ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಂಚರಾಜ್ಯ ಚುನಾವಣೆ ಬಳಿಕ ಕರ್ನಾಟಕ ರಾಜ್ಯದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ-ಎಚ್ ಡಿ ದೇವೇಗೌಡ ಅಭಿಮತ

Twitter
Facebook
LinkedIn
WhatsApp
ಕರಾವಳಿಯಲ್ಲಿ ರಾಜಕೀಯ ಲಾಭಕ್ಕಾಗಿ ಅಶಾಂತಿ ಸೃಷ್ಟಿಸಲಾಗುತ್ತಿದೆ-ಮಾಜಿ ಪ್ರಧಾನಿ ದೇವೇಗೌಡ ಕಿಡಿ

ಮಂಗಳೂರು: ಉತ್ತರ ಪ್ರದೇಶ ಸಹಿತ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಜಕೀಯ ಬೆಳವಣಿಗೆ ಉಂಟಾಗಲಿದೆ  ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೇಶದ ಇಂದಿನ ರಾಜಕೀಯ ಸ್ಥಿತಿಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬಿಟ್ಟು ದೇಶ ಆಳುವುದು ಕಷ್ಟ ಇದೆ. ಜೆಡಿಎಸ್ ಪಕ್ಷವನ್ನು ಮತ್ತೆ ಬಲಪಡಿಸಲು ರಾಜ್ಯಾದ್ಯಂತ ಪ್ರವಾಸ ನಡೆಸುತ್ತೇನೆ. ಪ್ರತಿ ತಿಂಗಳೂ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ನನ್ನ ಅನುಭವದ ಆಧಾರದಲ್ಲಿ ಮುಂದಿನ ಒಂದು ವರ್ಷದಲ್ಲಿ ಪಕ್ಷವನ್ನು ಕಟ್ಟುವ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ಕುಮಾರಸ್ವಾಮಿ ಅವರು ಈಗಾಗಲೇ ಪಂಚರತ್ನ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. ಮಂಗಳೂರಿನಿಂದ ಪಕ್ಷ ಸಂಘಟನೆ ಆರಂಭಿಸಿ ರಾಜ್ಯಾದ್ಯಂತ ವಿಸ್ತರಿಸುತ್ತೇವೆ ಎಂದರು.
ದೇಶದಲ್ಲಿ ಜಾತ್ಯಾತೀತ ಪಕ್ಷಗಳನ್ನು ಒಂದುಗೂಡಿಸಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಎರಡು ಬಾರಿ ಪ್ರಯತ್ನ ನಡೆಸಿದ್ದೆ. ಆದರೆ, ಆ ಪ್ರಯತ್ನ ಸಫಲವಾಗಲಿಲ್ಲ. ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್ ಎಂದು ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಹೇಳಿದ ಪರಿಣಾಮ ನಾವು ಹಾಸನ ವಿಧಾನಸಭಾ ಕ್ಷೇತ್ರ ಕಳೆದುಕೊಳ್ಳಬೇಕಾಯಿತು. ರಾಜ್ಯದಲ್ಲಿ ಜೆಡಿಎಸ್‌ಗೆ ೩೦ಕ್ಕೂ ಅಧಿಕ ಸ್ಥಾನ ನಷ್ಟವಾಯಿತು. ಅದರ ಪರಿಣಾಮವನ್ನು ಕಾಂಗ್ರೆಸ್ ಈಗ ಅನುಭವಿಸುತ್ತಿದೆ. ರಾಜ್ಯದಲ್ಲಿ ಮುಂದಿನ ಅವಧಿಗೆ ಸಮ್ಮಿಶ್ರ ಸರಕಾರ ರಚನೆಗೊಳ್ಳುವ ಸಾಧ್ಯತೆಯಿದೆ. ಆ ಸಂದರ್ಭ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮ್ಮ ಬಳಿ ಬರಬಹುದು. ಆ ವೇಳೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜಾತ್ಯಾತೀತ ಪಕ್ಷಕ್ಕೆ ನಮ್ಮ ಒಲವು ಎಂದು ಅವರು ಹೇಳಿದರು.
ಹಿಜಾಬ್ ವಿವಾದ ಹೇಗೆ, ಎಲ್ಲಿಂದ, ಯಾಕೆ ಹುಟ್ಟಿಕೊಂಡಿತು,ಇದಕ್ಕೆ ಮೂಲ ಕಾರಣ ಯಾರು ಎಂಬ ಬಗ್ಗೆ ಗೊತ್ತಿದೆ. ಇದರ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಮತ್ತೊಂದು ಸಣ್ಣ ರಾಜಕೀಯ ಪಕ್ಷ ಇದೆ. ಕರಾವಳಿಯಿಂದ ಚಿಕ್ಕಮಗಳೂರುವರೆಗೆ ಸಮಸ್ಯೆಗಳನ್ನು ಉದ್ಭವಿಸುವ ಕೆಲ ಶಕ್ತಿಗಳಿವೆ. ನಾನು ಎಂದೂ ಧರ್ಮದ ಆಧಾರದಲ್ಲಿ ವೈಷಮ್ಯ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿಲ್ಲ. ಪ್ರಸ್ತುತ ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ. ಕರಾವಳಿಯಲ್ಲಿ ಇಂತಹ ಪ್ರಯತ್ನ ನಡೆಯುತ್ತಿರುವುದು ದುರಂತ ಎಂದು ದೇವೇಗೌಡ ಹೇಳಿದರು.
ಜಾತ್ಯಾತೀತ ಪಕ್ಷಗಳು ಒಂದಾಗದಿರುವುದು ನಮ್ಮ ಹಿನ್ನಡೆಗೆ ಕಾರಣ. ಬಿಜೆಪಿಯಲ್ಲಿ ನರೇಂದ್ರ ಮೋದಿ ಒಬ್ಬರೇ ಎಲ್ಲ ಕಡೆ ತೆರಳುತ್ತಿದ್ದಾರೆ. ಮೋದಿ ಹೊರತುಪಡಿಸಿ ಬಿಜೆಪಿಗೆ ಶಕ್ತಿ ತುಂಬುವ ಬೇರೆ ವ್ಯಕ್ತಿ ಬಿಜೆಪಿಯಲ್ಲಿಲ್ಲ. ಮೋದಿ ಅವರಿಗೆ ವಿಲ್ ಪವರ್ ಇದೆ. ಉತ್ತರಪ್ರದೇಶ ಸಹಿತ ಪಂಚರಾಜ್ಯಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮೋದಿ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ನಾನು ಮೋದಿ ಅವರನ್ನು ಭೇಟಿ ಮಾಡಲು ತೆರಳಿದಾಗ ನನ್ನನ್ನು ಕೈಹಿಡಿದು ಕರೆದುಕೊಂಡು ಹೋದರು. ಚುನಾವಣೆ ಸಂದರ್ಭ ನಮ್ಮಿಬ್ಬರ ನಡುವಿನ ಪಂಥವನ್ನು ಮರೆತು ನೀವು ಹಿರಿಯರು ನಮಗೆ ಸಲಹೆ ನೀಡಬೇಕು ಎಂದು ನನ್ನ ಎಲ್ಲ ಮಾತು ಆಲಿಸಿದರು ಎಂದು ದೇವೇಗೌಡ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು