ದೆಹಲಿ: ಪಂಜಾಬ್ನಲ್ಲಿ ನಿರ್ಣಾಯಕ ಜಯಗಳಿಸಿ ದೇಶದ ಗಮನ ಸೆಳೆದ ಆಮ್ ಆದ್ಮಿ ಪಕ್ಷ (Aam Admi Party – AAP) ಇದೀಗ ಛತ್ತೀಸಗಡದಲ್ಲಿಯೂ ಹೆಜ್ಜೆಗುರುತು ಮೂಡಿಸಲು ಪರಿಶ್ರಮ ಹಾಕುತ್ತಿದೆ. ಬುಡಕಟ್ಟು ಜನರೇ ಬಹುಸಂಖ್ಯೆಯಲ್ಲಿರುವ ಛತ್ತೀಸಗಡದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಪ್ ನಾಯಕ ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಆಪ್ ಪಕ್ಷದ ಉನ್ನತ ನಾಯಕ ಮತ್ತು ದೆಹಲಿ ಸರ್ಕಾರದಲ್ಲಿ ಪರಿಸರ ಖಾತೆ ಸಚಿವರಾಗಿರುವ ಗೋಪಾಲ್ ರೈ ಭಾನುವಾರ ಛತ್ತೀಸಗಡಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಚುನಾವಣೆ ಸಿದ್ಧತೆ ಪ್ರಯತ್ನಗಳಿಗೆ ಈ ಭೇಟಿ ಚಾಲನೆ ನೀಡಲಿದೆ. ಛತ್ತೀಸಗಡದಲ್ಲಿ ಪ್ರಸ್ತುತ ಕಾಂಗ್ರೆಸ್ ಆಡಳಿತವಿದೆ. ಆಪ್ ಪಕ್ಷದ ಪೂರ್ವಾಂಚಲ ಘಟಕದ ಉಸ್ತುವಾರಿ ಮತ್ತು ಬುರಾರಿ ಕ್ಷೇತ್ರದ ಶಾಸಕ ಸಂಜೀವ್ ಝಾ ಛತ್ತೀಸಗಡದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಅವರೂ ಸಹ ಗೋಪಾಲ್ ರೈ ಅವರೊಂದಿಗೆ ಛತ್ತೀಸಗಡಕ್ಕೆ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದ ಸಂಘಟನೆಗೆ ಹೆಚ್ಚಿನ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ಹಿಮಾಚಲ ಪ್ರದೇಶದಲ್ಲಿ ಮುಂದಿನ ಆರು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಆಮ್ ಆದ್ಮಿ ಪಕ್ಷ ರಾಜ್ಯದ ಮೇಲೆ ದೃಷ್ಟಿ ನೆಟ್ಟಿದೆ ಎನ್ನಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist