ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರಿನಲ್ಲಿ ದಿಡೀರ್ ಇಳಿಕೆಯಾದ ಟ್ರಾಫಿಕ್ ಸಮಸ್ಯೆ!!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ದಿಡೀರ್ ಇಳಿಕೆಯಾದ ಟ್ರಾಫಿಕ್ ಸಮಸ್ಯೆ!!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ವಾಹನ ದಟ್ಟಣೆ, ಟ್ರಾಫಿಕ್‌ ಜಾಮ್‌ ಗೆ ಹೆಸರಯವಾಸಿ. ಆದರೆ ಇದೇ ಬೆಂಗಳೂರಿನಲ್ಲಿ ಕಳೆದ ವರ್ಷ (2021)ದಲ್ಲಿ ಶೇ.32ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಭೌಗೋಳಿಕ ಪ್ರದೇಶ ತಂತ್ರಜ್ಞಾನ ತಜ್ಞ ಸಂಸ್ಥೆ ಟಾಮ್‌ ಟಾಮ್‌ ವರದಿ ಮಾಡಿದ್ದು, ಬೆಂಗಳೂರಿನಲ್ಲಿ ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ 2021ರಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದೆ.
2017ರಲ್ಲಿ ಶೇ.71ರಷ್ಟಿದ್ದ ವಾಹನ ದಟ್ಟಣೆ ಈ ವರ್ಷ ಶೇ.48ಕ್ಕೆ ಇಳಿದಿದೆ ಅಂದರೆ ಶೇ.32ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ. ಇನ್ನು ಮುಂಬೈ ನಲ್ಲಿ ಶೇ.18ರಷ್ಟು, ದೆಹಲಿಯಲ್ಲಿ ಶೇ.14ರಷ್ಟು, ಪುಣೆಯಲ್ಲಿ ಶೇ.29ರಷ್ಟು ವಾಹನ ದಟ್ಟಣೆ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಶೇ.32ರಷ್ಟು ಕಡಿಮೆಯಾಗಿದ್ದು, 2019ರಲ್ಲಿದ್ದ 6ನೇ ಸ್ಥಾನದಿಂದ ಈಗ 2021ರಲ್ಲಿ 10ನೇ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ವೇಳೆ ರಾಷ್ಟ್ರರಾಜಧಾನಿ ದೆಹಲಿಗೆ 11ನೇ ಸ್ಥಾನ, ಮುಂಬೈ ಗೆ 5ನೇ ಸ್ಥಾನ ಹಾಗೂ ಮಹಾರಾಷ್ಟ್ರದ ಪುಣೆ ನಗರಕ್ಕೆ 21ನೇ ಸ್ಥಾನ ಸಿಕ್ಕಿದೆ. ಬಹುತೇಕ ಖಾಸಗಿ ಕಂಪನಿಗಳು, ಶಾಲಾ ಕಾಲೇಜುಗಳು ವರ್ಕ್‌ ಫ್ರಂ ಹೋಂ ಹಾಗೂ ಆನ್‌ ಲೈನ್‌ ಆಗಿರುವುದರಿಂದ ವಾಹನ ದಟ್ಟಣೆ ಕಡಿಮೆಯಾಗಲೂ ಕಾರಣವಾಗಿದೆ ಎಂದು ತಿಳಿಸಿದೆ.
ಎಲೆಕ್ಟ್ರಿಕ್‌ ಬೈಕ್‌ ಬಳಕೆ ಹೆಚ್ಚು: ಎಷ್ಟೇ ವಾಹನ ದಟ್ಟಣೆ ಕಡಿಮೆಯಾದರೂ ಜನರು ತಮ್ಮ ಖಾಸಗಿ ವಾಹನ ಖರೀದಿಯನ್ನು ಹೆಚ್ಚಿಸಿದ್ದಾರೆ. ಅದರಲ್ಲೂ ಈ ಬಾರಿ ಎಲೆಕ್ಟ್ರಿಕ್‌ ವಾಹನಗಳ ಮೊರೆ ಹೋಗಿದ್ದಾರೆ. 2021ರಲ್ಲಿ ಬರೋಬ್ಬರಿ 22,264 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿದ್ದು, 2018ರಲ್ಲಿ ಈ ಪ್ರಮಾಣ ಕೇವಲ 3,806 ಇತ್ತು.
ಟಾಮ್‌ ಟಾಮ್‌ ಸಂಸ್ಥೆ ವಿಶ್ವದ 58 ರಾಷ್ಟ್ರಗಳ 404 ನಗರಗಳ ಟ್ರಾಫಿಕ್‌ ಟ್ರೆಂಡ್‌ ಗಳನ್ನು ಪ್ರತಿ ವರ್ಷ ಬಿಡುಗಡೆ ಮಾಡುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು