ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದೆ

Twitter
Facebook
LinkedIn
WhatsApp
ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದೆ

ಜೈಪುರ:  ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ಮುರಿದಿದ್ದಾರೆ. ‘ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕು. ಬಿಜೆಪಿ ಎಲ್ಲ ಭಾರತೀಯ ಭಾಷೆಗಳನ್ನು ‘ಭಾರತೀಯತೆಯ ಆತ್ಮ’ ಎಂದು ಪರಿಗಣಿಸುತ್ತದೆ’ ಎಂದಿದ್ದಾರೆ.

ಈ ಮೂಲಕ ಹಿಂದಿ ಹೇರಿಕೆ ಆರೋಪ ಮಾಡುತ್ತಿರುವ ಪಕ್ಷಗಳು ಹಾಗೂ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಪದಾಧಿಕಾರಿಗಳ ಸಮ್ಮೇಳನವನ್ನು ವರ್ಚುವಲ್‌ ರೂಪದಲ್ಲಿ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ‘ಇಡೀ ದೇಶದ ಸಾಂಸ್ಕೃತಿಕ ಹಾಗೂ ಭಾಷಾ ವೈವಿಧ್ಯತೆಯನ್ನು ರಾಷ್ಟ್ರೀಯ ಅಸ್ಮಿತೆಯೊಂದಿಗೆ ಬಿಜೆಪಿ ಒಗ್ಗೂಡಿಸಿದೆ’ ಎಂದು ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಇದು ಸ್ಥಳೀಯ ಭಾಷೆಗಳ ಬಗ್ಗೆ ಬಿಜೆಪಿ ಹೊಂದಿರುವ ಬದ್ಧತೆಯ ದ್ಯೋತಕ. ಬಿಜೆಪಿ ಎಲ್ಲ ಭಾರತೀಯ ಭಾಷೆಗಳನ್ನೂ ಭಾರತೀಯತೆಯ ಆತ್ಮ ಎಂದು ಪರಿಗಣಿಸುತ್ತದೆ. ದೇಶದ ಉತ್ತಮ ಭವಿಷ್ಯಕ್ಕೆ ದೇಶದ ಭಾಷೆಗಳು ಕೊಂಡಿ’ ಎಂದು ಹೇಳಿದರು.

ಇತ್ತೀಚೆಗೆ ಅಧಿಕೃತ ಭಾಷಾ ಸಂಸದೀಯ ಸಮಿತಿ ಅಧ್ಯಕ್ಷರೂ ಆದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ‘ಕೇಂದ್ರ ಸರ್ಕಾರ ಶೇ.70ರಷ್ಟುವ್ಯವಹಾರವನ್ನು ಹಿಂದಿಯಲ್ಲೇ ನಡೆಸುತ್ತದೆ. ಹೀಗಾಗಿ ಇಂಗ್ಲಿಷ್‌ ಬದಲಾಗಿ ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬಹುದು’ ಎಂದು ಹೇಳಿದ್ದರು. ಆದರೆ, ‘ಇತರ ಭಾರತೀಯ ಭಾಷೆಗಳಿಗೆ ಹಿಂದಿಯನ್ನು ಪರ್ಯಾಯವಾಗಿ ಬಳಸಬಾರದು’ ಎಂದು ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ, ನಟ ಅಜಯ್‌ ದೇವಗನ್‌ ಅವರು, ‘ಹಿಂದಿ ಭಾರತದ ರಾಷ್ಟ್ರೀಯ ಭಾಷೆ’ ಎಂದಿದ್ದರು. ಇದು ವಿವಾದ ಹುಟ್ಟುಹಾಕಿತ್ತು ಹಾಗೂ ಹಿಂದಿಯನ್ನು ಅಷ್ಟಾಗಿ ಇಷ್ಟಪಡದ ದಕ್ಷಿಣ ರಾಜ್ಯಗಳ ರಾಜಕಾರಣಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

‘ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಾರೆ’ ಎಂದ ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್‌ಮುಡಿ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನ ಭಾರತೀಯಾರ್‌ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಈಗಾಗಲೇ ದ್ವಿಭಾಷಾ ಪದ್ಧತಿ ಜಾರಿಯಲ್ಲಿದೆ. ಇಂಗ್ಲೀಷ್‌ ಅಂತಾರಾಷ್ಟ್ರೀಯ ಭಾಷೆಯಾದರೆ ತಮಿಳು ಸ್ಥಳೀಯ ಭಾಷೆಯಾಗಿದೆ. ಇಲ್ಲಿ ಹಿಂದಿ ಕಲಿಕೆಯ ಅಗತ್ಯವೇನಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಹಿಂದಿ ಕಲಿತರೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುತ್ತವೆಂದು ಹೇಳುತ್ತಾರೆ. ಹೋಗಿ ಕೊಯಮತ್ತೂರಿನಲ್ಲಿ ಒಮ್ಮೆ ನೋಡಿ. ಹಿಂದಿ ಮಾತನಾಡುವವರು ಇಲ್ಲಿ ಪಾನಿಪುರಿ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ. ‘ತಮಿಳುನಾಡಿನ ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲೂ ಸಿದ್ಧರಾಗಿದ್ದಾರೆ ಎಂದರು..

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ