ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು.ಇದಕ್ಕೂ ಮುನ್ನ ದಿನವಿಡೀ ಪಾಕಿಸ್ತಾನದಲ್ಲಿ ಹೈಡ್ರಾಮವೇ ನಡೆದಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲು ಸ್ಪೀಕರ್ ನಿರಾಕರಿಸಿದರು. ಅದೇ ವೇಳೆ, ಸ್ಪೀಕರ್ ಕ್ರಮದಿಂದ ಸಿಟ್ಟಿಗೆದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾತ್ರೋರಾತ್ರಿ ಕಲಾಪ ಆರಂಭಿಸಿ, ಸ್ಪೀಕರ್ ಹಾಗೂ ಪ್ರಧಾನಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲು ಮುಂದಾದರು. ಸಿಜೆ ನೇತೃತ್ವದ ಪಂಚ ಸದಸ್ಯರ ಪೀಠದ ಆದೇಶದಂತೆ ಶನಿವಾರ ಅವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕಬೇಕಿತ್ತು. ಅದರಂತೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಅಸೆಂಬ್ಲಿ ಕಲಾಪ ಆರಂಭವಾಯಿತು. ಪ್ರತಿಪಕ್ಷ ನಾಯಕ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಸ್ಪೀಕರ್ ಅಸಾದ್ ಕ್ವೈಸಾರ್ ಮತ ಹಾಕಲು ನಿರಾಕರಿಸಿದರು. ಹಲವು ಸಲ ಕಲಾಪ ಮುಂದೂಡಲಾಯಿತಾದರೂ, ಇಫ್ತಿಹಾರ್ ಭೋಜನದ ಬಳಿಕ ರಾತ್ರಿ 10.30ಕ್ಕೆ ಕಲಾಪ ಆರಂಭಿಸಲು ನಿರ್ಧರಿಸಲಾಯಿತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist