ನಿನ್ನೆ ತಡರಾತ್ರಿ ಮಣಿಪಾಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದು ಬೈಕ್ ಹಾಗೂ ಮೂರು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ತಡರಾತ್ರಿ ಮಣಿಪಾಲ ಡಿಸಿ ಆಫಿಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಒಂದು ಇನ್ನೊವಾ, ಒಂದು ಹುಂಡೈ ವೆರ್ನಾ, ಒಂದು ಎಕ್ಸ್‌ಯು ವಿ ಕಾರು ಮತ್ತು ಒಂದು ಮೋಟಾರ್ ಬೈಕ್ ನಜ್ಜುಗುಜ್ಜಾಗಿದೆ.
ಮೂಲಗಳ ಪ್ರಕಾರ ಮಣಿಪಾಲದ ಪೋಲಾರ್ ಬೇರ್ ಬಳಿ ಇರುವ ಡಿವೈಡರ್ ನಲ್ಲಿ ಓರ್ವ ಬುಲೆಟ್ ಬೈಕ್ ಸವಾರ ಒಮ್ಮೆಲೇ ಯೂ ಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇನ್ನೋವಾ ಕಾರು ರಸ್ತೆ ಬದಿಯಲ್ಲಿರುವ ಮನೆಯ ಎದುರಿನ ಚರಂಡಿಗೆ ಉರುಳಿ ಬಿದ್ದಿದೆ. ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರ ಸಹಪಾಠಿಗಳು ಮತ್ತೊಂದು ಎಕ್ಸ ಯು ವಿ ಕಾರು ಮತ್ತು ಬೈಕ್ ನಲ್ಲಿ ಸ್ಥಳಕ್ಕೆ ಆಗಮಿಸಿ ತಮ್ಮ ಕಾರು ಹಾಗೂ ಬೈಕ್ ಅನ್ನು ರಸ್ತೆ ಪಕ್ಕ ನಿಲ್ಲಿಸಿದ್ದರು. ಇದೇ ಸಂಧರ್ಭದಲ್ಲಿ ಅತಿವೇಗದಿಂದ ಆಗಮಿಸಿದ ಹುಂಡೈ ವೆರ್ನಾ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ತಡೆಗೋಡೆ ಗೆ ಹೊಡೆದು, ರಸ್ತೆ ಪಕ್ಕ ನಿಲ್ಲಿಸಿದ್ದ ಎಕ್ಸ್ ಯು ವಿ ಕಾರು ಮತ್ತು ಬೈಕ್ ನ ಮೇಲೇರಿ ನಿಂತಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದಾಗಿ ರಸ್ತೆ ಬದಿಯಲ್ಲಿರುವ ಮೂರು ಮನೆಗಳ ತಡೆಗೋಡೆಗಳಿಗೆ ಕೂಡಾ ಹಾನಿಯಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist