ಚೆನ್ನೈ(ಜೂ.02): ಬಹುನಿರೀಕ್ಷಿತ ಮಹಿಳಾ ಐಪಿಎಲ್ (Women’s IPL) ನಡೆಸಲು ಯೋಜನೆ ಹಾಕಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಉದ್ಘಾಟನಾ ಆವೃತ್ತಿಯನ್ನು 2023ರ ಮಾರ್ಚ್‌ನಲ್ಲಿ ಆಯೋಜಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವಾರ ಐಪಿಎಲ್ ಪ್ಲೇ-ಆಫ್ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಹಾಗೂ ಕಾರ‍್ಯದರ್ಶಿ ಜಯ್ ಶಾ (Jay Shah) ಈ ಬಗ್ಗೆ ಚರ್ಚೆ ನಡೆಸಿದ್ದು, ಮಾರ್ಚ್‌ನಲ್ಲಿ ಸಾಧ್ಯವಾಗದಿದ್ದರೆ 2023ರ ಸೆಪ್ಟಂಬರ್‌ನಲ್ಲಿ ಟೂರ್ನಿ ಆಯೋಜಿಸಲು ಎದುರು ನೋಡುತ್ತಿದ್ದಾರೆ. ಕ್ರಿಕೆಟ್ ಆಸ್ಪ್ರೇಲಿಯಾ (Cricket Australia) ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಈಗಾಗಲೇ ಮಾತುಕತೆ ನಡೆಸಿರುವ ಬಿಸಿಸಿಐ, ಶೀಘ್ರದಲ್ಲೇ ಐಸಿಸಿ ಜೊತೆ ಚರ್ಚೆ ನಡೆಸಲಿದೆ ಎಂದು ಗೊತ್ತಾಗಿದೆ.
2023ರ ಜುಲೈ-ನವೆಂಬರ್‌ನಲ್ಲಿ ಕೆರಿಬಿಯನ್ ಪ್ರೀಮಿಯರ್ ಲೀಗ್, ದ ಹಂಡ್ರೆಡ್, ಮಹಿಳಾ ಬಿಗ್‌ಬ್ಯಾಶ್ ಟೂರ್ನಿಗಳು ನಡೆಯಲಿದ್ದು, ಬಳಿಕ ಡಿಸೆಂಬರ್-ಫೆಬ್ರವರಿಯಲ್ಲಿ ಆಸ್ಪ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಆಟಗಾರ್ತಿಯರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಾಗಿ ಮಾರ್ಚ್‌ನಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್‌ನ ಕೋಲ್ಕತಾ ಹಾಗೂ ರಾಜಸ್ಥಾನ ಫ್ರಾಂಚೈಸಿಗಳು ತಂಡ ಖರೀದಿಸುವ ಆಸಕ್ತಿ ತೋರಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist