ಚಂಡೀಗಢ: ಪಂಜಾಬ್ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾರನ್ನ ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಅವರ ಮೇಲೆ ದಾಳಿ ಮಾಡಿದವರನ್ನು ಬಿಡುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ. ಪ್ರಕರಣದಿಂದ ಪಂಜಾಬ್ ನಲ್ಲಿ ಕೋಲಾಹಲವೆದ್ದಿದ್ದು, ಎಲ್ಲರೂ ಶಾಂತವಾಗಿರುವಂತೆ ಸಿಎಂ ಮನವಿ ಮಾಡಿದ್ದಾರೆ.
“ಸಿಧು ಮೂಸೆವಾಲಾ ಅವರ ಭೀಕರ ಹತ್ಯೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ತೀವ್ರವಾಗಿ ದುಃಖಿತನಾಗಿದ್ದೇನೆ. ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತದ ಅವರ ಅಭಿಮಾನಿಗಳೊಂದಿಗೆ ಇವೆ. ನಾನು ಶಾಂತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಭಗವಂತಾ ಮಾನ್ ಟ್ವೀಟ್ ಮಾಡಿದ್ದಾರೆ.
ಸಿಧು ಮೂಸ್ ವಾಲಾ ಅವರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂತೆಗೆದುಕೊಂಡ ಒಂದು ದಿನದ ಬಳಿಕ ಪಂಜಾಬ್‌ನ ಮಾನ್ಸಾದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಗವಂತ್ ಮಾನ್ ಸರ್ಕಾರ ನಿನ್ನೆ 424 ಜನರ ಭದ್ರತೆಯನ್ನು ಹಿಂಪಡೆದಿತ್ತು.
ಸಿಧು ಮೂಸೆವಾಲಾರ ಭೀಕರ ಹತ್ಯೆ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಮತ್ತು ಅಪರಾಧಿಗಳು ಇನ್ನು ಮುಂದೆ ಕಾನೂನಿಗೆ ಹೆದರುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಘಟನೆಯನ್ನು “ಆಘಾತಕಾರಿ” ಎಂದು ಹೇಳಿದ ಅಮರೀಂದರ್ ಸಿಂಗ್, ಸಿಧು ಮೂಸೆವಾಲಾ ಅವರ ಕ್ರೂರ ಹತ್ಯೆ ಆಘಾತಕಾರಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲ. ಪಂಜಾಬ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪಂಜಾಬ್‌ನಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist