ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ಬೆಳಕಿಗೆ ಬಂದಿದ್ದು, ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ಈ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಸಾಂತ್ರಾ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು.
ಈ ವೇಳೆ ಸಂತ್ರಸ್ತ ಮೊಬೈಲ್‍ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿದ್ದಾನೆ. ಘಟನೆಯಲ್ಲಿ ಸಂತ್ರಸ್ತ ಸಾಂತ್ರಾನ ಮುಖ, ಎದೆ ಗಾಯವಾಗಿದ್ದು, ಶೇ.30ರಷ್ಟು ಸುಟ್ಟಿದೆ. ಸಂತ್ರಸ್ತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜನತಾ ಅದಕ್‍ನನ್ನು ಮೈಸೂರು ಬಳಿ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗಷ್ಟೇ ಯುವತಿ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿ ವಿಕೃತಿ ಮೆರೆದಿದ್ದ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಆಸಿಡ್ ದಾಳಿ ಮಾಡಿರುವ ದುರಂತ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿತ್ತು. 23 ವರ್ಷದ ಸಂತ್ರಸ್ಥೆಯ ಮೇಲೆ ಸುಂಕದಕಟ್ಟಯ ಮುತ್ತೂಟು ಫಿನ್‌ಕಾರ್ಪ್ ಬಳಿ ಹುಚ್ಚು ಪ್ರೇಮಿ ನಾಗೇಶ್ ಆಸಿಡ್ ದಾಳಿ ನಡೆಸಿದ್ದ. ನಾಗೇಶ್ ಯುವತಿಯನ್ನು ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಎಲ್ಲಿ ಹೋದರೂ ಹಿಂದೆ ಹಿಂದೆಯೇ ಸುತ್ತುತ್ತಿದ್ದ. ಹುಡುಗಿ ತನಗೆ ಇಷ್ಟವಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಕೇಳಲು ನಾಗೇಶ್ ಸಿದ್ಧನಿರಲಿಲ್ಲ. ಕಡೆಯಬಾರಿಗೆ ಪ್ರೀತಿಸುತ್ತೀಯಾ ಇಲ್ಲವಾ ಎಂದು ಧಮಕಿ ಹಾಕಿದ್ದಾನೆ, ಹುಡುಗಿ ನಿರಾಕರಿಸಿದಾಗ ಆಸಿಡ್ ಎರಚಿದ್ದಾನೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿವೆ.
ಯುವತಿ ಗುರುವಾರ ಬೆಳಗ್ಗೆ ಕಚೇರಿಗೆ ತೆರಳಲು ಮುತ್ತೂಟು ಫಿನ್‌ಕಾರ್ಪ್ ಬಳಿ ಹೋದಾಗ ವಿಕೃತ ಪ್ರೇಮಿ ನಾಗೇಶ್ ಈ ಕೃತ್ಯ ಎಸಗಿದ್ದ. ಸದ್ಯ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಇಂದು ಸಂತ್ರಸ್ಥೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ. ಘಟನೆಯ ಬಳಿಕ ನಾಗೇಶ್ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಹಲವು ವಿಶೇಷ ತಂಡಗಳನ್ನು ಸಹ ರಚಿಸಲಾಗಿತ್ತು. ಈ ಸಂಬಂಧ ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಸಿಡ್ ನಾಗನನ್ನು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು. ಕಾವಿ ಧರಿಸಿ ಸ್ವಾಮಿಯಂತೆ ನಾಟಕ ಮಾಡುತ್ತಾ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ. ಆದರೆ ಸುತ್ತಮುತ್ತಲ ಜನರಿಗೆ ಆತನ ವರ್ತನೆ ಮೇಲೆ ಸಂಶಯ ಬಂದು ಮಾಹಿತಿ ನೀಡಿದ್ದರು, ನಂತರ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋದಾಗ ಆತನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist