
ಫ್ಲಿಪ್ಕಾರ್ಟ್ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಪೋಕೋ X4 ಪ್ರೊ 5G ಸೇಲ್ ಆರಂಭವಾಗಿದೆ. ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನನ್ನು ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್ನಲ್ಲಿ ನಿಮ್ಮದಾಗಿಸಬಹುದು.
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸಾಕಷ್ಟು ಸದ್ದು ಮಾಡುತ್ತಿರುವ ಪೋಕೋ (Poco) ಸಂಸ್ಥೆಯ ಹೊಸ ಪೋಕೋ ಎಕ್ಸ್4 ಪ್ರೊ 5G (Poco X4 Pro 5G) ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ವರ್ಷದ ಆರಂಭದಲ್ಲಿ ನಡೆದಿದ್ದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC 2022) ನಲ್ಲಿ ಈ ಫೋನ್ ಜಾಗತೀಕವಾಗಿ ಬಿಡುಗಡೆಗೊಳಿಸಲಾಗಿತ್ತು. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ, 67W ಅತ್ಯಂತ ವೇಗವಾಗಿ ಚಾರ್ಜ್ ಆಗಲಿದ್ದು ಆಕರ್ಷಕ ಕ್ಯಾಮೆರಾದಿಂದ ಈ ಫೋನ್ ಕೂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಪೋಕೋ X4 ಪ್ರೊ 5G ಸೇಲ್ ಆರಂಭವಾಗಿದೆ. ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನನ್ನು ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್ನಲ್ಲಿ ನಿಮ್ಮದಾಗಿಸಬಹುದು.
ಬೆಲೆ-ಆಫರ್ ಏನು?:
ಭಾರತದಲ್ಲಿ ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್ ಒಟ್ಟು ಮೂರು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999 ರೂ. ನಿಗದಿ ಮಾಡಲಾಗಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999 ರೂ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವು 21,999 ರೂಪಾಯಿಗೆ ಖರೀದಿಗೆ ಸಿಗಲಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಏಪ್ರಿಲ್ 5, 2022 ರಿಂದ ಮಾರಾಟ ಕಾಣಲಿದೆ. ಆ ದಿನ HDFC ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡಿದರೆ 1,000 ರೂಪಾಯಿ ರಿಯಾಯಿತಿ ದೊರೆಯಲಿದೆ. ನಿಮ್ಮ ಬಳಿ ಹಳೆಯ ಪೋಕೋ ಫೋನ್ಗಳಿದ್ದರೆ ಅದಕ್ಕೆ 3,000 ರೂ. ವರೆಗೆ ಎಕ್ಸ್ಚೇಂಜ್ ಆಫರ್ ಘೋಷಿಸಲಾಗಿದೆ.
ಏನು ವಿಶೇಷತೆ?:
ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ< ಹಾಟ್‌ಸ್ಪಾಟ್, ಡ್ಯುಯಲ್ ಸ್ಪೀಕರ್, 3.5mm ಹೆಡ್‌ಫೋನ್ ಜ್ಯಾಕ್ ಹಾಗೂ ಹೈ-ರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿದೆ. ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನ್ಗಳ ಸಾಲಿಗೆ ಸೇರಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist