ಬೆಂಗಳೂರು: ಧ್ವನಿವರ್ಧಕ (Loudspeaker) ಶಬ್ದ ಮಾಲಿನ್ಯ ತಡೆಗೆ ನಿನ್ನೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ (Anand Singh) ಹೇಳಿದ್ದಾರೆ. ಪರಿಸರ ಇಲಾಖೆ ಸೆಕ್ಷನ್ 19ರ ಪ್ರಕಾರ ಕ್ರಮ ಕೈಗೊಳ್ಳಲಿದ್ದೇವೆ. ನಿಯಮ ಉಲ್ಲಘಿಸಿದರೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಶಬ್ದದ ಪ್ರಮಾಣ ಪರಿಶೀಲನೆಗೆ ಡೆಸಿಬಲ್ ಡಿವೈಸ್ ಮಷೀನ್ ಬಳಸಲಿದ್ದು, ಸದ್ಯ 190 ಡೆಸಿಬಲ್ ಡಿವೈಸ್ ಮಷೀನ್ (Decibel Device machine) ಖರೀದಿ ಮಾಡಿದ್ದೇವೆ. ಡೆಸಿಬಲ್ ಡಿವೈಸ್ ಮಷೀನ್ಗಳನ್ನು ಆರ್ಒಗಳಿಗೆ ನೀಡಲಾಗಿದೆ.ಇಲಾಖೆಯ ಆರ್ಒಗಳು ಸ್ಥಳಗಳಿಗೆ ಹೋಗಿ ಮಹಜರು ಮಾಡುತ್ತಾರೆ. ಅವರು ಕೇವಲ ಮಂದಿರ, ಮಸೀದಿ, ಚರ್ಚ್ಗಳಿಗೆ ಮಾತ್ರ ಭೇಟಿ ನೀಡಲ್ಲ. ಸಾರ್ವಜನಿಕ ಕಾರ್ಯಕ್ರಮಗಳ ಸ್ಥಳಗಳಿಗೂ ಭೇಟಿ ನೀಡುತ್ತಾರೆ. ನಿಗದಿಗಿಂತ ಧ್ವನಿವರ್ಧಕದ ಶಬ್ದದ ಪ್ರಮಾಣ ಮಿತಿ ಮೀರಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಆನಂದ್ ಸಿಂಗ್ ಹೇಳಿದ್ದಾರೆ.
ಅಜಾನ್ ವಿರುದ್ಧ ಹನುಮಾನ್ ಚಾಲೀಸಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸುವ ನಿರ್ದೇಶನಗಳ ಭಾಗವಾಗಿ 15 ದಿನಗಳಲ್ಲಿ ಅಧಿಕಾರಿಗಳಿಂದ ಲಿಖಿತ ಅನುಮತಿಯನ್ನು ಪಡೆಯಲು “ಧ್ವನಿ-ಉತ್ಪಾದಿಸುವ ಉಪಕರಣಗಳ” ಎಲ್ಲಾ ಬಳಕೆದಾರರನ್ನು ಸರ್ಕಾರ ಕೇಳಿದೆ.
“ಒಂದು ಧ್ವನಿವರ್ಧಕ ಅಥವಾ ಲೌಡ್ ಸ್ಪೀಕರ್ ರಾತ್ರಿಯಲ್ಲಿ (ರಾತ್ರಿ 10.00 ರಿಂದ ಬೆಳಗ್ಗೆ 6.00 ರ ನಡುವೆ) ಸಂವಹನಕ್ಕಾಗಿ ಮುಚ್ಚಿದ ಆವರಣಗಳನ್ನು ಹೊರತುಪಡಿಸಿ ಬೇರೆಲ್ಲೂ ಬಳಸಬಾರದು” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. “ಅನುಮತಿ ಪಡೆಯದವರು, ಸ್ವಯಂಪ್ರೇರಣೆಯಿಂದ ಧ್ವನಿವರ್ಧಕಗಳು ಮತ್ತು ಧ್ವನಿ-ಉತ್ಪಾದಿಸುವ ಉಪಕರಣಗಳನ್ನು ತೆಗೆದುಹಾಕಬೇಕು. ಇಲ್ಲವೇ ನೀಡಲಾದ ಗಡುವಿನಿಂದ 15 ದಿನಗಳಲ್ಲಿ ಗೊತ್ತುಪಡಿಸಿದ ಪ್ರಾಧಿಕಾರದಿಂದ ಅದನ್ನು ತೆಗೆದುಹಾಕಲಾಗುತ್ತದೆ” ಎಂದು ಸುತ್ತೋಲೆಯಲ್ಲಿ ಹೇಳಿದೆ.
ಅಧಿಸೂಚನೆಯು 2002 ರ ಸರ್ಕಾರಿ ಆದೇಶವನ್ನು ಉಲ್ಲೇಖಿಸಿದ್ದು, ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಜವಾಬ್ದಾರಿಯಾಗಿ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist