ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಚಾಲನೆ

Twitter
Facebook
LinkedIn
WhatsApp
ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಸೈಬರ್ ಕ್ರೈಂ ತಡೆಗಟ್ಟುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಪೀಳಿಗೆಗೆ ತರಬೇತಿ ನೀಡಲು ಕೈಗೊಂಡಿರುವ ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಎಫ್ಎಸ್ಎಲ್ ಕೇಂದ್ರ ಹೊಸ ಟೆಕ್ನಾಲಜಿಯನ್ನು ಹೊಂದಿದೆ. ಸೈಬರ್ ಪ್ರಕರಣಗಳನ್ನು ಪತ್ತೆ ಹಚ್ಚಲು ನಮ್ಮ ಕರ್ನಾಟಕ ಪೊಲೀಸರು ಸಮರ್ಥರಿದ್ದಾರೆ. ಯುವಕರ ಸುರಕ್ಷತೆಗೆ ಸರಕಾರ ಸಾಕಷ್ಟು ಕ್ರಮ ತೆಗೆದುಕೊಂಡಿದೆ. ಡ್ರಗ್ಸ್‌ಗೆ ಕಡಿವಾಣ ಹಾಕುತ್ತಿದೆ. ಸೈಬರ್ ಮೂಲಕವೇ ನಡೆಯವ ಡಾರ್ಕ್ ವೆಬ್ ಗೂ ಕಡಿವಾಣ ಹಾಕುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಸೈಬರ್ ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತದೆ. ಸೈಬರ್ ಕ್ರೈಂ ತಡೆಗಟ್ಟುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದರು.
ಸೈಬರ್ ಕ್ರೈಂಗೂ ಭೌತಿಕ ಅಪರಾಧಕ್ಕೂ ವ್ಯತ್ಯಾಸ ಇದೆ. ಸರಕಾರದ ಇಲಾಖೆಗಳಲ್ಲೂ ಸೈಬರ್ ಕ್ರೈಂಗಳಾಗಿರುವ ಉದಾಹರಣೆ ಇವೆ. ನನ್ನ ಸುರಕ್ಷತೆಯನ್ನು ಹೇಗೆ ಮಾಡಿಕೊಳ್ಳುತ್ತೇನೋ ಅದೇ ರೀತಿ ನನ್ನ ಡಿಜಿಟಲ್ ಸುರಕ್ಷತೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಬಹಳಷ್ಟು ಜನರು ಮೊಬೈಲ್ ಸೇರಿದಂತೆ ಡಿಜಿಟಲ್ ವಸ್ತುಗಳನ್ನು ಬಳಸುತ್ತಾರೆ. ಆದರೆ ಬಹಳಷ್ಟು ಜನ ವಿದ್ಯಾವಂತರಿಗೂ ಸೈಬರ್ ಸುರಕ್ಷತೆ ಬಗ್ಗೆ ಗೊತ್ತಾಗಲ್ಲ ಎಂದು ತಿಳಿಸಿದರು.

ಸೈಬರ್ ಕ್ರೈಂಗೆ ಸಾಕಷ್ಟು ಬಡ ಕುಟುಂಬಗಳು ನಾಶವಾಗುತ್ತಿವೆ. ಸೈಬರ್ ಕ್ರೈಮ್ ಅನ್ನೋದು ವೈರಸ್ ಇದ್ದಂತೆ, ಅದನ್ನು ಸದೆ ಬಡೆಯಲು ಸರಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಮತ್ತು ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸಚಿವ ಡಾ.ನಾರಾಯಣಗೌಡ ಮಾತನಾಡಿ, ಇದೊಂದು ವಿನೂತನ ಕಾರ್ಯಕ್ರಮ. ದೇಶದಲ್ಲೇ ಪ್ರಥಮವಾಗಿ ಅಭಿಯಾನ ನಡೆಸುತ್ತಿರುವುದಕ್ಕೆ ಸಂತಸವಾಗಿದೆ. ಎನ್‌ಎನ್ಎಸ್ ಸ್ವಯಂ ಸೇವಕರಿಗೆ ತರಬೇತಿ ನೀಡಿ ಅವರ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ಕರ್ನಾಟಕದ ಎಲ್ಲಾ ಜಿಲ್ಲೆಯಲ್ಲೂ ತರಬೇತಿಯನ್ನು ನೀಡಿ, ಸರ್ಟಿಫಿಕೇಟ್ ಕೂಡ ನೀಡಲಾಗುತ್ತದೆ. ಮುಂದಿನ ಹಂತದಲ್ಲಿ ಪೊಲೀಸ್ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲೂ ಸೈಬರ್ ಸೇಫ್ ಸಂಬಂಧ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ. ಮಹಿಳೆಯರು, ಯುವ ಜನತೆ ಸೇರಿದಂತೆ ಎಲ್ಲರೂ ಸೈಬರ್ ವಂಚನೆಗಳಿಂದ ಸುರಕ್ಷಿತವಾಗಿರಬೇಕು. ಈ ನಿಟ್ಟಿನಲ್ಲಿ ಕೈಗೊಂಡಿರುವ ಈ ಅಭಿಯಾನ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು