ಚೆನ್ನೈ: ಗರ್ಭಿಣಿಯರಿಗೆ ಸರ್ಕಾರದಿಂದ ನೀಡಲಾಗುವ ಪೌಷ್ಟಿಕಾಂಶವುಳ್ಳ ಆಹಾರ ವಿತರಣೆ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವುಂಟು ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸರ್ಕಾರ ಖಾಸಗಿ ಸಂಸ್ಥೆಯೊಂದರ ಜೊತೆ ಶಾಮೀಲಾಗಿ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್ಗಳನ್ನು ಒದಗಿಸುವ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿಯನ್ನು ಲಪಟಾಯಿಸಿದೆ ಎಂದು ಆರೋಪಿಸಿದೆ.
ಈ ಬಗ್ಗೆ ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಕೆ.ಅಣ್ಣಾಮಲೈ ಮಾತನಾಡಿ, ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡ ಖಾಸಗಿ ಸಂಸ್ಥೆಯು ಗರ್ಭಿಣಿಯರಿಗೆ ಪೌಷ್ಟಿಕಾಂಶದ ಕಿಟ್ ಅನ್ನು ಸರ್ಕಾರಿ ಏಜೆನ್ಸಿಗಳಿಗೆ ಹೋಲಿಸಿದರೆ ದ್ವಿಗುಣ ವೆಚ್ಚದಲ್ಲಿ ನೀಡಿದೆ. ಕಿಟ್ನ ಬೆಲೆ ಶೇ.60ರಷ್ಟು ಹೆಚ್ಚಾಗಿ ತೋರಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ದೂರಿದ್ದಾರೆ.
ಆರೋಗ್ಯ ಕಿಟ್ಗಳನ್ನು ಒದಗಿಸುವ ಗುತ್ತಿಗೆಯನ್ನು ರಾಜ್ಯ ಹಾಲು ಸಹಕಾರಿ ಆವಿನ್ಗೆ ಸರ್ಕಾರ ನೀಡಬೇಕೆಂದು ಅವರು ಒತ್ತಾಯಿಸಿದರು. ಈ ಕುರಿತು ಪಕ್ಷವು ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತದೆ ಎಂದು ಅವರು ಹೇಳಿದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?