ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಮುಖ ಖಾದ್ಯ ತೈಲ ಬೆಲೆಯಲ್ಲಿ ಭಾರೀ ಇಳಿಕೆ!

Twitter
Facebook
LinkedIn
WhatsApp
ಪ್ರಮುಖ ಖಾದ್ಯ ತೈಲ ಬೆಲೆಯಲ್ಲಿ ಭಾರೀ ಇಳಿಕೆ!

ಪ್ರಮುಖ ಖಾದ್ಯ ತೈಲ ಕಂಪೆನಿಗಳು ಉತ್ಪನ್ನಗಳ ಗರಿಷ್ಠ ಚಿಲ್ಲರೆ ಬೆಲೆಯನ್ನು (ಎಂಆರ್‌ಪಿ) ರೂ. 30ರಿಂದ ರೂ. 40ರಷ್ಟು ಕಡಿತಗೊಳಿಸಿವೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ. “ಎಲ್ಲ ದೊಡ್ಡ ಬ್ರ್ಯಾಂಡ್‌ಗಳು ಖಾದ್ಯ ತೈಲಗಳ ಬೆಲೆಯಲ್ಲಿ ಭಾರಿ ಕಡಿತಗೊಳಿಸಿವೆ. ಎಂಆರ್‌ಪಿಯಲ್ಲಿ ರೂ. 30 ರಿಂದ ರೂ. 40 ಕಡಿತಗೊಳಿಸಲಾಗಿದೆ ಹಾಗೂ ಹೊಸ ಎಂಆರ್‌ಪಿಯೊಂದಿಗೆ ಷೇರು ಮಾರುಕಟ್ಟೆಯಲ್ಲಿ ನೀಡಲಾಗಿದೆ. ಈಗ ಪೂರೈಕೆಯು ಹೊಸ ಎಂಆರ್​ಪಿಯೊಂದಿಗೆ ಲಭ್ಯವಿದೆ. ಇದು ಗ್ರಾಹಕರಿಗೆ ನಿರಾಳವನ್ನು ನೀಡುತ್ತದೆ,” ಎಂದು ಸುಧಾಂಶು ಎಎನ್​ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. “ಗ್ರಾಹಕರಿಗೆ ತಕ್ಷಣದ ಪ್ರಯೋಜನಗಳನ್ನು ಒದಗಿಸುವುದು ಉದ್ದೇಶವಾಗಿದೆ. ಹೊಸ ಎಂಆರ್​ಪಿ ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆಗಳನ್ನು ನೀಡಲಾಗಿದೆ,” ಎಂದು ಅವರು ಹೇಳಿದ್ದಾರೆ.
2021ರಲ್ಲಿ ಇಲಾಖೆಯ ಸಾಧನೆಗಳ ಬಗ್ಗೆ ತಿಳಿಸಿರುವ ಪಾಂಡೆ, “ಈ ವರ್ಷ ನಾವು ಒನ್ ನೇಷನ್ ಒನ್ ರೇಷನ್ ಕಾರ್ಡ್‌ನಲ್ಲಿ ಪೋರ್ಟೆಬಿಲಿಟಿ ವಹಿವಾಟಿನಲ್ಲಿ 50 ಕೋಟಿ ಗಡಿ ದಾಟಿದ್ದೇವೆ. ಕೊವಿಡ್-19 ಅವಧಿಯಲ್ಲಿ ನಾವು ಸುಮಾರು 43 ಕೋಟಿ ವಹಿವಾಟುಗಳನ್ನು ದಾಟಿದ್ದೇವೆ. ಇದು ಒಂದು ದೊಡ್ಡ ಸಾಧನೆಯಾಗಿದೆ,” ಎಂದಿದ್ದಾರೆ. “ಅಸ್ಸಾಂನಲ್ಲಿಯೂ 34 ಸಾವಿರ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ ಸಾಧನಗಳಲ್ಲಿ (e-pos) 13 ಸಾವಿರ e-posಗಳನ್ನು ಅಳವಡಿಸಲಾಗಿದೆ. ಮುಂಬರುವ ಎರಡು ತಿಂಗಳಲ್ಲಿ ಅಸ್ಸಾಂ ಮತ್ತು ಛತ್ತೀಸ್‌ಗಢ ಎರಡೂ ರಾಜ್ಯಗಳನ್ನು ಒಂದಕ್ಕೆ ಸೇರಿಸಲಾಗುವುದು ಎಂದು ನಾವು ಭಾವಿಸುತ್ತೇವೆ. ಈ ಆರ್ಥಿಕ ವರ್ಷದಲ್ಲಿ ಒಂದು ದೇಶ- ಒಂದು ಪಡಿತರ ಚೀಟಿ ಯೋಜನೆಯಲ್ಲಿ ಇಡೀ ದೇಶವು ಸೇರುತ್ತದೆ,” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಉಲ್ಲೇಖಿಸುವಾಗ, “ಕೊರೊನಾ ಸಮಯದಲ್ಲಿ ಉನ್ನತ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. PMGKAY ಅನ್ನು ಮುಂದಕ್ಕೆ ಕೊಂಡೊಯ್ಯಲು ಪ್ರಧಾನಿ ಮಾಡಿದ ಘೋಷಣೆಯು ದೀರ್ಘ ಕಾಲದ ಪರಿಣಾಮಗಳನ್ನು ಹೊಂದಿದೆ. ಜನರು ಎನ್‌ಎಫ್‌ಎಸ್‌ಎಯಿಂದ ಪಡೆಯುವ ಪಡಿತರ ಜೊತೆಗೆ ಹೆಚ್ಚುವರಿ ಪಡಿತರವನ್ನು ಪಡೆಯುವುದನ್ನು ಮುಂದುವರಿಸುತ್ತಾರೆ. ಇದರಿಂದಾಗಿ, ದೇಶದ ಯಾವುದೇ ಭಾಗದಲ್ಲಿ ಕೊರತೆಯಾಗುವುದಿಲ್ಲ,” ಎಂದಿದ್ದಾರೆ.
ಪಾಂಡೆ ಅವರು ಮತ್ತಷ್ಟು ಮುಂದುವರಿದು, “ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯು ಅತ್ಯಂತ ವೇಗವಾಗಿ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರ ಸಕಾರಾತ್ಮಕ ಫಲಿತಾಂಶಗಳು ಹೊರಬರುತ್ತಿವೆ. ನಾವು ಈ ವರ್ಷ ಎಥೆನಾಲ್ ಮಿಶ್ರಣದಲ್ಲಿ ಶೇ 62ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದೇವೆ. ಇದು ಇದುವರೆಗಿನ ಅತ್ಯಧಿಕವಾಗಿದೆ,” ಎಂದು ಹೇಳಿದ್ದಾರೆ. ಇದೀಗ ನಾವು ಶೇಕಡಾ 5ರಿಂದ ಶೇಕಡಾ 8ಕ್ಕೆ ತಲುಪಿದ್ದೇವೆ. ಈ ವರ್ಷ ನಾವು ಶೇಕಡಾ 10ರಷ್ಟು ಸಾಧಿಸುವ ಗುರಿ ಹೊಂದಿದ್ದೇವೆ. ಇದು ರೈತರು, ಪರಿಸರದ ಮೇಲೆ ಪ್ರಭಾವ ಬೀರುತ್ತದೆ ಮತ್ತು ವಿದೇಶಿ ವಿನಿಮಯವನ್ನು ಉಳಿಸುತ್ತದೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು