ಗುರುವಾರ, ಮೇ 2, 2024
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವ್ಯಾನ್‌ – ಟ್ಯಾಂಕರ್ ಭೀಕರ ಅಪಘಾತ : 5 ಮಂದಿ ಸಾವು, ಮೂವರ ಸ್ಥಿತಿ ಚಿಂತಾಜನಕ.

Twitter
Facebook
LinkedIn
WhatsApp
ವ್ಯಾನ್‌ – ಟ್ಯಾಂಕರ್ ಭೀಕರ ಅಪಘಾತ : 5 ಮಂದಿ ಸಾವು, ಮೂವರ ಸ್ಥಿತಿ ಚಿಂತಾಜನಕ.

ಅಹಮದಾಬಾದ್‌ : ವ್ಯಾನ್‌ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ(Accident 5 Death) , ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ವಲಾನಾ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ವಟಮಾನ್‌ನಿಂದ ಭಾವನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆನಂದ್ ಜಿಲ್ಲೆಯ ಖಂಭತ್‌ಗೆ ವ್ಯಾನ್‌ನಲ್ಲಿ ಎಂಟು ಜನರು ಪ್ರಯಾಣಿಸುತ್ತಿದ್ದರು. ವ್ಯಾನ್‌ ವಲನಾ ಗ್ರಾಮದ ಬಳಿಗೆ ಬರುತ್ತಿದ್ದಂತೆಯೇ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ. ಘಟನೆ ನಡೆಯುತ್ತಲೇ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೋರ್ವರು ಆಸ್ಪತ್ರೆಗೆ ದಾಖಲಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಪೈಕಿ ಮೂವರು ಮಹಿಳೆಯರಿದ್ದಾರೆ ಎಂದು ತಿಳಿದುಬಂದಿದೆ.

ಭೀಕರ ರಸ್ತೆ ಅಪಘಾತದಿಂದಾಗಿ ಶವಗಳು ವ್ಯಾನ್‌ನಲ್ಲಿ ಅಂಟಿಕೊಂಡಿದ್ದು, ಶವಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯ್ತು. ಇನ್ನು ವ್ಯಾನಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೋಥ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು