ಅಹಮದಾಬಾದ್(ಮೇ.29): ಬಹುನಿರೀಕ್ಷಿತ 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಸೆಣಸಾಟ ನಡೆಸಲಿವೆ.
ಈ ಮಹತ್ವದ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸ್ಟೇಡಿಯಂಗೆ ಬಂದು ಪಂದ್ಯ ವೀಕ್ಷಿಸಲಿದ್ದಾರೆ. ಈ ಕಾರಣಕ್ಕಾಗಿ ಮೈದಾನದ ಸುತ್ತ ಮತ್ತಷ್ಟು ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ವರದಿಯಾಗಿದೆ. ಐಪಿಎಲ್ ಪಂದ್ಯವನ್ನು ಪ್ರಧಾನಿ ಮೋದಿ, ಅಮಿತ್ ಶಾ ಮಾತ್ರವಲ್ಲದೇ, ಹಲವು ಬಾಲಿವುಡ್ ಸಿನಿ ತಾರೆಯರು ಹಾಗೂ ಗಣ್ಯರು ಫೈನಲ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಸುಮಾರು 6 ಸಾವಿರಕ್ಕೂ ಅಧಿಕ ರಕ್ಷಣಾ ಸಿಬ್ಬಂದಿ ಸ್ಟೇಡಿಯಂ ಸುತ್ತ ಬಿಗಿ ಬಂದೋಬಸ್ತ್ ವಹಿಸಿದ್ದಾರೆ
ಸದ್ಯದ ಮಾಹಿತಿಯ ಪ್ರಕಾರ 17 ಡಿಸಿಪಿಗಳು, 4 ಡಿಐಜಿಎಸ್, 28 ಎಸಿಪಿ, 51 ಪೊಲೀಸ್ ಇನ್ಸ್ಪೆಕ್ಟರ್, 268 ಸಬ್-ಇನ್ಸ್ಪೆಕ್ಟರ್ ಹಾಗೂ 5,000ಕ್ಕೂ ಅಧಿಕ ಪೇದೆಗಳು, 1000 ಪೇದೆಗಳು ಮತ್ತು ಮೂರು ಖಾಸಗಿ ಭದ್ರತಾ ಕಂಪನಿಯ ಸಿಬ್ಬಂದಿಗಳು ರಕ್ಷಣಾ ಜವಾಬ್ದಾರಿಯನ್ನು ವಹಿಸಿಕೊಂಡಿವೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?