ್ಮ ಕೆಲಸ ನಮ್ಮ ಗುರುತು ಆಗಬೇಕು ಎಂದರು.
ಬಿಡಿಎ ಅಧ್ಯಕ್ಷ ಎಸ್‌. ಆರ್. ವಿಶ್ವನಾಥ್ ಮಾತನಾಡಿ, ಗ್ರಾಮ ಪಂಚಾಯತಿಗಳು ದೇಶದ ಅಭಿವೃದ್ಧಿಗೆ ದಾರಿ ದೀಪ, ಮತದಾರರಿಗೆ ಸುಲಭವಾಗಿ ತಲುಪಬಹುದಾದ ಏಕೈಕ ವೇದಿಕೆ. ಜನರಿಗೆ ಒಳ್ಳೆಯದನ್ನು ಮಾಡುವ ಜವಾಬ್ದಾರಿ ಜನರಿಂದ ಆಯ್ಕೆಯಾದ ನಮ್ಮ ಮೇಲೆ ಇದೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ಆರ್ಥಿಕ, ಸಾಮಾಜಿಕ, ಭೌತಿಕ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಗ್ರಾಮದ ಸಾಕ್ಷರತೆ, ಆರ್ಥಿಕ ಬೆಳವಣಿಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು