ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ವಿಧಿವಶ

Twitter
Facebook
LinkedIn
WhatsApp
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ವಿಧಿವಶ

ಜೋಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ ವಯೋ ಸಹಜತೆಯ ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ನಿಂತಿದ್ದ ಹಾಗೂ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಮಹಾದೇವ ವೇಳಿಪ ಈಗ ಕೇವಲ ನೆನಪು ಮಾತ್ರ.
ಕಲಾವಿದ ಮಹಾದೇವ ವೇಳಿಪ ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ ಬೆಳಸುವ ಜೊತೆಗೆ ಅರಣ್ಯ ಸಂರಕ್ಷಣೆ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಿ ಪರಿಸರ ಪ್ರೇಮಿಯಾಗಿದ್ದರು. ಜನಪದ ಹಾಡುಗಳನ್ನು ಸಾವಿರ ಲೆಕ್ಕದಲ್ಲಿ ನಿರಂತರ ಹಾಡುತಿದ್ದ ಮಹಾದೇವ ವೇಳಿಪ ಅವರ ಸಾಧನೆ ಅಪಾರ.

ಹಿಂದುಳಿದ ಪ್ರದೇಶವಾದ ಜೊಯಿಡಾ ತಾಲೂಕಿನ ಕಾಟೋ೯ಳಿ ಭಾಗದವರಾದ ಇವರು ಚಿಕ್ಕಂದಿನಿಂದಲೇ ಪರಿಸರದ ಪರ ಒಲವು ಬೆಳೆಸಿಕೊಂಡಿದ್ದರು. ಕುಣಬಿ ಬುಡಕಟ್ಟು ಸಮುದಾಯದ ಹಿರಿಯರಾದ ಮಾದೇವ ವೇಳಿಪ ಅವರು ಮಳೆ, ಪಕ್ಷಿ, ಗಿಡಮರಗಳ ಬಗ್ಗೆ, ರಾಮಾಯಣ, ಮಹಾಭಾರತದ ಕುರಿತಾದ ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತಾರೆ. ವಿಶೇಷವಾಗಿ ಯಾವುದೇ ಕಾಯಿಲೆ, ರೋಗಗಳು ಬಂದರೆ ಗಿಡಮೂಲಿಕೆಗಳ ಮೂಲಕವೇ ಔಷಧಿಯನ್ನು ನೀಡುವುದರಲ್ಲಿ ಪರಿಣಿತಿ ಹೊಂದಿದ್ದ ಇವರು ನೂರಾರು ಜನರ ಪ್ರಾಣವನ್ನು ಉಳಿಸಿದ್ದಾರೆ.

ಜೀವನ ನಿರ್ವಹಣೆಗಾಗಿ ಅಪರೂಪದ ಗೆಡ್ಡೆ ಗೆಣಸುಗಳನ್ನು ಬೆಳೆದ ವೇಳಿಪ ಅವರಿಗೆ ಮೂರು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದು, ಪತ್ನಿ ಪಾರ್ವತಿ ವೇಳಿಪ ಅವರು ಕಳೆದ ಹತ್ತು ವರ್ಷಗಳ ಹಿಂದೆ ನಿಧನರಾಗಿದ್ದಾರೆ. ವಿಶೇಷ ಅಂದ್ರೆ ಇವರ ಪರಿಸರ ಕಾಳಜಿ ಮೆಚ್ಚಿ ಪವರ್‌ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅವರು ಜೋಯ್ಡಾಗೆ ಬಂದಿದ್ದ ವೇಳೆ ಮಾದೇವ ವೇಳಿಪ ಅವರನ್ನು ಭೇಟಿಯಾಗಿ ಅವರ ನಿಸ್ವಾರ್ಥ ಸೇವೆಯನ್ನು ಮೆಚ್ಚಿ ಕೊಂಡಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು