ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರದ ಗದ್ದುಗೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದ್ದು, ಮೇಯರ್ ಆಗಿ 34ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಆಗಿ 37ನೇ ವಾರ್ಡ್ನ ಮಾಲನ್ ಬೀ ಆಯ್ಕೆಯಾಗಿದ್ದಾರೆ.
ಪಾಲಿಕೆಯ ಒಟ್ಟು 39 ವಾರ್ಡ್ಗಳಲ್ಲಿ ಕಾಂಗ್ರೆಸ್ 21, ಬಿಜೆಪಿಯ 13, ಐವರು ಪಕ್ಷೇತರ ಸದಸ್ಯರು ಗೆಲುವು ಸಾಧಿಸಿದ್ದರು. ಪಾಲಿಕೆ ಚುನಾವಣೆ ನಡೆದು 11 ತಿಂಗಳಾದರೂ ಮೇಯರ್, ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಎರಡು ಬಾರಿ ಮೇಯರ್, ಉಪಮೇಯರ್ ಆಯ್ಕೆ ಚುನಾವಣೆ ಮುಂದೂಡಿಕೆಯಾಗಿತ್ತು. ಇದೀಗ ಬದಲಾದ ಮೀಸಲಾತಿಯೊಂದಿಗೆ ಮೇಯರ್ ಮತ್ತು ಉಪಮೇಯರ್ ಸೇರಿ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಿತು.
ಕಾಂಗ್ರೆಸ್ನಿಂದ ಮೇಯರ್ ಸ್ಥಾನಕ್ಕೆ ರಾಜೇಶ್ವರಿ, ಉಪಮೇಯರ್ ಸ್ಥಾನಕ್ಕೆ ಮಾಲನ್ ಬೀ ಹಾಗೂ ಬಿಜೆಪಿಯಿಂದ ಮೇಯರ್ ಹುದ್ದೆಗೆ ಸುರೇಖಾ ಮಲ್ಲನಗೌಡ, ಉಪಮೇಯರ್ ಹುದ್ದೆಗೆ ಗೋವಿಂದರಾಜಲು ನಾಮಪತ್ರ ಸಲ್ಲಿಸಿದ್ದರು.
ಪಕ್ಷದ 21 ಸದಸ್ಯರು ಹಾಗೂ ಐವರು ಪಕ್ಷೇತರ ಸದಸ್ಯರೊಂದಿಗೆ ಪಾಲಿಕೆಯ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist