![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಂಗಳೂರು: ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಮಾ.2ಕ್ಕೆ ಫಿಕ್ಸ್ ಆಗಿದೆ. ಬಿಜೆಪಿ ಬಹುಮತ ಇರುವ ಪಾಲಿಕೆ ಆಡಳಿತದಲ್ಲಿ ಮುಂದಿನ ಮೇಯರ್ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಆಕಾಂಕ್ಷಿಗಳ ತೆರೆಮರೆ ಕಸರತ್ತು ಜೋರಾಗಿದೆ.
ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮೊದಲ ಅವಧಿಯಲ್ಲಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಮೇಯರ್ ಗದ್ದುಗೆಗೇರಿದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾದ ಕಾರಣ ಯಾವುದೇ ಜಿದ್ದಾಜಿದ್ದಿ ಇಲ್ಲದೆ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿಗೆ ಮೇಯರ್ ಹುದ್ದೆ ಒಲಿದು ಬಂದಿತ್ತು. ಇದೀಗ ಮೂರನೇ ಅವಧಿಯ ಮೀಸಲಾತಿಯೂ ಸಾಮಾನ್ಯ ಅಭ್ಯರ್ಥಿಗೆ ನಿಗದಿಯಾದ ಕಾರಣ ಬಿಜೆಪಿಯ ಕೆಲವರು ಗದ್ದುಗೆ ಏರಲು ಪ್ರಭಾವ ಬೀರುತ್ತಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸತತ ಎರಡು ಬಾರಿ ಮೇಯರ್ ಹುದ್ದೆ ಒಲಿದಿರುವುದರಿಂದ ಈ ಬಾರಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮೇಯರ್ ಹುದ್ದೆ ಕೊಡಿಸಬೇಕು ಎಂದು ಪ್ರಬಲ ಲಾಬಿ ಶುರುವಾಗಿದೆ. ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್‌ಗಳ ಪೈಕಿ ಬಿಜೆಪಿ 20 ವಾರ್ಡ್‌ಗಳಲ್ಲಿ ಜಯಭೇರಿ ಭಾರಿಸುವುದರ ಜತೆಯಲ್ಲಿ ಕ್ರಿಯಾಶೀಲ ಯುವ ಹಾಗೂ ಹಿರಿ ಸದಸ್ಯರಲ್ಲಿ ಕೆಲವರು ಪ್ರಭಾವಿ ಕಾರ್ಪೊರೇಟರ್ ಆಗಿರುವ ಕಾರಣ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮೇಯರ್ ಹುದ್ದೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಉತ್ತರದ ಮಟ್ಟಿಗೆ 16ನೇ ಬಂಗ್ರಕೂಳೂರು ವಾರ್ಡ್‌ನ ಕಿರಣ್ ಕೋಡಿಕಲ್ ಹೆಸರು ಮುಂಚೂಣಿಯಲ್ಲಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist