ಉಡುಪಿ : ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದ್ರ ನಗರ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸ್ಫೋಟಗೊಂಡಿದ್ದರಿಂದ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ ಹಾಗೂ, ಮೂವರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಫ್ರಿಡ್ಜ್ ಸೇರಿದಂತೆ ಗುಜರಿ ಸಾಮಾಗ್ರಿಗಳು ಬೆಂಕಿಯ ಸ್ಫೋಟಕ್ಕೆ ಸಿಲುಕಿ ಕರಕಲಾಗಿದ್ದು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಸಿತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist