ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.
ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ.
ಅದೃಷ್ಟವಶಾತ್ ಘಟನೆ ವೇಳೆ ಬಸ್‌ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist