![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಂಗಳೂರು: ಸುರತ್ಕಲ್ ಸಹಿತ ಹಲವೆಡೆ ಸಮುದ್ರ ಮಾಲಿನ್ಯ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ)ದ ಪ್ರಧಾನ ಪೀಠವು, ಮಾಲಿನ್ಯದ ಮೂಲ ಪತ್ತೆ ಹಚ್ಚಲು ಜಂಟಿ ಸಮಿತಿಯೊಂದನ್ನು ರಚಿಸಿದೆ.
ಎನ್ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯಲ್, ಸದಸ್ಯರಾದ ಸುಧೀರ್ ಅಗರ್ವಾಲ್, ತಜ್ಞ ಸದಸ್ಯ ಎ. ಸೆಂಥಿಲ್ವೇಲ್ ಅವರನ್ನು ಒಳಗೊಂಡ ಪೀಠ ಈ ಸಮಿತಿ ರಚಿಸಿದೆ. ಸುರತ್ಕಲ್ ಗುಡ್ಡೆಕೊಪ್ಲ ಬಳಿ ಸಮುದ್ರದಲ್ಲಿ ಜಿಡ್ಡಾದ ವಸ್ತು ತೇಲಿ ಬಂದಿದ್ದು, ಟಾರಿನ ಉಂಡೆಗಳೂ ದೊರಕಿದ್ದವು. ತಣ್ಣೀರುಬಾವಿಯ ಬಳಿ ಕೆಲವು ಮೀನುಗಾರರು ತಾವು ಫಲ್ಗುಣಿ ನದಿಯಲ್ಲಿ ಬೆಳೆಸಿದ್ದ ಪಂಜರ ಕೃಷಿಯ ಮೀನುಗಳು ಸಾವ್ನಪ್ಪಿರುವ ಬಗ್ಗೆ ದೂರಿದ್ದರು. ಇವೆಲ್ಲವನ್ನೂ ಪರಿಗಣಿಸಿರುವ ಎನ್ಜಿಟಿ, ಸಮಿತಿಯನ್ನು ರಚಿಸಿದೆ.
ಸಮಿತಿಯು ಎರಡು ವಾರದೊಳಗೆ ಸಭೆ ಸೇರಿ ಸ್ಥಳ ಸಮೀಕ್ಷೆ, ಅಧ್ಯಯನ ನಡೆಸಬೇಕು. ಸ್ಥಳೀಯರೊಂದಿಗೆ ಮಾತುಕತೆ ನಡೆಸಬೇಕು. ಎರಡು ತಿಂಗಳೊಳಗೆ ಎನ್ಜಿಟಿಗೆ ವರದಿ ನೀಡಬೇಕು ಎಂದು ತಿಳಿಸಲಾಗಿದೆ.
ಕೇಂದ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಧಿಕಾರಿ, ಕೋಸ್ಟ್ಗಾರ್ಡ್ನ ಮಂಗಳೂರು ಘಟಕ, ಕೇಂದ್ರೀಯ ಮೀನು ಸಂಶೋಧನಾ ಸಂಸ್ಥೆ ಹಾಗೂ ಚೆನ್ನೈನ ಸಾಗರ ಅಭಿವೃದ್ಧಿ ವಿಭಾಗದ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ತನಿಖೆಗೆ ನೋಡಲ್ ಏಜೆನ್ಸಿಯಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist