
ಸಿಂಧುದುರ್ಗ(ಮಹಾರಾಷ್ಟ್ರ) : 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೇ, ನಾಲ್ವರು ಪ್ರವಾಸಿಗರ ಸ್ಥಿತಿ ಚಿಂತಾಜನಕವಾಗಿದ್ದು, ಮಾಲ್ವಾನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ಮಾಲ್ವಾನ್ ತರ್ಕರ್ಲಿ ಬೀಚ್ನಲ್ಲಿ ಪ್ರವಾಸಿಗರು ಸ್ಕೂಬಾ ಡೈವಿಂಗ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ದೋಣಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ತಕ್ಷಣವೇ ಧಾವಿಸಿ 20 ಪ್ರವಾಸಿಗರ ಪೈಕಿ 18 ಪ್ರವಾಸಿಗರನ್ನು ರಕ್ಷಿಸಲಾಗಿದೆ. ಇದರಲ್ಲಿ 14 ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಭಾರಿ ಗಾಳಿಯಿಂದಾಗಿ ದೋಣಿ ನೀರಿನಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದಲ್ಲಿ ಸಿಂಧುದುರ್ಗ ಜಿಲ್ಲೆಯಲ್ಲಿ ದೋಣಿ ಮುಳುಗಡೆ
ಈ ಬಗ್ಗೆ ಮಾಹಿತಿ ಪಡೆದ ಮಾಲ್ವಾನ್ ಪೊಲೀಸರು ಸ್ಥಳಕ್ಕೆ ಬಂದು ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ಕೆಟ್ಟ ವಾತಾವರಣ ಮತ್ತು ಗಾಳಿಯಿಂದಾಗಿ ಪ್ರಸ್ತುತ ಸ್ಕೂಬಾ ಡೈವಿಂಗ್ ನಿಷೇಧಿಸಲಾಗಿದೆ. ಆದರೂ, ಸ್ಕೂಬಾ ಡೈವಿಂಗ್‌ಗಾಗಿ ಸಮುದ್ರಕ್ಕೆ ಪ್ರವಾಸಿಗರನ್ನು ಕರೆದೊಯ್ದ ದೋಣಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist