ಗುರುವಾರ, ಮೇ 9, 2024
ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಮೂವರು ಕಾಮುಕರನ್ನು ಬಂಧಿಸಿದ ಪೊಲೀಸರು.

Twitter
Facebook
LinkedIn
WhatsApp
ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಮೂವರು ಕಾಮುಕರನ್ನು ಬಂಧಿಸಿದ ಪೊಲೀಸರು.

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿನ ದೌರ್ಜನ್ಯ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಇಬ್ಬರು ಯುವಕರು ಸೇರಿ ಅದೇ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಅವರನ್ನು ಬಂಧಿಸಲಾಗಿದೆ.
ನವೆಂಬರ್ 4 ರಂದು ಬಂಟ್ವಾಳ ತಾಲೂಕಿನ ಮಹಿಳೆಯೋರ್ವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದು ಅಪ್ರಾಪ್ತ ಬಾಲಕಿಯಾದ ತನ್ನ ಮಗಳಿಗೆ ಫರಂಗಿಪೇಟೆ ರಿಕ್ಷಾ ಚಾಲಕನು ಮೈ ಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆ ಎಂದು ದೂರು ನೀಡಿದ್ದರು. ಅದರಂತೆ ಪೋಕ್ಸೋ ಆಕ್ಟ್‌ ರಂತೆ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಿಕ್ಷಾ ಚಾಲಕ ರಿಜ್ವಾನ್‌ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 5 ರಂದು ಅದೇ ಅಪ್ರಾಪ್ತ ಬಾಲಕಿಯು ತನ್ನ ತಾಯಿಯೊಂದಿಗೆ ಠಾಣೆಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು ತಾವಿದ್ದಲ್ಲಿಗೆ ಕರೆಸಿಕೊಂಡು ತನ್ನ ಮೇಲೆ ಒಬ್ಬರಾದ ಮೇಲೇ ಇನ್ನೊಬ್ಬರು ಜೊತೆಯಲ್ಲಿ ಲೈಂಗಿಕ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದರು. ಅದರಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 6 ಪೋಕ್ಸೋ ಆಕ್ಟ್‌ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಕೂಡಲೇ ಚುರುಕಾಗಿ ತನಿಖೆ ನಡೆಸಿದ ಪೊಲೀಸರು ಪೊಲೀಸ್‌ ಅಧೀಕ್ಷಕ ಋಷಿಕೇಶ್‌ ಸೋನವಾನೆ ಭಗವಾನ್‌ , ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ. ಶಿವಕುಮಾರ್‌ ಗುಣಾರೆ ರವರ ನಿರ್ಧೇಶನದಂತೆ ಬಂಟ್ವಾಳ ಉಪವಿಭಾಗಾಧಿಕಾರಿ ಶಿವಾಂಶು ರಜಪೂತ್‌ ಐ.ಪಿ.ಎಸ್‌ ರವರ ಸೂಚನೆಯಂತೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಟಿ.ಡಿ ನಾಗರಾಜ್‌,.ಪಿ.ಎಸ್‌.ಐ ಭಾರತಿ, ತರಭೇತಿ ಪಿ.ಎಸ್.ಐ ರಾಮಕೃಷ್ಣ, ವೀಣಾ ರಾಮಚಂದ್ರ, ಎ.ಎಸ್.ಐ ಬಾಲಕೃಷ್ಣ, ಸಿಬ್ಬಂದಿಯವರಾದ ಜನಾರ್ಧನ, ಸುರೇಶ್‌, ಪುನೀತ್‌, ಮನೋಜ್ ಕುಮಾರ್ ,ಲೋಲಾಕ್ಷಿ, ವಿಶಾಲಾಕ್ಷಿ ರವರುಗಳನ್ನೊಳಗೊಂಡ ತನಿಖಾ ತಂಡವು ಆರೋಪಿಗಳಾದ ಅರ್ಕುಳದ ಮಹಮ್ಮದ್‌ ಖಾಸೀಂ, ಸೇರಿ ಮೂವರನ್ನು ಬಂಧಿಸಿದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು