ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಪಕ್ಷದ ನಾಯಕತ್ವವನ್ನು ಕುರಿತ ಹೇಳಿಕೆಗೆ ಸ್ವಪಕ್ಷೀಯ ನಾಯಕರು ವಿರೋಧಿಸುತ್ತಿದ್ದಾರೆ. ಹೀಗಾಗಿ “ಸತ್ಯ ಎಂದಿಗೂ ಕಹಿ” ಎಂದು ಕಾಂಗ್ರೆಸ್ ಬಗ್ಗೆ ಬಿಜೆಪಿಯೂ ವ್ಯಂಗ್ಯವಾಡಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದನ್ನು ಕಂಡು ಗಾಂಧಿಗಳು ನಾಯಕತ್ವದ ಸ್ಥಾನಗಳಿಂದ ದೂರ ಸರಿಯಲು ಮತ್ತು ಇತರರಿಗೆ ಅವಕಾಶ ನೀಡುವ ಸಮಯ ಬಂದಿದೆ ಎಂದಿದ್ದ ಕಪಿಲ್ ಸಿಬಲ್ ವಿರುದ್ದ ಇತರ ಕಾಂಗ್ರೆಸ್ ಹರಿಹಾಯ್ದಿದ್ದರು. ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿಯೂ ” ಸತ್ಯ ಎಂದಿಗೂ ಕಹಿಯಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿಕೆಗೆ ಸ್ವಪಕ್ಷೀಯ ನಾಯಕರು ವಿರೋಧಿಸುತ್ತಿದ್ದಾರೆ.ಈ ವಿರೋಧ ಗಮನಿಸಿದಾಗ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಎನ್ನುವುದು ನಿರ್ಜೀವ ಅವಸ್ಥೆಯಲ್ಲಿದೆ, ಗುಲಾಮಗಿರಿ ಮಾತ್ರ ಉಳಿದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ” ಎಂದು ಕುಹಕವಾಡಿದೆ.
ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿಯೂ ” ಚುನಾವಣೆಯಲ್ಲಿ ಸೋಲು ಕಂಡ ಪಂಚರಾಜ್ಯಗಳ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.ಆದರೆ ಸೋಲಿನ ನೈತಿಕ ಹೊಣೆ ಸೋನಿಯಾ ಗಾಂಧಿ ಅವರಿಗೆ ಅನ್ವಯವಾಗುವುದಿಲ್ಲವೇ ? ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ರಾಜಕೀಯ ನಿವೃತ್ತಿ ಯಾವತ್ತು ” ಎಂದು ಪ್ರಶ್ನಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist