ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಿಂದ ದ.ಕ ಜಿಲ್ಲೆ ಪ್ರವೇಶ ಪಡೆಯಲು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ.

Twitter
Facebook
LinkedIn
WhatsApp
ಕೇರಳದಿಂದ ದ.ಕ ಜಿಲ್ಲೆ ಪ್ರವೇಶ ಪಡೆಯಲು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಮಂಗಳೂರು: ರೂಪಾಂತರಿತ ಕೊರೊನಾ ವೈರಸ್‌ ಒಮಿಕ್ರಾನ್‌ ವಿದೇಶದಲ್ಲಿ ಪತ್ತೆಯಾಗಿರುವ ಹಿನ್ನೆಲೆ, ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಪಡೆಯಲು ಆರ್‌ಟಿಪಿಸಿಆರ್‌ ನೆಗೆಟಿವ್‌ ಪ್ರಮಾಣ ಪತ್ರ ಹೊಂದುವುದು ಕಡ್ಡಾಯಗೊಳಿಸಲಾಗಿದೆ. ಈ ಕುರಿತು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿದ್ದು, ಕೇರಳದಿಂದ ದ.ಕ. ಪ್ರವೇಶದ ಗಡಿಯಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾವಹಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಗಡಿಯಲ್ಲಿ ಚೆಕ್‌ಪೋಸ್ಟ್‌ ಮಾಡಿ 3 ಪಾಳಿಗಳಲ್ಲಿ ಅಧಿಕಾರಿ, ಸಿಬಂದಿ, ಪೊಲೀಸರನ್ನು ನಿಯೋಜಿಸಬೇಕು. ಕೇರಳದಿಂದ ಬರುವವರೆಲ್ಲರೂ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರುವುದನ್ನು, ಲಸಿಕೆ ಪಡೆದಿರುವುದನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ಬಂದ ಬಳಿಕ 7 ದಿನಗಳ ಕಾಲ ಕಾರಂಟೈನ್‌ ಆಗಬೇಕು ಅಂತಾ ಸಿಎಂ ನಿರ್ದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ತಪಾಸಣೆಗೆ ಮತ್ತಷ್ಟು ವೇಗ ನೀಡಬೇಕು. ದೃಢಪಟ್ಟವರ ಪ್ರಾಥಮಿಕ ಸಂಪರ್ಕ ಪತ್ತೆ ಹಚ್ಚಬೇಕು. ಕೊರೊನಾ ಸಾಮುದಾಯಿಕವಾಗಿ ಹರಡದಂತೆ ಜಾಗೃತೆ ವಹಿಸಬೇಕು ಅಂತಾ ಸೂಚಿಸಿದ್ದಾರೆ ಎಂದರು.

ಇನ್ನೂ ದ.ಕ. ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌ ಪ್ರತಿಕ್ರಿಯಿಸಿ, ಎಲ್ಲ ಶಾಲಾ-ಕಾಲೇಜು ಕ್ಯಾಂಪಸ್‌ಗಳಲ್ಲಿ ಹಾಸ್ಟೆಲ್‌ಗ‌ಳಲ್ಲಿ ಮಾಸ್‌ ಸ್ಕ್ರೀನಿಂಗ್‌ಗೆ ಸೂಚನೆ ನೀಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಿಮಾನ ನಿಲ್ದಾಣದಲ್ಲಿಯೂ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ. ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಮಾಲ್‌ಗ‌ಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಹೊಸ ತಳಿ ಪತ್ತೆಯಾದ ದೇಶಗಳಿಂದ ಮಂಗಳೂರಿಗೆ ನೇರ ವಿಮಾನವಿಲ್ಲ. ಆದರೂ ವಿದೇಶಗಳಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ದಿನದ ಪ್ರಕರಣ ಇಳಿಕೆ ಕಾಣುತ್ತಿದೆ. ಸದ್ಯ ಇರುವ ಸಕ್ರಿಯ ಪ್ರಕರಣಗಳಲ್ಲಿ ಹದಿನೇಳು ವರ್ಷ ಕೆಳಗಿನ 32 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಅದರಲ್ಲಿ ಕೆಲವರು ಶಾಲಾ-ಕಾಲೇಜು ವಿದ್ಯಾರ್ಥಿಗಳು. ಈ ಹಿನ್ನೆಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಮುಂದೆ ಬರಬೇಕು ಎಂದಿದ್ದಾರೆ.
ದಕ್ಷಿಣ ಕನ್ನಡ-ಕಾಸರಗೋಡು ನಡುವೆ ಕೆಲ ದಿನಗಳ ಹಿಂದೆಯಷ್ಟೇ ಬಸ್‌ ಸಂಚಾರ ಆರಂಭಗೊಂಡಿದೆ. ಆದರೆ ಇದೀಗ ಕೇರಳದಿಂದ ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ಪ್ರಮಾಣ ಪತ್ರ ಕಡ್ಡಾಯ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ನಡುವಣ ಬಸ್‌ ಸಂಚಾರ ಮತ್ತೆ ನಿರ್ಬಂಧಗೊಳ್ಳುವ ಸಾಧ್ಯತೆ ಇದೆ. ಈ ಕುರಿತಂತೆ ಎರಡು ದಿನದೊಳಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು